For Quick Alerts
ALLOW NOTIFICATIONS  
For Daily Alerts
 

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಸೋಲು

IPL 2021, RCB vs CSK, 35th Match, Chennai Super Kings won by 6 wickets

ಶಾರ್ಜಾ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ (ಸೆಪ್ಟೆಂಬರ್ 24) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 35ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೆಟ್ ಸೋಲನುಭವಿಸಿದೆ. ದೇವದತ್ ಪಡಿಕ್ಕಲ್ ಮತ್ತು ನಾಯಕ ವಿರಾಟ್ ಕೊಹ್ಲಿ ಅದ್ಭುತ ಆರಂಭಿಕ ಆಟದ ಹೊರತಾಗಿಯೂ ಬೆಂಗಳೂರು ನಿರಾಸೆ ಅನುಭವಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಾಯಕ ವಿರಾಟ್ ಕೊಹ್ಲಿ, 53, ದೇವದತ್ ಪಡಿಕ್ಕಲ್ 70, ಎಬಿ ಡಿ ವಿಲಿಯರ್ಸ್ 12, ಗ್ಲೆನ್ ಮ್ಯಾಕ್ಸ್‌ವೆಲ್ 11, ಹರ್ಷಲ್ ಪಟೇಲ್ 3, ಟಿಮ್ ಡೇವಿಡ್ 1, ವನಿಂದು ಹಸರಂಗ 1 ರನ್‌ನೊಂದಿಗೆ 20 ಓವರ್‌ಗೆ 6 ವಿಕೆಟ್ ಕಳೆದು 156 ರನ್ ಗಳಿಸಿತ್ತು.

ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್, ಋತುರಾಜ್ ಗಾಯಕ್ವಾಡ್ 38, ಫಾಫ್ ಡು ಪ್ಲೆಸಿಸ್ 31, ಮೊಯೀಸ್ ಅಲಿ 23, ಅಂಬಾಟಿ ರಾಯುಡು 32, ಸುರೇಶ್ ರೈನಾ 17, ಎಂಎಸ್ ಧೋನಿ 11 ರನ್‌ನೊಂದಿಗೆ 18.1 ಓವರ್‌ಗೆ 4 ವಿಕೆಟ್ ಕಳೆದು 157 ರನ್ ಗಳಿಸಿ ಗೆಲುವನ್ನಾಚರಿಸಿತು.

ಬೆಂಗಳೂರು ಇನ್ನಿಂಗ್ಸ್‌ನಲ್ಲಿ ಚೆನ್ನೈಯ ದೀಪಕ್ ಚಾಹರ್ 1, ಶಾರ್ದೂಲ್ ಠಾಕೂರ್ 2, ಡಿಜೆ ಬ್ರಾವೋ 3 ವಿಕೆಟ್‌ ಪಡೆದರೆ, ಚೆನ್ನೈ ಇನ್ನಿಂಗ್ಸ್‌ನಲ್ಲಿ ಆರ್‌ಸಿಬಿಯ ಹರ್ಷಲ್ ಪಟೇಲ್ 2, ಯುಜುವೇಂದ್ರ ಚಾಹಲ್ 1, ಗ್ಲೆನ್ ಮ್ಯಾಕ್ಸ್‌ವೆಲ್ 1 ವಿಕೆಟ್ ಪಡೆದರು. ಬ್ರಾವೋ ಪಂದ್ಯಶ್ರೇಷ್ಠರೆನಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ಋತುರಾಜ್ ಗಾಯಕವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ (ಡಬ್ಲ್ಯೂ/ಸಿ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹೇಜಲ್‌ವುಡ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ವಿರಾಟ್ ಕೊಹ್ಲಿ (ಸಿ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ಡಬ್ಲ್ಯೂ), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಟಿಮ್ ಡೇವಿಡ್, ವಾನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಯುಜ್ವೇಂದ್ರ ಚಾಹಲ್.

Story first published: Saturday, September 25, 2021, 10:31 [IST]
Other articles published on Sep 25, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+