ಐಪಿಎಲ್ ಆರಂಭದ ಹೊಸ್ತಿಲಲ್ಲೇ ಆರ್‌ಸಿಬಿಗೆ ಹಿನ್ನಡೆ, ಪ್ರಮುಖ ಆಟಗಾರ ಅಲಭ್ಯ!

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭದ ಹೊಸ್ತಿಲ್ಲಲ್ಲೇ ಆಕರ್ಷಣೀಯ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಹಿನ್ನಡೆಯ ಸಂಗತಿಯೊಂದು ಕೇಳಿ ಬಂದಿದೆ. ಆರ್‌ಸಿಬಿಯ ಪ್ರಮುಖ ಸ್ಪಿನ್ನರ್, ಆಸ್ಟ್ರೇಲಿಯಾದ ಪ್ರಭಾವಿ ಯುವ ಆಟಗಾರ ಆ್ಯಡಮ್ ಜಂಪಾ 2021ರ ಐಪಿಎಲ್ ಟೂರ್ನಿಯ ಆರಂಭಿಕ ಕೆಲ ಪಂದ್ಯಗಳಲ್ಲಿ ಆಡುತ್ತಿಲ್ಲ.
14ನೇ ಆವೃತ್ತಿ ಐಪಿಎಲ್‌ನ ಆರಂಭಿಕ ಪಂದ್ಯದಲ್ಲಿ ಲೆಗ್ ಸ್ಪಿನ್ನರ್ ಆ್ಯಡಂ ಜಂಪಾ ಅವರು ಆಡುತ್ತಿಲ್ಲ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಕ್ರಿಕೆಟ್ ನಿರ್ದೇಶಕ ಮೈಕ್ ಹೆಸನ್ ಬುಧವಾರ (ಮಾರ್ಚ್ 24) ಖಾತರಿಪಡಿಸಿದ್ದಾರೆ. ಮದುವೆಗೆ ಸಿದ್ಧತೆ ನಡೆಸುತ್ತಿರುವುದರಿಂದ ಜಂಪಾ ಆರಂಭಿಕ ಕೆಲ ಪಂದ್ಯಗಳಲ್ಲಿ ಆಡುತ್ತಿಲ್ಲ ಎನ್ನಲಾಗಿದೆ.
ಏಪ್ರಿಲ್ 9ರಿಂದ ಮೇ 30ರ ವರೆಗೆ ಈ ಬಾರಿಯ ಐಪಿಎಲ್ ಟೂರ್ನಿ ನಡೆಯಲಿದೆ. ಆರಂಭಿಕ ಪಂದ್ಯ ಚೆನ್ನೈನಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಾದಾಡಲಿವೆ. ಈ ಪಂದ್ಯದಲ್ಲಿ ಜಂಪಾ ಕಣಕ್ಕಿಳಿಯುತ್ತಿಲ್ಲ.
ಐಪಿಎಲ್‌ಗಾಗಿ ಸಿದ್ಧತೆ ನಡೆಸುತ್ತಿರುವ ಫ್ರಾಂಚೈಸಿಗಳ ಆಟಗಾರರು ಸದ್ಯ ಕಡ್ಡಾಯ ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಏಪ್ರಿಲ್ ಮೊದಲ ವಾರದಲ್ಲಿ ಆರ್‌ಸಿಬಿ ಎಲ್ಲ ಆಟಗಾರರು ಜೊತೆಯಾಗುವುದನ್ನು ನಿರೀಕ್ಷಿಸಲಾಗಿದೆ. ಮಾರ್ಚ್ 29ರಿಂದ ಆರ್‌ಸಿಬಿ ಅಭ್ಯಾಸ ಆರಂಭಿಸಲಿದೆ. ಮದುವೆ ನಿಮಿತ್ತ ತಡವಾಗಿ ತಂಡ ಸೇರಿಕೊಳ್ಳಲಿರುವ ಜಂಪಾ ಅದಕ್ಕೂ ಮುನ್ನ 7 ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications