Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆರ್‌ಸಿಬಿ ಸೋಲಿಸಿ ಕ್ವಾಲಿಫೈಯರ್2 ತಲುಪಿರುವ ಕೆಕೆಆರ್ ವಿರುದ್ಧ ಕಣಕ್ಕಿಳಿಯಲಿದೆ ಡೆಲ್ಲಿಯ ಈ ಬಲಿಷ್ಠ ತಂಡ

IPL 2021 qualifier 2- DC vs KKR probable playing xi and head to head records

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು ಕ್ವಾಲಿಫೈಯರ್ 2 ಮತ್ತು ಫೈನಲ್ ಪಂದ್ಯಗಳು ಮಾತ್ರ ಬಾಕಿ ಉಳಿದುಕೊಂಡಿವೆ ಹಾಗೂ ಪ್ಲೇ ಆಫ್ ಹಂತದ ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳು ಈಗಾಗಲೇ ಮುಕ್ತಾಯವಾಗಿವೆ. ಕ್ವಾಲಿಫೈಯರ್ 1 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲುವುದರ ಮೂಲಕ ಕ್ವಾಲಿಫೈಯರ್ 2 ಪಂದ್ಯವನ್ನಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಇತ್ತ ನಿನ್ನೆ ( ಅಕ್ಟೋಬರ್ 11 ) ನಡೆದ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ ಜಯಗಳಿಸಿದ್ದು ಕ್ವಾಲಿಫೈಯರ್ 2 ಪಂದ್ಯಕ್ಕೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಮಹತ್ವದ ಪಂದ್ಯದಲ್ಲಿ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದೆ.

ಹೀಗೆ ಕ್ವಾಲಿಫೈಯರ್ 1 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಜಯಗಳಿಸಿರುವ ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಅಕ್ಟೋಬರ್ 13ರ ಬುಧವಾರದಂದು ನಡೆಯಲಿರುವ ಕ್ವಾಲಿಫೈಯರ್ 2 ಪಂದ್ಯದಲ್ಲಿ ಸೆಣಸಾಟ ನಡೆಸಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ ಹಂತವನ್ನು ತಲುಪಲಿದ್ದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಕ್ಟೋಬರ್ 15ರ ಶುಕ್ರವಾರದಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸೆಣಸಾಟ ನಡೆಸಲಿದೆ. ಹಾಗೂ ಈ ಪಂದ್ಯದಲ್ಲಿ ಸೋತ ತಂಡ ಅಧಿಕೃತವಾಗಿ ಟೂರ್ನಿಯಿಂದ ಹೊರ ಬೀಳಲಿದೆ.

ಹೀಗೆ ಫೈನಲ್ ಹಂತವನ್ನು ಪ್ರವೇಶಿಸಬೇಕೆಂದರೆ ಕ್ವಾಲಿಫೈಯರ್ 2 ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಎರಡೂ ತಂಡಗಳಿಗೂ ಇದೆ. ಇನ್ನು ಕ್ವಾಲಿಫೈಯರ್ 2 ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳ ನಡುವೆ ಅಕ್ಟೋಬರ್ 13ರ ಬುಧವಾರದಂದು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದ್ದು, ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಎರಡೂ ತಂಡಗಳ ಬಲಿಷ್ಠ ಸಂಭಾವ್ಯ ಆಡುವ ಬಳಗದ ವಿವರ ಮುಂದೆ ಓದಿ.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ

ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ /ವಿಕೆಟ್ ಕೀಪರ್) , ಶಿಮ್ರಾನ್ ಹೆಟ್ಮೆಯರ್, ಅಕ್ಷರ್ ಪಟೇಲ್, ಟಾಮ್ ಕರನ್, ರವಿಚಂದ್ರನ್ ಅಶ್ವಿನ್, ಕಗಿಸೋ ರಬಾಡ, ಅವೇಶ್ ಖಾನ್ ಮತ್ತು ಅನ್ರಿಕ್ ನಾರ್ಕಿಯಾ.

ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ

ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ

ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ ( ನಾಯಕ ), ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್ ), ಸುನಿಲ್ ನರೈನ್, ಶಕಿಬ್ ಅಲ್ ಹಸನ್, ಲಾಕಿ ಫರ್ಗ್ಯುಸನ್, ಶಿವಂ ಮವಿ ಮತ್ತು ವರುಣ್ ಚಕ್ರವರ್ತಿ

ಚೀನಾ ಮತ್ತು ಭಾರತದ ನಡುವೆ ಯುದ್ಧವಾದ್ರೆ ಭಾರತ ಸೋಲೋದು ಗ್ಯಾರಂಟಿ!! | Oneindia Kannada
ಇತ್ತಂಡಗಳ ಹೆಡ್ ಟು ಹೆಡ್ ಮಾಹಿತಿ

ಇತ್ತಂಡಗಳ ಹೆಡ್ ಟು ಹೆಡ್ ಮಾಹಿತಿ

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಒಟ್ಟು 28 ಪಂದ್ಯಗಳಲ್ಲಿ ಸೆಣಸಾಡಿದ್ದು, ಕೋಲ್ಕತಾ ನೈಟ್ ರೈಡರ್ಸ್ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 12 ಪಂದ್ಯಗಳಲ್ಲಿ ಗೆದ್ದಿದೆ ಮತ್ತು 1 ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಹೀಗೆ ಇತ್ತಂಡಗಳ ಐಪಿಎಲ್ ಇತಿಹಾಸದ ಒಟ್ಟಾರೆ ಮುಖಾಮುಖಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೇಲುಗೈ ಸಾಧಿಸಿದೆ.

Story first published: Tuesday, October 12, 2021, 17:27 [IST]
Other articles published on Oct 12, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+