ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB : ಐಪಿಎಲ್‌ ಉದ್ಘಾಟನಾ ಪಂದ್ಯದಲ್ಲಿ ಪ್ರಥಮ ಗೆಲುವು ಸಾಧಿಸಿದ ಆರ್‌ಸಿಬಿ

IPL 2021: RCB first time won season opener in IPL history

14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಭರ್ಜರಿಯಾಗಿ ಆರಂಭಿಸಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯವನ್ನು ಕೊಹ್ಲಿ ಪಡೆ 2 ವಿಕೆಟ್‌ಗಳ ಅಂತರದಿಂದ ರೋಚಕವಾಗಿ ಗೆಲ್ಲುವ ಮೂಲಕ ಐಪಿಎಲ್‌ನಲ್ಲಿ ಉದ್ಘಾಟನಾ ಪಂದ್ಯದಲ್ಲಿ ಪ್ರಪ್ರಥಮ ಗೆಲುವು ಸಾಧಿಸಿದೆ.

ಕಳೆದ 13 ಆವೃತ್ತಿಗಳಲ್ಲಿ ಆರ್‌ಸಿಬಿ 3 ಬಾರಿ ಉದ್ಘಾಟನಾ ಪಂದ್ಯದಲ್ಲಿ ಪಾಲ್ಗೊಂಡಿತ್ತು. ಆದರೆ ಈ ಮೂರು ಬಾರಿಯೂ ಆರ್‌ಸಿಬಿ ತಂಡಕ್ಕೆ ಗೆಲುವು ಸಾಧ್ಯವಾಗಿರಲೇ ಇಲ್ಲ. ಈಗ 4ನೇ ಬಾರಿ ಆರ್‌ಸಿಬಿ ತನ್ನ ಅದೃಷ್ಟ ಪರೀಕ್ಷೆಯಲ್ಲಿ ಇಳಿದು ರೋಚಕ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಕೆಟ್ಟ ದಾಖಲೆಯೊಂದರ ಅಂತ್ಯವಾಗಿದೆ.

ಐಪಿಎಲ್ 2021: ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳುಳ್ಳ ವಿಶೇಷ ಪುಟದ ಲಿಂಕ್

2008ರಲ್ಲಿ ಐಪಿಎಲ್ ಉದ್ಘಾಟನಾ ಟೂರ್ನಿಯ ಆರಂಭಿಕ ಪಂದ್ಯದಲ್ಲಿಯೇ ಆರ್‌ಸಿಬಿ ತಂಡ ಆಡುವ ಅದೃಷ್ಟವನ್ನು ಗಳಿಸಿಕೊಂಡಿತ್ತು. ಆದರೆ ಆ ಪಂದ್ಯ ಆರ್‌ಸಿಬಿ ಪಾಲಿಗೆ ಸ್ಮರಣೀಯವಾಗಿರಲಿಲ್ಲ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಅತ್ಯಂತ ಹೀನಾಯವಾಗಿ ಸೋಲು ಕಂಡಿತ್ತು. ಮೆಕಲಮ್ ಬಾರಿಸಿದ ಬಿರುಗಾಳಿಯಂಥ ಶತಕದ ನೆರವಿನಿಂದ ಕೆಕೆಆರ್ ತಂಡ 3 ವಿಕೆಟ್ ಕಳೆದುಕೊಂಡು 222 ರನ್‌ಗಳಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಆರ್‌ಸಿಬಿ ಕೇವಲ 82 ರನ್‌ಗಳಿಗೆ ಆಲೌಟ್ ಆಗಿತ್ತು.

ಬಳಿಕ ಬರೊಬ್ಬರಿ 9 ವರ್ಷದ ನಂತರ ಆರ್‌ಸಿಬಿ ಐಪಿಎಲ್‌ನ ಉದ್ಘಾಟನಾ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿತ್ತು. ಈ ಬಾರಿ ಆರ್‌ಸಿಬಿಗೆ ಎದುರಾಳಿಯಾಗಿದ್ದ ತಂಡ ಸನ್‌ರೈರರ್ಸ್ ಹೈದರಾಬಾದ್. ಈ ಪಂದ್ಯವನ್ನೂ ಆರ್‌ಸಿಬಿ ದೊಡ್ಡ ಅಂತರದಿಂದಲೇ ಕಳೆದುಕೊಂಡಿತ್ತು. ಮೊದಲಿಗೆ ಬ್ಯಾಟಿಂಗ್ ಮಾಡಿದ ಎಸ್‌ಆರ್‌ಹೆಚ್ ತಂಡ 207 ರನ್‌ಗಳನ್ನು ಗಳಿಸಿತ್ತು. ಇದನ್ನು ಬೆನ್ನಟ್ಟಿದ ಆರ್‌ಸಿಬಿ 172 ರನ್‌ಗಳಿಗೆ ಆಲೌಟ್ ಆಗಿ ಶರಣಾಗಿತ್ತು.

ಆದರೆ ನಾಲ್ಕನೇ ಪ್ರಯತ್ನದಲ್ಲಿ ಕೊಹ್ಲಿ ಪಡೆ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಮೊದಲ ಬಾರಿಗೆ ಗೆಲುವಿನ ರುಚಿ ಕಂಡಿದೆ. ಈ ಗೆಲುವು ಹಾಲಿ ಚಾಂಪಿಯನ್ನರ ವಿರುದ್ಧ ಪಡೆದಿರುವುದು ತಂಡದ ಹುಮ್ಮಸ್ಸನ್ನು ಸಹಜವಾಗಿಯೇ ಹೆಚ್ಚಿಸಿದೆ.

Story first published: Saturday, April 10, 2021, 10:32 [IST]
Other articles published on Apr 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X