Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್: ಬಲಿಷ್ಠ ತಂಡವನ್ನು ಹೆಸರಿಸಿದ ರವಿಚಂದ್ರನ್ ಅಶ್ವಿನ್

IPL 2021 : Ravichandran Ashwin named the strongest team in IPL 2021

2021ರ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದ್ದು ಶುಕ್ರವಾರ ( ಏಪ್ರಿಲ್ 9 ) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ. ಐಪಿಎಲ್ ಹತ್ತಿರವಾಗುತ್ತಿದ್ದಂತೆ ಕೆಲ ಆಟಗಾರರು ಇತರ ತಂಡಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೊರ ಹಾಕುತ್ತಿದ್ದಾರೆ. ರವಿಚಂದ್ರನ್ ಅಶ್ವಿನ್ ಅವರು ಸಹ ಈ ಬಾರಿಯ ಐಪಿಎಲ್ ಕುರಿತು ಮಾತನಾಡಿದ್ದು ಈ ಬಾರಿಯ ಬಲಿಷ್ಠ ತಂಡ ಯಾವುದು ಎಂಬುದನ್ನು ತಿಳಿಸಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿರುವ ಪ್ರತಿ ತಂಡಗಳು ಕೂಡ ಬಲಿಷ್ಠವೇ ಆದರೆ ಮುಂಬೈ ಇಂಡಿಯನ್ಸ್ ತಂಡ ಬಲಿಷ್ಠ ಮತ್ತು ಅನುಭವವುಳ್ಳ ಆಟಗಾರರಿಂದ ಕೂಡಿದೆ. ಪ್ರತಿ ಬಾರಿಯೂ ಐಪಿಎಲ್ ಆರಂಭವಾಗುವ ಮುಂಬೈ ಇಂಡಿಯನ್ಸ್ ತಂಡ ಫೇವರಿಟ್ ಆಗಿರುತ್ತದೆ ಎಂದು ರವಿಚಂದ್ರನ್ ಅಶ್ವಿನ್ ಮುಂಬೈ ಇಂಡಿಯನ್ಸ್ ತಂಡವನ್ನು ಹೊಗಳಿದರು.

ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲನ್ನನುಭವಿಸಿ ಮೊದಲ ಬಾರಿಗೆ ಐಪಿಎಲ್ ಕಪ್ ಎತ್ತಿ ಹಿಡಿಯುವ ಅವಕಾಶವನ್ನು ಕಳೆದುಕೊಂಡಿತ್ತು. ಆದರೆ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಉತ್ತಮವಾಗಿದ್ದು ರಿಷಭ್ ಪಂತ್ ನಾಯಕತ್ವದಡಿಯಲ್ಲಿ ಮತ್ತಷ್ಟು ಚೆನ್ನಾಗಿ ಪ್ರದರ್ಶನ ನೀಡಲಿದೆ ಮತ್ತು ಕಪ್ ಗೆಲ್ಲುವ ಉತ್ತಮ ಅವಕಾಶವಿದೆ ಎಂದು ಅಶ್ವಿನ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

Story first published: Friday, April 9, 2021, 9:52 [IST]
Other articles published on Apr 9, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+