Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕ್ವಾಲಿಫೈಯರ್ 1: CSK vs DC, ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ

IPL 2021, Qualifier 1, CSK vs DC Preview, Dubai Pitch Report, Playing XIs

ಐಪಿಎಲ್‌ನಲ್ಲಿ ಸತತ ಎರಡನೇ ಬಾರಿಗೆ ಫೈನಲ್‌ಗೇರುವ ಕನಸನ್ನು ಹೊತ್ತು ಭರ್ಜರಿ ಪ್ರದರ್ಶನ ನೀಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಗೆದ್ದು ಬೀಗುವ ಉತ್ಸಾಹದಲ್ಲಿದೆ. ಈ ಮೂಲಕ ಚೊಚ್ಚಲ ಬಾರಿಗೆ ಟ್ರೋಫಿ ಗೆಲ್ಲುವ ಆತ್ಮ ವಿಶ್ವಾಸದಲ್ಲಿದೆ ಪಂತ್ ಪಡೆ. ಆದರೆ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಅಂತಿ ಎಸೆತದಲ್ಲಿ ಸೋಲು ಕಂಡಿರುವುದು ತಂಡದ ಆತ್ಮವಿಶ್ವಾಸದ ಮೇಲೆ ಪೆಟ್ಟು ಬಿದ್ದಂತಾಗಿದೆ. ಆದರೆ ಡೆಲ್ಲಿಯ ಎದುರಾಳಿಯಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಪರಿಸ್ಥಿತಿ ಲೀಗ್ ಹಂತದ ಕೊನೆಯಲ್ಲಿ ಮತ್ತಷ್ಟು ಹೀನಾಯ ಸ್ಥಿತಿಗೆ ಬಂದಿದೆ ಎಂಬುದು ಕೂಡ ಗಮನಾರ್ಹ ಸಂಗತಿ.

ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್‌ನ ಆರಂಭದಿಂದಲೇ ಅಮೋಘ ಪ್ರದರ್ಶನ ನಿಡಿಕೊಂಡು ಬಂದಿತ್ತು. ಯುಎಇ ಚರಣದಲ್ಲಿಯೂ ಧೋನಿ ಪಡೆ ಇದೇ ಪ್ರದರ್ಶನವನ್ನು ಆರಂಭದಲ್ಲಿ ಮುಂದುವರಿಸಿತ್ತು. ಆದರೆ ಕೊನೆಯ ಹಂತಕ್ಕಾಗುವ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೆಲ ಪ್ರಮುಖ ದೌರ್ಬಲ್ಯಗಳು ಬಹಿರಂಗವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಧ್ಯಮ ಕ್ರಮಾಂಕ ಅತ್ಯಂತ ದುರ್ಬಲ ಎಂಬುದನ್ನು ಕಳೆದ ಮೂರು ಪಂದ್ಯಗಳಲ್ಲಿಯೂ ಸಾಬೀತುಪಡಿಸಿದೆ. ಹೀಗಾಗಿ ಸಿಎಸ್‌ಕೆ ತಂಡದ ಮಧ್ಯಮ ಕ್ರಮಾಂಕದ ಮೇಲೆ ಜವಾಬ್ಧಾರಿ ಹೆಚ್ಚಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕರ ಪ್ರದರ್ಶನದ ಮೇಲೆ ಹೆಚ್ಚು ಅವಲಂಬಿತವಾಗಿದೆ ಎಂಬುದು ಸ್ಪಷ್ಟವಾಗುತ್ತದೆ. ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ ಹಾಗೂ ಫಾಪ್ ಡು ಪ್ಲೆಸಿಸ್ ಈ ಬಾರಿಯ ಆವೃತ್ತಿಯ ಬಹುತೇಕ ಪಂದ್ಯಗಳಲ್ಲಿ ಮಿಂಚಿದ್ದಾರೆ. ಆದರೆ ಉಳಿದ ಆಟಗಾರರಿಂದ ಕಳಪೆ ಪ್ರದರ್ಶನ ಬರುತ್ತಿರುವುದು ತಂಡಕ್ಕೆ ಹಿನ್ನಡೆಯಾಗಿದೆ. ಮಿಯೀನ್ ಅಲಿ ಯುಎಇನಲ್ಲಿ ಸಂಪೊಊರ್ಣ ವೈಫಲ್ಯ ಅನುಭವಿಸಿದ್ದಾರೆ. ಸುರೇಶ್ ರೈನಾ, ಎಂಎಸ್ ಧೋನಿ, ರನ್‌ ಬರಗಾಲ ಅನುಭವಿಸುತ್ತಿದ್ದಾರೆ. ರೈನಾ ಸ್ಥಾನದಲ್ಲಿ ಆಡಲಿಳಿದ ಉತ್ತಪ್ಪ ಕೂಡ ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಂಬಾಟಿ ರಾಯುಡು ಕೆಲ ಸಂದರ್ಭಗಳಲ್ಲಿ ಮಾತ್ರವೇ ಮಿಂಚಿದ್ದಾರೆ. ಹೀಗೆ ಸಿಎಸ್‌ಕೆ ತಂಡದಲ್ಲಿ ನಕಾರಾತ್ಮಕ ಸಂಗತಿಗಳೇ ಹೆಚ್ಚಿದೆ.

ಹವಾಮಾನ ವರದಿ: ಐಪಿಎಲ್ 14ನೇ ಆವೃತ್ತಿಯ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಈ ಪಮದ್ಯ ಆರಂಭವಾಗಲಿದೆ. ಈ ಪಂದ್ಯಕ್ಕೆ ಮಲೆ ಅಡ್ಡಿಯಾಗುವ ಯಾವುದೇ ಸಾಧ್ಯತೆಗಳು ಕೂಡ ಇಲ್ಲ. ಹಗಲಿನ ಹೊತ್ತು ಇಲ್ಲಿ 36 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರುದ್ಧ ಸಾಧ್ಯತೆಯಿದೆ. ಆದರೆ ರಾತ್ರಿ ಇದು 28 ಡಿಗ್ಇ ಸೆಲ್ಸಿಯಸ್‌ಗೆ ಕುಸಿಯಲಿದೆ. ವಾತಾವರಣದಲ್ಲಿ 62 ಶೇಕಡಾದಷ್ಟು ಆರ್ದ್ರತೆಯಿರಲಿದೆ.

ಪಿಚ್ ರಿಪೋರ್ಟ್: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಮಧ್ಯೆ ತೀವ್ರ ಪೈಪೋಟಿ ಕಂಡುಬರುವ ಸಾಧ್ಯತೆಯಿದೆ. ಅದರಲ್ಲೂ ಬೌಲರ್‌ಗಳು ದಾಂಡಿಗರ ಮೇಲೆ ಹೆಚ್ಚಿನ ನಿಯಂತ್ರಣ ಪಡೆಯಬಹುದು. ಇದೇ ಮೈದಾನದಲ್ಲಿ ನಡೆದ ಈ ಹಿಂದಿನ ಪಂದ್ಯದಲ್ಲಿ ಎರಡು ತಂಡಗಳು ಕೂಡ 160+ ರನ್‌ಗಳಿಸಿದ್ದವು. ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಕೂಡ ಮೊದಲಿಗೆ ಬ್ಯಾಟಿಂಗ್ ಮಾಡಿದ ತಂಡ 160-180 ರನ್‌ಗಳ ಗುರಿ ನಿಡುವ ನಿರೀಕ್ಷೆಯಿದೆ.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ & ವಿಕೆಟ್ ಕೀರಪ್), ಮಾರ್ಕಸ್ ಸ್ಟೋಯಿನಿಸ್, ಶಿಮ್ರಾನ್ ಹೆಟ್ಮೀರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಾಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಕಿಯಾ

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಆಡುವ ಬಳಗ: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಾಟಿ ರಾಯುಡು, ಸುರೇಶ್ ರೈನಾ/ ರಾಬಿನ್ ಉತ್ತಪ್ಪ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹ್ಯಾಜಲ್‌ವುಡ್

Story first published: Monday, October 11, 2021, 10:38 [IST]
Other articles published on Oct 11, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+