ಐಪಿಎಲ್ 2021 ಕ್ವಾಲಿಫೈಯರ್ 2: DC vs KKR ಟಾಸ್ ವರದಿ, ಆಡುವ ಬಳಗ ಮತ್ತು ಲೈವ್ ಸ್ಕೋರ್

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕ್ವಾಲಿಫೈಯರ್ 2 ಪಂದ್ಯಕ್ಕೆ ಪ್ರವೇಶಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಅಕ್ಟೋಬರ್ 13, ಬುಧವಾರದಂದು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಡುತ್ತಿವೆ.
ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡ ಫೈನಲ್ ಪಂದ್ಯಕ್ಕೆ ಪ್ರವೇಶವನ್ನು ಪಡೆದುಕೊಳ್ಳಲಿದ್ದು ಅಕ್ಟೋಬರ್ 15ರ ಶುಕ್ರವಾರದಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಜೊತೆ ಸೆಣಸಾಟ ನಡೆಸಲಿದೆ. ಹಾಗೂ ಈ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ.
ಟಾಸ್ ವರದಿ:
ಈ ಮಹತ್ವದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮಾರ್ಗನ್ ಫೀಲ್ಡಿಂಗ್ ಆಯ್ದುಕೊಂಡು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದಾರೆ.
ಆಡುವ ಬಳಗ
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ / ವಿಕೆಟ್ ಕೀಪರ್), ಮಾರ್ಕಸ್ ಸ್ಟೋಯಿನಿಸ್, ಶಿಮ್ರಾನ್ ಹೆಟ್ಮೀರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಕಿಯಾ
ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯಾನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುನಿಲ್ ನರೈನ್, ಶಕೀಬ್ ಅಲ್ ಹಸನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ
DC vs KKR live score:
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications