ಕೆಕೆಆರ್ ಪ್ಲೇ ಆಫ್ ಕನಸಿಗೆ ತಣ್ಣೀರೆರಚಿದ ಶಾರುಖ್ ಖಾನ್; ವೆಂಕಟೇಶ್ ಐಯ್ಯರ್ ಅಬ್ಬರದ ಆಟ ವ್ಯರ್ಥ

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಹಂತ ಯು. ಎ. ಇಯಲ್ಲಿ ನಡೆಯುತ್ತಿದ್ದು, ಟೂರ್ನಿಯ 45ನೇ ಪಂದ್ಯ ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಅಕ್ಟೋಬರ್ 1ರ ಶುಕ್ರವಾರದಂದು ದುಬೈ ನಗರದ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು.

ಸೂರ್ಯಕುಮಾರ್ ಯಾದವ್ ಕೆಟ್ಟ ಫಾರ್ಮ್ ಬಗ್ಗೆ ಮೌನ ಮುರಿದ ಕೋಚ್ ಮಹೇಲಾ ಜಯವರ್ಧನೆಸೂರ್ಯಕುಮಾರ್ ಯಾದವ್ ಕೆಟ್ಟ ಫಾರ್ಮ್ ಬಗ್ಗೆ ಮೌನ ಮುರಿದ ಕೋಚ್ ಮಹೇಲಾ ಜಯವರ್ಧನೆ

ಹೀಗೆ ದುಬೈ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ಕೆ ಮಾಡಿಕೊಂಡು ಎದುರಾಳಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿ, ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 166 ರನ್‌ಗಳ ಗುರಿಯನ್ನು ನೀಡಿತ್ತು.

ಕೊಹ್ಲಿ ನಾಯಕತ್ವದ ವಿರುದ್ಧ ಅಶ್ವಿನ್ ಬಿಸಿಸಿಐಗೆ ದೂರು ನೀಡಿದ್ದು ನಿಜಾನಾ?; ಕೊನೆಗೂ ಮೌನ ಮುರಿದ ಅಶ್ವಿನ್ಕೊಹ್ಲಿ ನಾಯಕತ್ವದ ವಿರುದ್ಧ ಅಶ್ವಿನ್ ಬಿಸಿಸಿಐಗೆ ದೂರು ನೀಡಿದ್ದು ನಿಜಾನಾ?; ಕೊನೆಗೂ ಮೌನ ಮುರಿದ ಅಶ್ವಿನ್

ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 19.3 ಓವರ್‌ಗಳಲ್ಲಿ 168 ರನ್ ಗಳಿಸುವುದರ ಮೂಲಕ 5 ವಿಕೆಟ್‍ಗಳ ಜಯವನ್ನು ದಾಖಲಿಸಿ, ಪ್ಲೇ ಆಫ್ ಕನಸನ್ನು ಕಾಣುತ್ತಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ. ಇನ್ನೇನು ಪಂದ್ಯ ಪಂಜಾಬ್ ಕಿಂಗ್ಸ್ ತಂಡದ ಕೈತಪ್ಪಲಿದೆ ಎನ್ನುವಾಗ 9 ಎಸೆತಗಳಲ್ಲಿ ಅಜೇಯ 22 ರನ್ ಚಚ್ಚಿದ ಪಂಜಾಬ್ ಕಿಂಗ್ಸ್ ತಂಡದ ಶಾರುಖ್ ಖಾನ್ ಪಂಜಾಬ್ ಕಿಂಗ್ಸ್ ತಂಡವನ್ನು ಗೆಲುವಿನ ದಡ ಸೇರಿಸಿದರು.

ಪಂಜಾಬ್ ಕಿಂಗ್ಸ್ ಇನ್ನಿಂಗ್ಸ್

ಪಂಜಾಬ್ ಕಿಂಗ್ಸ್ ಇನ್ನಿಂಗ್ಸ್

ಕೋಲ್ಕತಾ ನೈಟ್ ರೈಡರ್ಸ್ ತಂಡ ನೀಡಿದ್ದ 166 ರನ್‌ಗಳ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ 70 ರನ್‌ಗಳ ಜತೆಯಾಟವನ್ನಾಡುವುದರ ಮೂಲಕ ಉತ್ತಮ ಆರಂಭ ನೀಡಿದರು. ಮಯಾಂಕ್ ಅಗರ್ವಾಲ್ 27 ಎಸೆತಗಳಲ್ಲಿ 40 ರನ್ ಬಾರಿಸಿದರೆ, ಅಂತಿಮ ಹಂತದವರೆಗೂ ಹೋರಾಟ ನಡೆಸಿದ ನಾಯಕ ಕೆಎಲ್ ರಾಹುಲ್ 67 ರನ್ ಕಲೆ ಹಾಕಿದರು. ಇನ್ನುಳಿದಂತೆ ನಿಕೋಲಸ್ ಪೂರನ್ 12, ಏಡನ್ ಮಾರ್ಕ್ರಾಮ್ ಮಾರ್ಕ್ 18 ಮತ್ತು ದೀಪಕ್ ಹೂಡಾ 3 ಗಳಿಸಿ ಪೆವಿಲಿಯನ್ ಸೇರಿಕೊಂಡರು. ಹೀಗೆ ಪಂಜಾಬ್ ಕಿಂಗ್ಸ್ ತಂಡ ಉತ್ತಮ ಆರಂಭವನ್ನು ಪಡೆದುಕೊಂಡರೂ ಸಹ ಕೊನೆಯ ಓವರ್‌ಗಳಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡುವುದರ ಮೂಲಕ ಪಂದ್ಯವನ್ನು ಕೈ ತಪ್ಪಿಸಿಕೊಳ್ಳುವುದರ ಹಂತದಲ್ಲಿತ್ತು. ಈ ಸಂದರ್ಭದಲ್ಲಿ ಅಬ್ಬರಿಸಿದ ಪಂಜಾಬ್ ಕಿಂಗ್ಸ್ ತಂಡದ ಶಾರುಖ್ ಖಾನ್ 9 ಎಸೆತಗಳಲ್ಲಿ ಅಜೇಯ 22 ರನ್ ಬಾರಿಸಿದರು. ವೆಂಕಟೇಶ್ ಐಯ್ಯರ್ ಎಸೆದ 20ನೇ ಓವರ್‌ನ ಎರಡನೇ ಎಸೆತದಲ್ಲಿ ಕೆಎಲ್ ರಾಹುಲ್ ವಿಕೆಟ್ ಪಡೆದ ನಂತರ ಪಂದ್ಯ ತಿರುವು ಪಡೆದುಕೊಳ್ಳಲಿದೆ ಎಂಬ ನಿರೀಕ್ಷೆಯಿತ್ತು. ಆದರೆ ನಾನ್ ಸ್ಟ್ರೈಕ್ ಎಂಡ್‌ನಲ್ಲಿದ್ದ ಶಾರುಖ್ ಖಾನ್ ಕೆಎಲ್ ರಾಹುಲ್ ಕ್ಯಾಚ್ ಔಟ್ ಆದ ಕಾರಣ ಸ್ಕ್ರೀಜ಼್ ಬದಲಿಸಿದ್ದರು. ಹೀಗೆ 4 ಎಸೆತಗಳಲ್ಲಿ 4 ರನ್ ಬೇಕಾಗಿದ್ದಾಗ ಶಾರುಖ್ ಖಾನ್ ಅಬ್ಬರದ ಸಿಕ್ಸರ್ ಬಾರಿಸುವುದರ ಮೂಲಕ 3 ಎಸೆತಗಳು ಬಾಕಿ ಇರುವಾಗಲೇ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲುವನ್ನು ತಂದುಕೊಟ್ಟರು.

ಪಂಜಾಬ್ ಕಿಂಗ್ಸ್ ತಂಡದ ಪರ ವರುಣ್ ಚಕ್ರವರ್ತಿ 2, ಶಿವಂ ಮವಿ, ವೆಂಕಟೇಶ ಐಯ್ಯರ್ ಮತ್ತು ಸುನಿಲ್ ನರೈನ್ ತಲಾ ಒಂದೊಂದು ವಿಕೆಟ್ ಪಡೆದರು.

ಕೋಲ್ಕತ್ತಾ ನೈಟ್ ರೈಡರ್ಸ್ ಇನ್ನಿಂಗ್ಸ್

ಕೋಲ್ಕತ್ತಾ ನೈಟ್ ರೈಡರ್ಸ್ ಇನ್ನಿಂಗ್ಸ್

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದ ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಅಬ್ಬರಿಸಿದರೆ, ಶುಬ್ಮನ್ ಗಿಲ್ ಮತ್ತೊಮ್ಮೆ ಕಳಪೆ ಆಟವನ್ನು ಮುಂದುವರಿಸಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಬೌಲರ್ ಫ್ಯಾಬಿಯನ್ ಅಲೆನ್ ಎಸೆದ ಪಂದ್ಯದ ಮೊದಲ ಎಸೆತವನ್ನೇ ಬೌಂಡರಿಗೆ ಅಟ್ಟುವ ಮೂಲಕ ಇನಿಂಗ್ಸ್ ಆರಂಭಿಸಿದ ವೆಂಕಟೇಶ್ ಅಯ್ಯರ್ 49 ಎಸೆತಗಳಲ್ಲಿ 67 ರನ್ ಬಾರಿಸುವ ಮೂಲಕ ಟೂರ್ನಿಯಲ್ಲಿ ತಮ್ಮ ಅತ್ಯದ್ಭುತ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ವೆಂಕಟೇಶ್ ಅಯ್ಯರ್ ಜತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಮತ್ತೊಬ್ಬ ಆಟಗಾರ ಶುಬ್ಮನ್ ಗಿಲ್ 7 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರೆ, ರಾಹುಲ್ ತ್ರಿಪಾಠಿ 34 ರನ್ ಗಳಿಸಿ ಔಟ್ ಆದರು. ನಾಯಕ ಇಯಾನ್ ಮಾರ್ಗನ್ ಎಂದಿನಂತೆ ತಮ್ಮ ಕಳಪೆ ಪ್ರದರ್ಶನವನ್ನು ಈ ಪಂದ್ಯದಲ್ಲಿಯೂ ಮುಂದುವರೆಸಿದ್ದು ಕೇವಲ 2 ರನ್ ಗಳಿಸಿದರು, ನಿತೀಶ್ ರಾಣಾ 18 ಎಸೆತಗಳಲ್ಲಿ 31 ರನ್ ಗಳಿಸಿ ವಿಕೆಟ್ ಒಪ್ಪಿಸಿದರು, ಉಳಿದಂತೆ ಟಿಮ್ ಸೈಫರ್ಟ್ 2 ರನ್, ದಿನೇಶ್ ಕಾರ್ತಿಕ್ 11 ರನ್ ಮತ್ತು ಸುನಿಲ್ ನರೈನ್ ಅಜೇಯ 3 ರನ್ ಗಳಿಸಿದರು. ಈ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 166 ರನ್‌ಗಳ ಗುರಿಯನ್ನು ನೀಡಿತ್ತು.

ಇನ್ನು ಪಂಜಾಬ್ ಕಿಂಗ್ಸ್ ತಂಡದ ಪರ ಅರ್ಷದೀಪ್ ಸಿಂಗ್ 3 ವಿಕೆಟ್, ರವಿ ಬಿಷ್ಣೋಯಿ 2 ವಿಕೆಟ್‍ ಮತ್ತು ಮೊಹಮ್ಮದ್ ಶಮಿ 1 ವಿಕೆಟ್ ಪಡೆದರು.

ಧವನ್ ಬಳಿಯಿದ್ದ ಆರೆಂಜ್ ಕ್ಯಾಪ್ ಕಿತ್ತುಕೊಂಡ‌ ಕನ್ನಡಿಗ KL ರಾಹುಲ್ | Oneindia Kannada
ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇ ಆಫ್ ಕಥೆಯೇನು?

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇ ಆಫ್ ಕಥೆಯೇನು?

ಟೂರ್ನಿಯ ಮೊದಲನೇ ಭಾಗದಲ್ಲಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮಂಕಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ದ್ವಿತೀಯ ಹಂತದಲ್ಲಿ ಸುಧಾರಿಸಿಕೊಂಡಿತ್ತು. ಹೀಗೆ ಪಂಜಾಬ್ ಕಿಂಗ್ಸ್ ವಿರುದ್ಧ ಇಂದು (ಅಕ್ಟೋಬರ್ 1) ನಡೆದ ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಪ್ಲೇ ಆಫ್ ಆಸೆಯನ್ನು ಮತ್ತಷ್ಟು ಬಲಿಷ್ಠ ಪಡಿಸಿಕೊಳ್ಳುವ ಯೋಜನೆಯಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮುಗ್ಗರಿಸಿತು. ಇನ್ನು ಟೂರ್ನಿಯಲ್ಲಿ ಇದುವರೆಗೂ ಒಟ್ಟು 12 ಪಂದ್ಯಗಳನ್ನಾಡಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ 5 ಪಂದ್ಯಗಳಲ್ಲಿ ಜಯ ಸಾಧಿಸಿದ್ದು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಹಾಗೂ ಟೂರ್ನಿಯಲ್ಲಿ ಇನ್ನೂ 2 ಪಂದ್ಯಗಳನ್ನಾಡಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿ ಅಂತಿಮವಾಗಿ 14 ಅಂಕ ಪಡೆದುಕೊಂಡು ನಾಲ್ಕನೇ ಸ್ಥಾನಕ್ಕೆ ಪ್ರಯತ್ನಿಸುವ ಉಳಿದ ತಂಡಗಳು ಕೂಡ 14 ಅಂಕಗಳನ್ನೇ ಅಂತಿಮವಾಗಿ ಪಡೆದುಕೊಂಡರೆ ನೆಟ್ ರನ್ ರೇಟ್ ಆಧಾರದ ಮೇಲೆ ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆಯುವ ಸಾಧ್ಯತೆಗಳಿವೆ. ಒಂದುವೇಳೆ ಮುಂಬರುವ ತನ್ನ 2 ಪಂದ್ಯಗಳಲ್ಲಿ ಯಾವುದಾದರೂ ಒಂದು ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸೋತರೆ ಅಧಿಕೃತವಾಗಿ ಪ್ಲೇ ಆಫ್ ರೇಸ್‌ನಿಂದ ಹೊರಬೀಳಲಿದೆ. ಇನ್ನು ಇಂದಿನ ( ಅಕ್ಟೋಬರ್ 1 ) ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿರುವ ಪಂಜಾಬ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು ಪ್ಲೇ ಆಫ್ ಅಂಕಿ ಅಂಶಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ರೀತಿಯಲ್ಲಿಯೇ ಇದೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 15 - October 24 2021, 03:30 PM
ಶ್ರೀಲಂಕಾ
ಬಾಂಗ್ಲಾದೇಶ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Friday, October 1, 2021, 23:39 [IST]
Other articles published on Oct 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X