ಸಿಎಸ್‌ಕೆ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಜಸ್ಥಾನ್; ಪ್ಲೇಆಫ್ ಆಸೆಯಲ್ಲಿದ್ದ ಮುಂಬೈಗೆ ಸಂಕಷ್ಟ!

ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಇಂದು ( ಅಕ್ಟೋಬರ್ 2 ) ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಯಾರೂ ಎಣಿಸಿರದಂತಹ ಫಲಿತಾಂಶ ಹೊರಬಿದ್ದಿದೆ ಎಂದರೆ ತಪ್ಪಾಗಲಾರದು. ಪಂದ್ಯ ಆರಂಭಕ್ಕೂ ಮುನ್ನ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸದೆ ಬಡಿಯುವುದರ ಮೂಲಕ ಅಚ್ಚರಿ ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ್ದ 190 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ 17.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 190 ರನ್ ಗಳಿಸುವುದರ ಮೂಲಕ ವಿಜಯ ಪತಾಕೆಯನ್ನು ಹಾರಿಸಿದೆ.

ಸೂರ್ಯಕುಮಾರ್ ಯಾದವ್ ಕೆಟ್ಟ ಫಾರ್ಮ್ ಬಗ್ಗೆ ಮೌನ ಮುರಿದ ಕೋಚ್ ಮಹೇಲಾ ಜಯವರ್ಧನೆಸೂರ್ಯಕುಮಾರ್ ಯಾದವ್ ಕೆಟ್ಟ ಫಾರ್ಮ್ ಬಗ್ಗೆ ಮೌನ ಮುರಿದ ಕೋಚ್ ಮಹೇಲಾ ಜಯವರ್ಧನೆ

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದರು. ಹೀಗೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿದ್ದು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು 190 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಷ್ಟು ದೊಡ್ಡ ಮಟ್ಟದ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನೀಡಿದಾಗ ಪ್ರತಿಯೊಬ್ಬ ವೀಕ್ಷಕರು ಕೂಡ ರಾಜಸ್ಥಾನ್ ರಾಯಲ್ಸ್ ತಂಡ ಈ ಮೊತ್ತವನ್ನು ಯಶಸ್ವಿಯಾಗಿ ಚೇಸ್ ಮಾಡಲಿದೆ ಎಂದುಕೊಂಡಿರಲಿಲ್ಲ.

ಆದರೆ ಆರಂಭದಿಂದಲೇ ಅಬ್ಬರಿಸಲು ಶುರು ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ವೀಕ್ಷಕರ ಹುಬ್ಬೇರುವಂತೆ ಮಾಡಿತು.ರಾಜಸ್ಥಾನ್ ರಾಯಲ್ಸ್ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಯಶಸ್ವಿ ಜೈಸ್ವಾಲ್ 19 ಎಸೆತಗಳಲ್ಲಿ ಅರ್ಧ ಶತಕವನ್ನು ಬಾರಿಸುವುದರ ಮೂಲಕ ರಾಜಸ್ಥಾನ್ ರಾಯಲ್ಸ್ ಮಿಂಚಿನ ಆರಂಭವನ್ನು ಪಡೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಹೀಗೆ ಆರಂಭದಲ್ಲಿ ಯಶಸ್ವಿ ಜೈಸ್ವಾಲ್ ಅಬ್ಬರಿಸಿದರೆ ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ ತಮ್ಮ ಪರಾಕ್ರಮವನ್ನು ತೋರಿಸಿದರು. ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಎವಿನ್ ಲೆವಿಸ್ 27, ಯಶಸ್ವಿ ಜೈಸ್ವಾಲ್ 50, ಸಂಜು ಸ್ಯಾಮ್ಸನ್ 28, ಶಿವಂ ದುಬೆ 42 ಎಸೆತಗಳಲ್ಲಿ ಅಜೇಯ 64 ರನ್ ಮತ್ತು ಗ್ಲೆನ್ ಫಿಲಿಪ್ಸ್ ಅಜೇಯ 14 ರನ್ ಬಾರಿಸುವುದರ ಮೂಲಕ ಇನ್ನೂ 18 ಎಸೆತಗಳು ಬಾಕಿ ಇರುವಾಗಲೇ ರಾಜಸ್ಥಾನ್ ರಾಯಲ್ಸ್ ಗೆಲುವಿನ ನಗೆ ಬೀರಿತು.

ಟಿ20 ವಿಶ್ವಕಪ್ ಬಿಡಿ, ನಿಮ್ಮ ಐಪಿಎಲ್ ತಂಡಕ್ಕೆ ಮೊದಲು ಆಸರೆಯಾಗಿ; ಆಟಗಾರರಿಗೆ ಲಾರಾ ಬುದ್ಧಿಮಾತುಟಿ20 ವಿಶ್ವಕಪ್ ಬಿಡಿ, ನಿಮ್ಮ ಐಪಿಎಲ್ ತಂಡಕ್ಕೆ ಮೊದಲು ಆಸರೆಯಾಗಿ; ಆಟಗಾರರಿಗೆ ಲಾರಾ ಬುದ್ಧಿಮಾತು

ರಾಜಸ್ಥಾನ್ ರಾಯಲ್ಸ್ ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಜಯವನ್ನು ಸಾಧಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಜಿಗಿತ ಕಂಡಿದ್ದು ಮಾತ್ರವಲ್ಲದೇ ಆರನೇ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡವನ್ನು ಏಳನೇ ಸ್ಥಾನಕ್ಕೆ ತಳ್ಳುವುದರ ಮೂಲಕ ಪ್ಲೇ ಆಫ್ ಆಸೆಯಲ್ಲಿದ್ದವರಿಗೆ ಮತ್ತಷ್ಟು ಸಂಕಷ್ಟವನ್ನುಂಟುಮಾಡಿದೆ. ಇಷ್ಟೇ ಅಲ್ಲದೇ ಮುಂಬೈ ಇಂಡಿಯನ್ಸ್ ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ತಂಡ ಈ ಕೆಳಕಂಡ ರೀತಿಯಲ್ಲಿ ಅಡ್ಡಿಗಳನ್ನುಂಟುಮಾಡಿದೆ.

ಮುಂಬೈಗೆ ಎರಡಲ್ಲ, 3 ತಂಡಗಳ ಪೈಪೋಟಿ!

ಮುಂಬೈಗೆ ಎರಡಲ್ಲ, 3 ತಂಡಗಳ ಪೈಪೋಟಿ!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ರಾಜಸ್ಥಾನ್ ರಾಯಲ್ಸ್ ಭರ್ಜರಿ ಜಯ ಸಾಧಿಸುವ ಮುನ್ನ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸಲು ತನ್ನಷ್ಟೇ ಅಂಕಗಳನ್ನು ಹೊಂದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ಜೊತೆ ಪೈಪೋಟಿಯನ್ನು ನಡೆಸಬೇಕಾಗಿತ್ತು. ಇದೀಗ ಟೂರ್ನಿಯಲ್ಲಿ ತನ್ನ ಐದನೇ ಗೆಲುವನ್ನು ಸಾಧಿಸಿರುವ ರಾಜಸ್ತಾನ್ ರಾಯಲ್ಸ್ ಕೂಡ 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಪ್ಲೇ ಆಫ್ ರೇಸ್‌ಗೆ ಇಳಿದಿದ್ದು ಇದೀಗ ಮುಂಬೈ ಇಂಡಿಯನ್ಸ್ ತಂಡದ ಪ್ಲೇ ಆಫ್ ಆಸೆ ಮತ್ತಷ್ಟು ಕಡಿಮೆಯಾಗಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸಬೇಕೆಂದರೆ ತನ್ನ ಉಳಿದ ಎರಡೂ ಪಂದ್ಯಗಳನ್ನು ಗೆಲ್ಲಲೇಬೇಕಾಗಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್, ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮೂರೂ ತಂಡಗಳು ಕೂಡ ತಮ್ಮ ಮುಂದಿನ 2 ಪಂದ್ಯಗಳಲ್ಲಿ ಕಡ್ಡಾಯವಾಗಿ ಒಂದು ಪಂದ್ಯದಲ್ಲಿ ಸೋಲಲೇಬೇಕಾಗಿದೆ.

ಮುಂಬೈ ಇಂಡಿಯನ್ಸ್ ತಂಡದ ಮುಂದಿನ ಎದುರಾಳಿ ಕೂಡ ಇದೇ ರಾಜಸ್ಥಾನ ರಾಯಲ್ಸ್

ಮುಂಬೈ ಇಂಡಿಯನ್ಸ್ ತಂಡದ ಮುಂದಿನ ಎದುರಾಳಿ ಕೂಡ ಇದೇ ರಾಜಸ್ಥಾನ ರಾಯಲ್ಸ್

ಇತ್ತ ರಾಜಸ್ಥಾನ್ ರಾಯಲ್ಸ್ ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ್ದ 190 ರನ್‌ಗಳ ಗುರಿಯನ್ನು 17.3 ಓವರ್‌ಗಳಲ್ಲಿಯೇ ಕೇವಲ 3 ವಿಕೆಟ್ ಕಳೆದುಕೊಂಡು ಬಾರಿಸಿದ್ದರೆ ಅತ್ತ ಇದೇ ದಿನದಂದು ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 129 ರನ್ ಕಲೆ ಹಾಕುವುದರ ಮೂಲಕ ಮುಂಬೈ ಇಂಡಿಯನ್ಸ್ ತಂಡ ಸೋಲನ್ನು ಕಂಡಿದೆ. ಹೀಗೆ ಭರ್ಜರಿ ಗೆಲುವನ್ನು ಸಾಧಿಸಿ ಯಶಸ್ಸಿನ ಹಾದಿಗೆ ಮರಳಿರುವ ರಾಜಸ್ಥಾನ ರಾಯಲ್ಸ್ ತಂಡವನ್ನು ಮುಂಬೈ ಇಂಡಿಯನ್ಸ್ ತಂಡ ತನ್ನ ಮುಂದಿನ ಪಂದ್ಯದಲ್ಲಿ ಎದುರಿಸಲಿದ್ದು ಲಯ ಕಳೆದುಕೊಂಡು ಮಂಕಾಗಿರುವ ಮುಂಬೈ ಇಂಡಿಯನ್ಸ್ ತಂಡ ಆ ಪಂದ್ಯದಲ್ಲಿ ಗೆಲುವು ಸಾಧಿಸಲಿದೆಯಾ ಎಂಬ ಅನುಮಾನಗಳು ಇದೀಗ ಶುರುವಾಗಿವೆ. ಅಷ್ಟೇ ಅಲ್ಲದೆ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸಾಧಿಸಿರುವ ಈ ಭರ್ಜರಿ ಜಯ ಮುಂಬರಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಒತ್ತಡಕ್ಕೆ ಸಿಲುಕಿಸುವ ಸಾಧ್ಯತೆಗಳು ಕೂಡ ಹೆಚ್ಚಿವೆ.

ಇವನ ಆಟದಿಂದ RCBಗೆ ಖುಲಾಯಿಸ್ತು ಲಕ್: ಈ ಸಲ RCB ಕಪ್ ಗೆಲ್ಲೋದು ಪಕ್ಕಾ | Oneindia Kannada
ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯ ಯಾವಾಗ?

ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯ ಯಾವಾಗ?

ಹೀಗೆ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುಂಬೈ ಇಂಡಿಯನ್ಸ್ ತಂಡ ತನ್ನ ಮುಂದಿನ ಪಂದ್ಯದಲ್ಲಿ ಎದುರಿಸಲಿದೆ. ಅಕ್ಟೋಬರ್ 5ರ ಮಂಗಳವಾರದಂದು ಶಾರ್ಜಾ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ 51ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿದ್ದು ಈ ಪಂದ್ಯದಲ್ಲಿ ಏನಾದರೂ ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತರೆ ಪ್ಲೇ ಆಫ್ ರೇಸ್‌ನಿಂದ ಅಧಿಕೃತವಾಗಿ ಹೊರಬೀಳಲಿದೆ.

For Quick Alerts
ALLOW NOTIFICATIONS
For Daily Alerts
Story first published: Saturday, October 2, 2021, 23:35 [IST]
Other articles published on Oct 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X