ಐಪಿಎಲ್ 2021: ರಾಜಸ್ಥಾನ್ vs ಚೆನ್ನೈ, ಪ್ಲೇಯಿಂಗ್ XI, ಅಪ್‌ಡೇಟ್ಸ್

ಐಪಿಎಲ್ 14ನೇ ಆವೃತ್ತಿಯ 12ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಟಾಸ್ ಗೆದ್ದಿದ್ದು ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲಿಗೆ ಬ್ಯಾಟಿಂಗ್‌ಗೆ ಆಹ್ವಾನಿಸಿದೆ.
ರಾಜಸ್ಥಾನ್ ಹಾಗೂ ಚೆನ್ನೈ ಎರಡು ತಂಡಗಳಿಗೂ ಇದು ಮೂರನೇ ಪಂದ್ಯವಾಗಿದೆ. ಮೊದಲ ಎರಡು ಪಂದ್ಯಗಳಲ್ಲಿ ಈ ತಂಡಗಳು ಸೋಲು ಹಾಗೂ ಗೆಲುವಿನ ಕಂಡಿದ್ದು ಮೂರನೇ ಪಂದ್ಯದಲ್ಲಿ ಗೆಲುವು ಸಾಧಿಸಿ ಮುನ್ನಡೆಯುವ ಹಂಬಲದಲ್ಲಿದೆ. ಯುವ ನಾಯಕ ಸಂಜು ಸ್ಯಾಮ್ಸನ್ ಹಾಗೂ ಎಂಎಸ್ ಧೋನಿ ಈ ಪಂದ್ಯದಲ್ಲಿ ಮುಖಾಮುಖಿಯಾಗಿದ್ದಾರೆ.
ಇಂದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಎರಡು ತಂಡಗಳು ಕೂಡ ಯಾವುದೇ ಬದಲಾವಣೆಯನ್ನು ಮಾಡಿಕೊಂಡಿಲ್ಲ. ಕೊನೆಯದಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಿದ್ದ ತಂಡವನ್ನೇ ಚೆನ್ನೈ ವಿರುದ್ಧಸಂಜು ಸ್ಯಾಮ್ಸನ್ ಪಡೆ ಕಣಕ್ಕಿಳಿಸುತ್ತಿದ್ದರೆ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದ ತಂಡದ ಜೊತೆಗೆ ಧೋನಿ ಬಳಗ ಕಣಕ್ಕಿಳಿಯುತ್ತಿದೆ
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ
ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಎಂ.ಎಸ್.ಧೋನಿ (ನಾಯಕ/ವಿಕೆಟ್ ಕೀಪರ್), ಸ್ಯಾಮ್ ಕರ್ರನ್, ಡ್ವೇನ್ ಬ್ರಾವೋ, ಶಾರ್ದುಲ್ ಠಾಕೂರ್, ದೀಪಕ್ ಚಾಹರ್
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ
ಜೋಸ್ ಬಟ್ಲರ್, ಮನನ್ ವೊಹ್ರಾ, ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ಶಿವಮ್ ದುಬೆ, ಡೇವಿಡ್ ಮಿಲ್ಲರ್, ರಿಯಾನ್ ಪರಾಗ್, ರಾಹುಲ್ ತೇವಾಟಿಯಾ, ಕ್ರಿಸ್ ಮೋರಿಸ್, ಜಯದೇವ್ ಉನಾದ್ಕಟ್, ಚೇತನ್ ಸಕರಿಯಾ, ಮುಸ್ತಾಫಿಜುರ್ ರಹಮಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications