ಐಪಿಎಲ್ 2021: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ ಸ್ಫೋಟಕ ಆಲ್‌ರೌಂಡರ್

ಇದೇ ವರ್ಷದ ಏಪ್ರಿಲ್ 9 ನೇ ತಾರೀಕಿನಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಪಂದ್ಯಗಳವರೆಗೆ ಯಾವುದೇ ಅಡಚಣೆಯಿಲ್ಲದೆ ನಡೆಯಿತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಎಚ್ಚೆತ್ತ ಬಿಸಿಸಿಐ ತಕ್ಷಣವೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ಈ ಹಿಂದೆಯೇ ತೀರ್ಮಾನಿಸಿತ್ತು. ಬಿಸಿಸಿಐ ತೀರ್ಮಾನದಂತೆ ಸೆಪ್ಟೆಂಬರ್ 19 ರಿಂದ ಯುಎಈಯಲ್ಲಿ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂದುವರಿಯಲಿದ್ದು ವಿವಿಧ ತಂಡಗಳ ಆಟಗಾರರಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ.
ಯುಎಇಯಲ್ಲಿ ಮುಂದುವರಿಯಲಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳನ್ನಾಡಲು ವಿವಿಧ ತಂಡಗಳ ಕೆಲ ಆಟಗಾರರು ಅಲಭ್ಯರಾದ ಕಾರಣ ಪರ್ಯಾಯ ಆಟಗಾರರನ್ನು ವಿವಿಧ ತಂಡಗಳು ಆಯ್ಕೆ ಮಾಡಿಕೊಂಡಿವೆ. ಅದರಲ್ಲಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇತ್ತೀಚೆಗಷ್ಟೇ ಮೂವರು ಆಟಗಾರರನ್ನು ಆಯ್ಕೆ ಮಾಡಿಕೊಳ್ಳುವುದರ ಮೂಲಕ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಅದರಲ್ಲಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದುವರಿಯಲಿರುವ ಐಪಿಎಲ್ ಟೂರ್ನಿಗೆ ಟಿಮ್ ಡೇವಿಡ್ ಮತ್ತು ವನಿಂದು ಹಸರಂಗ ಅವರನ್ನು ಆಯ್ಕೆ ಮಾಡಿಕೊಂಡಿದ್ದು ಸಿಕ್ಕಾಪಟ್ಟೆ ಸದ್ದು ಮಾಡಿತ್ತು.
ಇದಾದ ಬೆನ್ನಲ್ಲೇ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೋರ್ವ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡಿದ್ದು ಈ ಬಾರಿ ಆಲ್‌ರೌಂಡರ್ ಆಟಗಾರನಿಗೆ ಬಲೆ ಹಾಕಿದೆ. ಇಂಗ್ಲೆಂಡ್ ಮೂಲದ ಜಾರ್ಜ್ ಗಾರ್ಟನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಸಿಕೊಂಡಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಎಲ್ಲಾ ವಿದೇಶಿ ಆಟಗಾರರ ಸ್ಥಾನವನ್ನು ಯಶಸ್ವಿಯಾಗಿ ತುಂಬಿಸಿಕೊಂಡಿದೆ.

ದ ಹಂಡ್ರೆಡ್ ಟೂರ್ನಿಯಲ್ಲಿ ಗಾರ್ಟನ್ ಮಿಂಚು
ಮೂಲತಃ ಇಂಗ್ಲೆಂಡ್ ಕ್ರಿಕೆಟಿಗನಾದ ಜಾರ್ಜ್ ಗಾರ್ಟನ್ ಇತ್ತೀಚೆಗಷ್ಟೇ ಇಂಗ್ಲೆಂಡ್ ನೆಲದಲ್ಲಿ ನಡೆದ ದ ಹಂಡ್ರೆಡ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಆವೃತ್ತಿಯಲ್ಲಿ ಸದರ್ನ್ ಬ್ರೇವ್ ತಂಡದ ಪರ 9 ಪಂದ್ಯಗಳನ್ನಾಡಿ 10 ವಿಕೆಟ್ ಪಡೆದು ಮಿಂಚಿದ್ದಾರೆ. ಈ ಮೂಲಕ ದ ಹಂಡ್ರೆಡ್ ಕ್ರಿಕೆಟ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ ಮೂರನೇ ಬೌಲರ್ ಎಂಬ ಮೈಲಿಗಲ್ಲನ್ನು ಜಾರ್ಜ್ ಗಾರ್ಟನ್ ನೆಟ್ಟಿದ್ದಾರೆ.

ಜಾರ್ಜ್ ಗಾರ್ಟನ್ ಟಿಟ್ವೆಂಟಿ ಕೆರಿಯರ್
24 ವರ್ಷದ ಜಾರ್ಜ್ ಗಾರ್ಟನ್ ಇದುವರೆಗೂ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪದಾರ್ಪಣೆಯನ್ನು ಮಾಡಿಲ್ಲ. ತನ್ನ ಟಿ ಟ್ವೆಂಟಿ ಕ್ರಿಕೆಟ್ ವೃತ್ತಿಜೀವನದಲ್ಲಿ 38 ಪಂದ್ಯಗಳನ್ನಾಡಿರುವ ಜಾರ್ಜ್ ಗಾರ್ಟನ್ 44 ವಿಕೆಟ್‍ಗಳನ್ನು ಪಡೆದು ಮಿಂಚಿದ್ದಾರೆ. ಹಾಗೂ 14 ಟಿ ಟ್ವೆಂಟಿ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿರುವ ಜಾರ್ಜ್ ಗಾರ್ಟನ್ 187 ರನ್ ಕಲೆಹಾಕಿದ್ದಾರೆ.

ಜಾರ್ಜ್ ಗಾರ್ಟನ್ ಸೇರ್ಪಡೆ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ಮೊಹಮ್ಮದ್ ಸಿರಾಜ್, ಯಜುರ್ವೇದ ಚಾಹಲ್, ಕೈಲ್ ಜೆಮಿಸನ್, ಕ್ರಿಶ್ಚಿಯನ್, ವನಿಂದು ಹಸರಂಗ, ದೇವದತ್ ಪಡಿಕ್ಕಲ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಜಾರ್ಜ್ ಗಾರ್ಟನ್, ದುಷ್ಮಂತ ಚಮೀರಾ, ಕೆಎಸ್ ಭಾರತ್, ಸುಯಾಶ್, ಅಜರುದ್ದೀನ್, ರಜತ್ ಪಾಟಿದಾರ್, ನವದೀಪ್ ಸೈನಿ, ಹರ್ಷಲ್ ಪಟೇಲ್, ವಾಷಿಂಗ್ಟನ್ ಸುಂದರ್, ಸಚಿನ್ ಬೇಬಿ, ಪವನ್ ದೇಶಪಾಂಡೆ, ಎಸ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications