ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಆರ್‌ಸಿಬಿ ತಂಡ ಸೇರಿದ 3 ಹೊಸ ಆಟಗಾರರು; ವಿಶ್ವದ ನಂ.2 ಬೌಲರ್‌ ಬೆಂಗಳೂರು ತೆಕ್ಕೆಗೆ

IPL: Worlds No.2 t20 bowler Wanindu Hasaranga picked by Royal challengers Bangalore for second leg

ಇದೇ ವರ್ಷ ಏಪ್ರಿಲ್ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮೇ 4 ರಂದು ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. 29 ಪಂದ್ಯಗಳು ಯಶಸ್ವಿಯಾಗಿ ಮುಗಿದ ನಂತರ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಕಾರಣದಿಂದ ಎಚ್ಚೆತ್ತ ಬಿಸಿಸಿಐ ತಕ್ಷಣವೇ ಪ್ರಸ್ತುತ ಐಪಿಎಲ್ ಟೂರ್ನಿಯನ್ನು ಸ್ಥಗಿತಗೊಳಿಸಿತ್ತು.

ಕೊಹ್ಲಿಯದ್ದು ಹೊಲಸುಬಾಯಿ; ಆತ ರೂಟ್, ವಿಲಿಯಮ್ಸನ್ ಮತ್ತು ಸಚಿನ್ ರೀತಿ ಉತ್ತಮನಲ್ಲ ಎಂದ ಮಾಜಿ ಕ್ರಿಕೆಟಿಗ!ಕೊಹ್ಲಿಯದ್ದು ಹೊಲಸುಬಾಯಿ; ಆತ ರೂಟ್, ವಿಲಿಯಮ್ಸನ್ ಮತ್ತು ಸಚಿನ್ ರೀತಿ ಉತ್ತಮನಲ್ಲ ಎಂದ ಮಾಜಿ ಕ್ರಿಕೆಟಿಗ!

ಹೀಗೆ ಮಧ್ಯದಲ್ಲಿಯೇ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯ ಉಳಿದ ಭಾಗವನ್ನು ಯುಎಇಯಲ್ಲಿ ಸೆಪ್ಟೆಂಬರ್ ತಿಂಗಳಿನಿಂದ ಆರಂಭಿಸಲು ಬಿಸಿಸಿಐ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂದುವರಿಯಲಿದ್ದು ಎರಡನೇ ಭಾಗಕ್ಕೆ ವಿವಿಧ ತಂಡಗಳ ಕೆಲ ಆಟಗಾರರು ಅಲಭ್ಯರಾಗಿದ್ದಾರೆ. ಹೀಗಾಗಿ ಅಲಭ್ಯರಾಗಿರುವ ಆಟಗಾರರ ಬದಲು ನೂತನ ಆಟಗಾರರನ್ನು ಫ್ರಾಂಚೈಸಿಗಳು ತಮ್ಮ ತಮ್ಮ ತಂಡಗಳಿಗೆ ಸೇರಿಸಿಕೊಳ್ಳುತ್ತಿದ್ದು ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ 3 ನೂತನ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಟಿಟ್ವೆಂಟಿ ವಿಶ್ವಕಪ್‌: 15 ಆಟಗಾರರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಸ್ಥಾನ ಪಡೆದ ಬಲಿಷ್ಠ ಆಟಗಾರಟಿಟ್ವೆಂಟಿ ವಿಶ್ವಕಪ್‌: 15 ಆಟಗಾರರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಸ್ಥಾನ ಪಡೆದ ಬಲಿಷ್ಠ ಆಟಗಾರ

ಶನಿವಾರ ( ಆಗಸ್ಟ್ 21 ) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ತಂಡಕ್ಕೆ ಸೇರಿಸಿಕೊಂಡಿರುವ ನೂತನ ಆಟಗಾರನ ಕುರಿತು ಮಾಹಿತಿಯನ್ನು ಹಂಚಿಕೊಂಡಿದೆ. ಈ ಬಾರಿ ಆಟಗಾರರ ಆಯ್ಕೆಯಲ್ಲಿ ಒಳ್ಳೆಯ ನಿರ್ಣಯಗಳನ್ನು ತೆಗೆದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂವರು ಉತ್ತಮ ಆಟಗಾರರನ್ನೇ ತಂಡಕ್ಕೆ ಸೇರಿಸಿಕೊಂಡಿದೆ. ಅದರಲ್ಲಿಯೂ ವಿಶ್ವದ ಎರಡನೇ ಅತ್ಯುತ್ತಮ ಟಿಟ್ವೆಂಟಿ ಬೌಲರ್‌ನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತೆಕ್ಕೆಗೆ ಹಾಕಿಕೊಂಡಿರುವುದು ಇದೀಗ ದೊಡ್ಡ ಮಟ್ಟದ ಸುದ್ದಿಯಾಗಿದೆ.

ಈ 2 ದೇಶಗಳ ಆಟಗಾರರು ಮಾತ್ರ ಟೆಸ್ಟ್ ಕ್ರಿಕೆಟ್‍ನಲ್ಲಿ ಅತ್ಯುತ್ತಮರು ಎಂದ ನಾಸಿರ್ ಹುಸೇನ್ಈ 2 ದೇಶಗಳ ಆಟಗಾರರು ಮಾತ್ರ ಟೆಸ್ಟ್ ಕ್ರಿಕೆಟ್‍ನಲ್ಲಿ ಅತ್ಯುತ್ತಮರು ಎಂದ ನಾಸಿರ್ ಹುಸೇನ್

ಮುಂದುವರಿಯಲಿರುವ ಐಪಿಎಲ್ ಟೂರ್ನಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ತಂಡಕ್ಕೆ ಸೇರಿಸಿಕೊಂಡಿರುವ 3 ಆಟಗಾರರ ವಿವರ ಈ ಕೆಳಕಂಡಂತಿದೆ..

ಈ ಮೂವರು ಹೊಸ ಆಟಗಾರರ ಸೇರ್ಪಡೆ

ಈ ಮೂವರು ಹೊಸ ಆಟಗಾರರ ಸೇರ್ಪಡೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶನಿವಾರ ( ಆಗಸ್ಟ್ 21 ) ವನಿಂದು ಹಸರಂಗ, ದುಷ್ಮಂತ ಚಮೀರ ಮತ್ತು ಟಿಮ್ ಡೇವಿಡ್ ಈ ಮೂವರು ಆಟಗಾರರನ್ನು ಹೊಸದಾಗಿ ತಂಡಕ್ಕೆ ಸೇರಿಸಿಕೊಂಡಿದೆ. ಮುಂದುವರಿಯಲಿರುವ ಐಪಿಎಲ್ ಟೂರ್ನಿಗೆ ತಂಡದಲ್ಲಿದ್ದ ಕೆಲ ಆಟಗಾರರು ಅಲಭ್ಯರಾದ ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆ ಆಟಗಾರನ ಸ್ಥಾನಕ್ಕೆ ಈ ಮೂವರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ವಿಶ್ವದ ನಂ. 2 ಬೌಲರ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ವಿಶ್ವದ ನಂ. 2 ಬೌಲರ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂವರು ನೂತನ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡು ದೊಡ್ಡ ಸುದ್ದಿಯನ್ನು ಸೃಷ್ಟಿ ಮಾಡಿದೆ. ಅದರಲ್ಲಿಯೂ ವಿಶ್ವದ ನಂ. 2 ಟಿ ಟ್ವೆಂಟಿ ಬೌಲರ್ ಆಗಿರುವ ಶ್ರೀಲಂಕಾದ ವನಿಂದು ಹಸರಂಗ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತೆಕ್ಕೆಗೆ ಹಾಕಿಕೊಂಡಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗಷ್ಟೇ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಭಾರತ ತಂಡದ ವಿರುದ್ಧದ ಸೀಮಿತ ಓವರ್ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದ ವನಿಂದು ಹಸರಂಗ ಭಾರತ ವಿರುದ್ಧದ ಕೊನೆಯ ಟಿ ಟ್ವೆಂಟಿ ಪಂದ್ಯದಲ್ಲಿ 4 ವಿಕೆಟ್ ಪಡೆದು ಮಿಂಚಿದ್ದರು. ಇಂತಹ ಉತ್ತಮ ಬೌಲರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾಗಿರುವುದು ಇದೀಗ ಬೆಂಗಳೂರು ಅಭಿಮಾನಿಗಳಲ್ಲಿ ಸಂತಸವನ್ನುಂಟುಮಾಡಿದೆ.

ದಿಗ್ಗಜ ಬೌಲರ್ಗಳಿಗೆ ಭಯ ಹುಟ್ಟಿಸಿದ ಸಿರಾಜ್ | Oneindia Kannada
ಯಾರ ಸ್ಥಾನಕ್ಕೆ ಯಾರೂ ಸೇರ್ಪಡೆ?

ಯಾರ ಸ್ಥಾನಕ್ಕೆ ಯಾರೂ ಸೇರ್ಪಡೆ?

ಮುಂದುವರಿಯಲಿರುವ ಐಪಿಎಲ್ ಟೂರ್ನಿಯ ಸಲುವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂವರು ಹೊಸ ಆಟಗಾರರನ್ನು ತಂಡದಿಂದ ಹೊರ ನಡೆದಿರುವ ಈ ಮೂವರು ಆಟಗಾರರ ಸ್ಥಾನಕ್ಕೆ ಆಯ್ಕೆ ಮಾಡಿಕೊಂಡಿದೆ..

1. ಆ್ಯಡಮ್ ಜಂಪಾ ಸ್ಥಾನಕ್ಕೆ ವನಿಂದು ಹಸರಂಗ
2. ಕೇನ್ ರಿಚರ್ಡ್ಸನ್ ಸ್ಥಾನಕ್ಕೆ ದುಷ್ಮಂತ ಚಮೀರ
3. ಫಿನ್ ಅಲೆನ್ ಸ್ಥಾನಕ್ಕೆ ಟಿಮ್ ಡೇವಿಡ್

Story first published: Saturday, August 21, 2021, 16:38 [IST]
Other articles published on Aug 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X