For Quick Alerts
ALLOW NOTIFICATIONS  
For Daily Alerts
 

DC vs KKR, ಕ್ವಾ. 2: ಐಪಿಎಲ್ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ತಂಡ ಯಾವುದು ಗೊತ್ತಾ?

 IPL 2021 qualifier 2 - DC vs KKR head to head records and Key Stats

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಅಂತಿಮ ಹಂತಕ್ಕೆ ಬಂದು ತಲುಪಿದ್ದು ಇಂದು ( ಅಕ್ಟೋಬರ್ 13 ) ನಡೆಯಲಿರುವ ಮಹತ್ವದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಈ ಸೆಣಸಾಟದಲ್ಲಿ ಜಯ ಸಾಧಿಸುವ ತಂಡ ಫೈನಲ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಳ್ಳಲಿದ್ದು, ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಹಾಗೂ ಈ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ.

ಕಳೆದ ಅಕ್ಟೋಬರ್ 10, ಭಾನುವಾರದಂದು ನಡೆದಿದ್ದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಟ ನಡೆಸಿದ್ದವು. ಈ ಪಂದ್ಯದಲ್ಲಿ ಜಯ ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನೇರವಾಗಿ ಫೈನಲ್ ಪ್ರವೇಶವನ್ನು ಪಡೆದುಕೊಂಡಿತು ಮತ್ತು ಸೋಲುಂಡ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕ್ವಾಲಿಫೈಯರ್ 2 ಪಂದ್ಯಕ್ಕೆ ಪ್ರವೇಶಿಸಿತು. ಇನ್ನು ಅಕ್ಟೋಬರ್ 11, ಸೋಮವಾರದಂದು ನಡೆದ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸಿದ್ದವು. ಈ ಎಲಿಮಿನೇಟರ್ ಪಂದ್ಯದಲ್ಲಿ ಸೋಲುಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಿಂದ ಹೊರಬಿದ್ದಿತು ಮತ್ತು ಗೆಲುವು ಪಡೆದುಕೊಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕ್ವಾಲಿಫೈಯರ್ 2 ಪಂದ್ಯಕ್ಕೆ ಅರ್ಹತೆಯನ್ನು ಪಡೆದುಕೊಂಡಿತು.

ಹೀಗೆ ಕಳೆದ ಪಂದ್ಯಗಳ ಫಲಿತಾಂಶಗಳಿಂದ ಕ್ವಾಲಿಫೈಯರ್ 2 ಪಂದ್ಯಕ್ಕೆ ಪ್ರವೇಶಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಅಕ್ಟೋಬರ್ 13, ಬುಧವಾರದಂದು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಈ ಕ್ವಾಲಿಫೈಯರ್ 2 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದ್ದು, ಇತ್ತಂಡಗಳ ನಡುವಿನ ಐಪಿಎಲ್ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಬಲಿಷ್ಠ ತಂಡ ಯಾವುದು ಎಂಬುದರ ಮಾಹಿತಿ ಮುಂದೆ ಇದೆ ಓದಿ.

ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಯಾರು ಬಲಿಷ್ಠರು?

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 29 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಡೆಲ್ಲಿ ಕ್ಯಾಪಿಟಲ್ಸ್ 13 ಪಂದ್ಯಗಳಲ್ಲಿ ಗೆದ್ದಿದೆ, ಕೋಲ್ಕತಾ ನೈಟ್ ರೈಡರ್ಸ್ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ ಮತ್ತು 1 ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಹೀಗೆ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಮೇಲುಗೈ ಸಾಧಿಸಿದೆ.

ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಹೆಚ್ಚು ಗೆದ್ದವರಾರು?

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಕಳೆದ 5 ಪಂದ್ಯಗಳ ಐಪಿಎಲ್ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 2 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕಳೆದ 5 ಪಂದ್ಯಗಳ ಐಪಿಎಲ್ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುನ್ನಡೆ ಸಾಧಿಸಿದೆ.

ಶಾರ್ಜಾ ಕ್ರೀಡಾಂಗಣದಲ್ಲಿ ಮತ್ತು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿನ ಮುಖಾಮುಖಿಯಲ್ಲಿ ಇತ್ತಂಡಗಳ ಸಮಬಲ

ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇತ್ತಂಡಗಳು 2 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸಿವೆ.

ಇನ್ನು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು 2 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ಕೂಡ ತಲಾ ಒಂದೊಂದು ಪಂದ್ಯದಲ್ಲಿ ಗೆದ್ದಿವೆ.

Story first published: Wednesday, October 13, 2021, 14:32 [IST]
Other articles published on Oct 13, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+