
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅದ್ಭುತ ಪ್ರದರ್ಶನ ನೀಡುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ದಯಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭರ್ಜರಿ 7 ವಿಕೆಟ್‌ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದೆ. 150 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ ಪರವಾಗಿ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಶ್ರೀಕರ್ ಭರತ್ ಜೋಡಿ ಮೂರನೇ ವಿಕೆಟ್‌ಗೆ 69 ರನ್‌ಗಳ ಜೊತೆಯಾಟವನ್ನು ನೀಡುವ ಮೂಲಕ ತಂಡಕ್ಕೆ ಈ ಗುರಿ ಮತ್ತಷ್ಟು ಸುಲಭವಾಗಿತ್ತು. ಅಂತಿಮವಾಗಿ 17.1 ಓವರ್‌ಗಳಲ್ಲಿಯೇ ಆರ್‌ಸಿಬಿ ಈ ಗುರಿಯನ್ನು ತಲುಪಿ ಗೆದ್ದು ಬೀಗಿದೆ.
ಈ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದು ತಂಡದ ಬೌಲಿಂಗ್ ವಿಭಾಗದ ಪ್ರದರ್ಶನವನ್ನು ಕೊಂಡಾಡಿದ್ದಾರೆ. ಸತತ ಎರಡು ಪಂದ್ಯಗಳಲ್ಲಿ ಬೌಲರ್‌ಗಳು ಕಮ್‌ಬ್ಯಾಕ್ ಮಾಡಿದ ರೀತಿಯನ್ನು ಕೊಹ್ಲಿ ಪ್ರಶಂಸಿಸಿದ್ದಾರೆ. "ಬೌಲಿಂಗ್‌ನಲ್ಲಿ ನಾವು ಸತತ ಎರಡು ಪಂದ್ಯಗಳಲ್ಲಿ ಅದ್ಭುತ ರೀತಿಯಲ್ಲಿ ಕಮ್‌ಬ್ಯಾಕ್ ಮಾಡಿದ್ದೇವೆ. ಅದು ತುಂಬಾ ಉತ್ತಮವಾದ ಸೂಚನೆಯಾಗಿದೆ. ಬೌಲಿಂಗ್‌ನಲ್ಲಿ ನಾವು ಅಂದುಕೊಂಡಿದ್ದು ಸಾಧಿಸಲು ಸಾಧ್ಯವಾದರೆ ನಮ್ಮ ಯೋಜನೆಯಂತೆಯೇ ಮುಂದುವರಿಯಲು ಸಾಧ್ಯವಾಗುತ್ತದೆ" ಎಂದು ವಿರಾಟ್ ಕೊಹ್ಲಿ ಪಂದ್ಯದ ಮುಕ್ತಾಯದ ಬಳಿಕ ಮಾತನಾಡುತ್ತಾ ಹೇಳಿದ್ದಾರೆ.
"ಎರಡು ಪಂದ್ಯಗಳಲ್ಲಿಯೂ ಎದುರಾಳಿ ತಂಡ ಪವರ್‌ಪ್ಲೇನಲ್ಲಿ 56/0 ರನ್‌ಗಳನ್ನು ಗಳಿಸಿತ್ತು. ಆದರೆ ಎರಡು ಪಂದ್ಯಗಳಲಲ್ಇಯೂ ನಂತರ ಮಾವು ಇಕೆಟ್ ಪಡೆಯುವ ಮೂಲಕ ಹೆಚ್ಚಿನ ರನ್‌ಗಳಿಸಲದಂತೆ ನೋಡಿಕೊಳ್ಳುವಲ್ಲಿ ಸಫಲವಾದೆವು. ಅಷ್ಟು ಉತ್ತಮವಾದ ಬೌಲಿಂಗ್ ಪಡೆಯನ್ನು ನಾವು ಹೊಂದಿದ್ದೇವೆ ಎಂದು ನಮಗೆ ತಿಳಿದಿತ್ತು. ಇವುಗಳೆಲ್ಲಾ ನಾವು ವಿಕೆಟ್ ತೆಗೆದಾಗಲಷ್ಟೇ ನಡೆಯಲು ಸಾಧ್ಯವಿದೆ" ಎಂದಿದ್ದಾರೆ. ನಾಯಕ ವಿರಾಟ್ ಕೊಹ್ಲಿ.
ಈ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ 30 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿದರೆ 35 ಎಸೆತಗಳನ್ನು ಎದುರಿಸಿದ ಭರತ್ 44 ರನ್‌ಗಳ್ನು ಗಳಿಸಿದರು. ರಾಜಸ್ಥಾನ್ ರಾಯಲ್ಸ್ ತಂಡದ ಪರವಾಗಿ ಮುಸ್ತಫಿಜುರ್ ರಹ್ಮಾನ್ 20 ರನ್‌ಗಳಿಗೆ 2 ವಿಕೆಟ್ ಕೀಳುವ ಮೂಲಕ ಮಿಂಚಿದರು.
ಸದ್ಯ ಯುಎಇಯಲ್ಲಿ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಏಳನೇ ಗೆಲುವನ್ನು ಸಾಧಿಸಿದೆ. ಸೆಪ್ಟೆಂಬರ್ 29ರ ಬುಧವಾರದಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ವಿಕೆಟ್‍ಗಳ ಗೆಲುವನ್ನು ಸಾಧಿಸುವುದರ ಮೂಲಕ ಪ್ಲೇ ಆಫ್ ಸುತ್ತಿಗೆ ಮತ್ತಷ್ಟು ಸನಿಹವಾಗಿದೆ.
ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭದಲ್ಲಿ ಸತತವಾಗಿ 4 ಪಂದ್ಯಗಳನ್ನು ಗೆಲ್ಲುವುದರ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಧ್ಯದಲ್ಲಿ ಹ್ಯಾಟ್ರಿಕ್ ಸೋಲನ್ನು ಕಂಡು ಮಂಕಾಗಿತ್ತು. ಅದರಲ್ಲಿಯೂ ಟೂರ್ನಿ ಯುಎಇಗೆ ಸ್ಥಳಾಂತರಿಸಲ್ಪಟ್ಟ ನಂತರ ಸಾಲು ಸಾಲು ಪಂದ್ಯಗಳಲ್ಲಿ ಸೋತು ಕಳಪೆ ಪ್ರದರ್ಶನ ನೀಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಪ್ಟೆಂಬರ್ 26ರ ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವುದರ ಮೂಲಕ ಗೆಲುವಿನ ಹಾದಿಗೆ ಮರಳಿತ್ತು.