ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಕ್ವಾ-2, ಡಿಸಿ vs ಕೆಕೆಆರ್, ಮಾರ್ಗನ್ ತಂಡಕ್ಕೆ 136 ರನ್‌ಗಳ ಗುರಿ ನೀಡಿದ ಪಂತ್ ಪಡೆ

IPL 2021, Qualifier 2: KKR need 136 runs to win against DC

ಐಪಿಎಲ್ 14ನೇ ಆವೃತ್ತಿಯ ಪ್ಲೇ ಆಫ್‌ನ ಕೊನೆಯ ಪಂದ್ಯ ನಡೆಯುತ್ತಿದೆ. ಎರಡನೇ ಕ್ವಾಲಿಫೈಯರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ. ಫೈನಲ್ ಪ್ರವೇಶಕ್ಕೆ ನಡೆಯುತ್ತಿರುವ ಈ ಸೆಣೆಸಾಟದಲ್ಲಿ ಡೆಲ್ಲಿ ಕ್ಯಾಪಿಟಲ್ಸ ತಂಡ ಕೊಲ್ಕತ್ತಾ ನೈಟ್ ರೈಡರ್ಸ್‌ಗೆ 136 ರನ್‌ಗಳ ಗುರಿ ನೀಡಿದೆ.

ಈ ಮಹತ್ವದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಶಾರ್ಜಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕೆಕೆಆರ್ ತಂಡದ ಬೌಲರ್‌ಗಳ ಮುಂದೆ ಸಾಕಷ್ಟು ತಿಣುಕಾಡಿದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ ಡೆಲ್ಲಿ 5 ವಿಕೆಟ್ ಕಳೆದುಕೊಂಡು 135 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲುವಿಗಾಗಿ 136 ರನ್‌ಗಳ ಗುರಿಯನ್ನು ಪಡೆದುಕೊಂಡಿತ್ತು. ಇದನ್ನು ಬೆನ್ನಟ್ಟಿದ ಕೆಕೆಆರ್‌ಗೆ ಅತ್ಯುತ್ತಮ ಆರಂಭ ದೊರೆಯಿತು. ಕೆಕೆಆರ್ ಪರವಾಗಿ ಆರಂಭಿಕ ಆಟಗಾರರು 12.2 ಓವರ್‌ಗಳನ್ನು ಭರ್ಜರಿ 96 ರನ್‌ ಜೊತೆಯಾಟವನ್ನು ನೀಡಿದರು. 55 ರನ್‌ಗಳಿಸಿದ್ದ ವೆಂಕಟೇಶ್ ಐಯ್ಯರ್ ವಿಕೆಟ್ ಕಳೆದುಕೊಳ್ಳುವ ಮೂಲಕ ಈ ಜೋಡಿ ಬೇರ್ಪಟ್ಟಿತು. ನಂತರ ಗಿಲ್ ಜೊತೆಗೆ ಸೇರಿದ ನಿರೀಶ್ ರಾಣಾ ತಂಡವನ್ನು ಗೆಲುವಿನ ಅಂಚಿನತ್ತ ಕೊಂಡಿಯ್ದರು. ತಂಡದ ಮೊತ್ತ 123 ರನ್‌ಗಳಾಗಿದ್ದಾಗ ಈ ಜೋಡಿ ಬೇರ್ಪಟ್ಟಿತು. ಈ ಹಂತದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್‌ಗೆ ಅಗತ್ಯವಿದ್ದ ರನ್ 24 ಎಸೆತಗಳಲ್ಲಿ ಕೇವಲ 13 ರನ್.

ಈ ಭರ್ಜರಿ ಗೆಲುವಿನ ಮೂಲಕ ಇಯಾನ್ ಮಾರ್ಗನ್ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಫೈನಲ್‌ಗೆ ಪ್ರವೇಶ ಪಡೆದಿದೆ. ಈ ಮೂಲಕ ಐಪಿಎಲ್‌ನಲ್ಲಿ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ಅವಕಾಶವನ್ನು ಹೊಂದಿದೆ. ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ 9ನೇ ಬಾರಿಗೆ ಐಪಿಎಲ್‌ನ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದ್ದು 4ನೇ ಬಾರಿಗೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶ ಹೊಂದಿದೆ. ಅಕ್ಟೋಬರ್ 15ರಂದು ಈ ಪಂದ್ಯ ನಡೆಯಲಿದ್ದು ಯಾರಿಗೆ ಗೆಲುವು ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ / ವಿಕೆಟ್ ಕೀಪರ್), ಮಾರ್ಕಸ್ ಸ್ಟೋಯಿನಿಸ್, ಶಿಮ್ರಾನ್ ಹೆಟ್ಮೀರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಕಿಯಾ
ಬೆಂಚ್: ಟಾಮ್ ಕುರ್ರನ್, ಇಶಾಂತ್ ಶರ್ಮಾ, ಅಜಿಂಕ್ಯ ರಹಾನೆ, ಅಮಿತ್ ಮಿಶ್ರಾ, ಉಮೇಶ್ ಯಾದವ್, ಸ್ಟೀವನ್ ಸ್ಮಿತ್, ಸ್ಯಾಮ್ ಬಿಲ್ಲಿಂಗ್ಸ್, ಲುಕ್ಮನ್ ಮೇರಿವಾಲಾ, ಬೆನ್ ದ್ವಾರಶುಯಿಸ್, ಪ್ರವೀಣ್ ದುಬೆ, ವಿಷ್ಣು ವಿನೋದ್, ಕುಲ್ವಂತ್ ಖೇಜ್ರೋಲಿಯಾ, ಲಲಿತ್ ಯಾದವ್, ರಿಪಾಲ್ ಪಟೇಲ್

ಟೀಮ್ ಇಂಡಿಯಾ ಹೊಸ ಜರ್ಸಿ ಅನಾವರಣ:ನಿಮ್ಗೂ ಇದೆ ಧರಿಸೋ ಅವಕಾಶ | Oneindia Kannada

ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯಾನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುನಿಲ್ ನರೈನ್, ಶಕೀಬ್ ಅಲ್ ಹಸನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ
ಬೆಂಚ್: ಹರ್ಭಜನ್ ಸಿಂಗ್, ಟಿಮ್ ಸೌಥಿ, ಆಂಡ್ರೆ ರಸೆಲ್, ಬೆನ್ ಕಟ್ಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಸಂದೀಪ್ ವಾರಿಯರ್, ಟಿಮ್ ಸೀಫೆರ್ಟ್, ಪ್ರಸಿದ್ ಕೃಷ್ಣ, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ವೈಭವ್ ಅರೋರಾ

Story first published: Thursday, October 14, 2021, 0:14 [IST]
Other articles published on Oct 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X