Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಹೈದರಾಬಾದ್‌ಗೆ ಸಾಧಾರಣ ಮೊತ್ತದ ಗುರಿ ನೀಡಿದ ಕೊಹ್ಲಿ ಪಡೆ

IPL 2021: RCB set 150 runs target to sunrisers hyderabad

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಳಗ ದೊಡ್ಡ ಮೊತ್ತದ ಗುರಿಯನ್ನು ನೀಡುವಲ್ಲಿ ವಿಫಲವಾಗಿದೆ. ಆದರೆ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಜವಾಬ್ಧಾರಿಯುತ ಆಟದಿಂದಾಗಿ ತಂಡ 150 ರನ್‌ಗಳ ಗುರಿಯನ್ನು ಎದುರಾಳಿಗೆ ನೀಡುವಲ್ಲಿ ಯಶಸ್ವಿಯಾಗಿದೆ.

ಚೆನ್ನೈನ ಸವಾಲಿನ ಪಿಚ್‌ನಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿಯಿತು ಆರ್‌ಸಿಬಿ. ಆದರೆ ಯುವ ಆಟಗಾರ ದೇವದತ್ ಪಡಿಕ್ಕಲ್ 11 ರನ್‌ಗೆ ವಿಕೆಟ್ ಒಪ್ಪಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಹ್ಬಾಜ್ ಅಹ್ಮದ್ ಕೂಡ 14 ರನ್‌ಗಳನ್ನಷ್ಟೇ ಸೇರಿಸಿದರು. ಈ ಸಂದರ್ಭದಲ್ಲಿ ಉತ್ತಮ ಆಟ ಪ್ರದರ್ಶಿಸುತ್ತಿದ್ದ ನಾಯಕ ವಿರಾಟ್ ಕೊಹ್ಲಿ ಕೂಡ ವಿಕೆಟ್ ಒಪ್ಪಿಸಿ ಹೊರನಡೆದರು.

ವಿರಾಟ್ ಕೊಹ್ಲಿ ಔಟಾಗುದ ತಕ್ಷಣವೇ ಆರ್‌ಸಿಬಿ ಮತ್ತೊಂದು ದೊಡ್ಡ ವಿಕೆಟ್ ಕಳೆದುಕೊಂಡಿತು. ಅನುಭವಿ ಡಿವಿಲಿಯರ್ಸ್ ಕೇವಲ 1 ರನ್‌ಗಳಿಸಿ ಔಟಾದರು. ಈ ವೇಳೆಗೆ ತಂಡ 95 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತ್ತು. ಆದರೆ ಕ್ರೀಸ್‌ನಲ್ಲಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಎಚ್ಚರಿಕೆಯಿಂದ ಇನ್ನಿಂಗ್ಸ್ ಮುಂದುವರಿಸಿದರು.

ಇನ್ನೊಂದು ತುದಿಯಲ್ಲಿ ಉತ್ತಮ ಬೆಂಬಲ ದೊರೆಯದಿದ್ದರೂ ಗ್ಲೆನ್ ಮ್ಯಾಕ್ಸ್‌ವೆಲ್ ತಂಡದ ಮೊತ್ತ 150ರ ಗಡಿ ತಲುಪಲು ಕಾರಣರಾದರು. ಈ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ 4 ವರ್ಷದ ನಂತರ ಐಪಿಎಲ್‌ನಲ್ಲಿ ಅರ್ಧಶತಕವನ್ನು ದಾಖಲಿಸಿದ ಸಾಧನೆ ಮಾಡಿದರು. ಅಂತಿಮವಾಗಿ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 149 ರನ್‌ಗಳಿಸಿತು.

Story first published: Wednesday, April 14, 2021, 21:54 [IST]
Other articles published on Apr 14, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+