ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಜೋಸ್ ಬಟ್ಲರ್ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭಕೋರಿದ ರಾಜಸ್ಥಾನ್ ರಾಯಲ್ಸ್ ಆಟಗಾರರು

IPL 2021: Rajasthan Royals players special wishes for Jos Buttlers birthday

ಸದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನಿರತರಾಗಿರುವ ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರ ಜೋಸ್ ಬಟ್ಲರ್‌ಗೆ ಇಂದು ( ಸೆಪ್ಟೆಂಬರ್ 8 ) ಹುಟ್ಟುಹಬ್ಬದ ಸಂಭ್ರಮ.

ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದ ನಂತರ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾಗ ಜೋಸ್ ಬಟ್ಲರ್ ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಬಟ್ಲರ್ ದಂಪತಿಗೆ ಹೆಣ್ಣು ಮಗು ಜನನವಾಗಿದ್ದು, ಜೋಸ್ ಬಟ್ಲರ್ ಭಾರತ ವಿರುದ್ಧ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯವನ್ನಾಡಲು ಸಿದ್ಧರಾಗಿದ್ದಾರೆ.

ಹೀಗೆ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಜೋಸ್ ಬಟ್ಲರ್ ಅವರಿಗೆ ರಾಜಸ್ಥಾನ್ ರಾಯಲ್ಸ್ ತಂಡ ತನ್ನ ಆಟಗಾರರು ಜೋಸ್ ಬಟ್ಲರ್ ಅವರಿಗೆ ಶುಭಾಶಯ ಕೋರಿರುವ ವಿಶೇಷ ವಿಡಿಯೋವೊಂದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯವನ್ನು ವಿಶೇಷವಾಗಿ ಕೋರಿದೆ. ವಿಡಿಯೋದಲ್ಲಿ ಮಾತನಾಡಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಜೋಸ್ ಬಟ್ಲರ್ ಓರ್ವ ಸರಳ ಮತ್ತು ಸಜ್ಜನ ವ್ಯಕ್ತಿ ಎಂದು ಕೊಂಡಾಡಿದ್ದಾರೆ ಮತ್ತು ರಾಹುಲ್ ತೆವಾಟಿಯಾ ಜೋಸ್ ಬಟ್ಲರ್ ಓರ್ವ ಉತ್ತಮ ಕುಟುಂಬ ಸದಸ್ಯ ಎಂದು ಶ್ಲಾಘಿಸಿದ್ದಾರೆ.

ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯ ಸೆಪ್ಟೆಂಬರ್ 10 ರಂದು ಆರಂಭವಾಗಿ 14ಕ್ಕೆ ಮುಗಿಯಲಿದೆ. ನಂತರ ಸೆಪ್ಟೆಂಬರ್ 19 ರಿಂದ ಈ ಬಾರಿಯ ಐಪಿಎಲ್ ಟೂರ್ನಿ ಮುಂದುವರಿಯಲಿದೆ.

ಕೊರೊನಾದಿಂದ ತಾತ್ಕಾಲಿಕ ಸ್ಥಗಿತವಾಗಿದ್ದ ಐಪಿಎಲ್

ಇದೇ ವರ್ಷದ ಏಪ್ರಿಲ್ 9 ನೇ ತಾರೀಕಿನಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಪಂದ್ಯಗಳವರೆಗೆ ಯಾವುದೇ ಅಡಚಣೆಯಿಲ್ಲದೆ ನಡೆಯಿತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಎಚ್ಚೆತ್ತ ಬಿಸಿಸಿಐ ತಕ್ಷಣವೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಯುಎಇಯಲ್ಲಿ ಐಪಿಎಲ್ ಮುಂದುವರಿಕೆ

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ಈ ಹಿಂದೆಯೇ ತೀರ್ಮಾನಿಸಿತ್ತು. ಬಿಸಿಸಿಐ ತೀರ್ಮಾನದಂತೆ ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂದುವರಿಯಲಿದೆ.

ಮುಂದುವರಿಯಲಿರುವ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮೊದಲ ಪಂದ್ಯ ಯಾವಾಗ?

29 ಪಂದ್ಯಗಳು ಮುಗಿದ ನಂತರ ಸ್ಥಗಿತವಾಗಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯ ಉಳಿದ 31 ಪಂದ್ಯಗಳು ಯುಎಇನಲ್ಲಿ ನಡೆಯಲಿದ್ದು ರಾಜಸ್ಥಾನ್ ರಾಯಲ್ಸ್ ತಂಡದ ಮೊದಲನೇ ಪಂದ್ಯ ಸೆಪ್ಟೆಂಬರ್ 21ರಂದು ನಡೆಯಲಿದ್ದು ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ.

ಮುಂದುವರೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಬೆಂಗಳೂರು ತಂಡದ ಮೊದಲ ಪಂದ್ಯ ಯಾವಾಗ?

ಟೀಂ ಇಂಡಿಯಾವನ್ನು ಕಾಡೋಕೆ ಎಂಟ್ರಿಯಾದ ಇಂಗ್ಲೆಂಡ್ ನ‌ ಸ್ಟಾರ್ ಸ್ಪಿನ್ನರ್ | Oneindia Kannada

ಈ ಬಾರಿಯ ಐಪಿಎಲ್ ಟೂರ್ನಿ ಭಾರತದಲ್ಲಿ ಆರಂಭವಾದಾಗ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದ್ದವು. ಇದೀಗ ಯುಎಇಯಲ್ಲಿ ಸೆಪ್ಟೆಂಬರ್‌ 19 ರಿಂದ ಐಪಿಎಲ್ ಟೂರ್ನಿ ಮುಂದುವರಿಯಲಿದ್ದು ಸೆಪ್ಟೆಂಬರ್ 20ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ಮೊದಲನೇ ಪಂದ್ಯವನ್ನಾಡಲಿದೆ.

Story first published: Wednesday, September 8, 2021, 15:32 [IST]
Other articles published on Sep 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X