ಮತ್ತೆ ಬಂತು ಅದೇ ದಿನ ; ಕೆಕೆಆರ್ ವಿರುದ್ಧ 13 ವರ್ಷಗಳ ಹಳೆ ಸೇಡು ತೀರಿಸಿಕೊಳ್ಳುತ್ತಾ ಆರ್‌ಸಿಬಿ?

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ( ಏಪ್ರಿಲ್ 18 ) ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ 13 ವರ್ಷಗಳ ಹಿಂದಿನ ಸೇಡು ತೀರಿಸಿಕೊಳ್ಳುವ ಅವಕಾಶವಿದೆ.
2018, ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾದ ವರ್ಷವದು. ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಏಪ್ರಿಲ್ 18, 2008ರಂದು ನಡೆದಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸೌರವ್ ಗಂಗೂಲಿ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಬರೋಬ್ಬರಿ 222 ರನ್ ಗಳಿಸಿತ್ತು. ಕೊಲ್ಕತ್ತಾ ಪರ ಬ್ರೆಂಡನ್ ಮೆಕಲಮ್ 73 ಎಸೆತಗಳಲ್ಲಿ ಅಜೇಯ 158 ರನ್ ಗಳಿಸಿ ಮಿಂಚಿದ್ದರು. 223 ರನ್‌ಗಳ ಗುರಿಯನ್ನು ಬೆನ್ನತ್ತಿದ ರಾಹುಲ್ ದ್ರಾವಿಡ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15.1 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‍ಗಳನ್ನು ಕಳೆದುಕೊಂಡು 82 ರನ್ ಗಳಿಸಿ ಹೀನಾಯ ಸೋಲನ್ನನುಭವಿಸಿತು.
ಈ ಪಂದ್ಯ ನಡೆದು ಇಂದಿಗೆ ( ಏಪ್ರಿಲ್ 18, ಭಾನುವಾರ) ಸರಿಯಾಗಿ 13 ವರ್ಷಗಳು ಕಳೆದಿವೆ. 13 ವರ್ಷಗಳ ಹಿಂದೆ ನಡೆದಿದ್ದ ರೀತಿ ಇಂದೂ ಸಹ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಪಂದ್ಯವಿದೆ. ಈಗಾಗಲೇ ಟೂರ್ನಿಯಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದು ಯಶಸ್ಸಿನ ಹಾದಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ 13 ವರ್ಷಗಳ ಹಿಂದಿನ ಸೇಡನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ತೀರಿಸಿಕೊಳ್ಳುತ್ತಾ ಕಾದು ನೋಡಬೇಕು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications