ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಚೆನ್ನೈ ವಿರುದ್ಧ ಸೋಲಿನ ಬೆನ್ನಲೇ ವಿರಾಟ್ ಕೊಹ್ಲಿಗೆ ದಂಡದ ಬರೆ

IPL 2021: RCb vs CSK: Virat Kohli has been fined INR 12 Lakh for maintaining a slow over-rate

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಆರ್‌ಸಿಬಿ ಹೀನಾಯವಾಗಿ ಸೋಲು ಕಂಡಿದೆ. ಈ ಸೋಲಿನ ಬೆನ್ನಲ್ಲೇ ಈಗ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿಗ ದಂಡದ ಬರೆ ಬಿದ್ದಿದೆ. ನಿಧಾನಗತಿಯ ಬೌಲಿಂಗ್‌ನಿಂದಾಗಿ ನಿಗದಿತ ಸಮಯದಲ್ಲಿ ಇನ್ನಿಂಗ್ಸ್ ಪೂರ್ತಿಗೊಳಿಸದ ಕಾರಣಕ್ಕೆ ವಿರಾಟ್ ಕೊಹ್ಲಿ 12 ಲಕ್ಷ ರೂಪಾಯಿ ದಂಡಕ್ಕೆ ಗುರಿಯಾಗಿದ್ದಾರೆ.

ಈ ಬಾರಿಯ ಐಪಿಎಲ್‌ನಲ್ಲಿ ನಿಗದಿತ ಸಮಯದೊಳಗೆ ಇನ್ನಿಂಗ್ಸ್ ಅಂತ್ಯಗೊಳಿಸಲು ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. 20 ಓವರ್‌ಗಳ ಇನ್ನಿಂಗ್ಸ್‌ಅನ್ನು 90 ನಿಮಿಷಗಳಲ್ಲಿ ಕಡ್ಡಾಯವಾಗಿ ಪೂರ್ಣಗೊಳಸಬೇಕು ಎಂದು ಬಿಸಿಸಿಐ ಈ ಬಾರಿ ನಿಯಮವನ್ನು ರೂಪಿಸಿದೆ.

ಐಪಿಎಲ್ 2021: ಹೈದರಾಬಾದ್ ವಿರುದ್ಧ ಸೂಪರ್ ಓವರ್‌ನಲ್ಲಿ ಗೆದ್ದ ಡೆಲ್ಲಿಐಪಿಎಲ್ 2021: ಹೈದರಾಬಾದ್ ವಿರುದ್ಧ ಸೂಪರ್ ಓವರ್‌ನಲ್ಲಿ ಗೆದ್ದ ಡೆಲ್ಲಿ

ವಿರಾಟ್ ಕೊಹ್ಲಿ ಈ ಬಾರಿಯ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಆರ್‌ಸಿಬಿ ತಂಡ ಎರಡನೇ ಬಾರಿ ನಿಧಾನಗತಿಯ ಬೌಲಿಂಗ್ ಮಾಡಿದಲ್ಲಿ 24 ಲಕ್ಷ ರೂಪಾಯಿಯ ದಂಡವನ್ನು ಕೊಹ್ಲಿ ಪಾವತಿಸಬೇಕಾಗುತ್ತದೆ. ಇದರ ಜೊತೆಗೆ ತಂಡದ ಸದಸ್ಯರು ಕೂಡ ಪಂದ್ಯದ ಸಂಭಾವನೆಯ 25% ದಂಡ ಪಾವತಿಸಬೇಕಾಗುತ್ತದೆ.

ಮೂರನೇ ಇದು ಮುಂದುವರಿದಲ್ಲಿ 30 ಲಕ್ಷ ದಂಡ ಹಾಗೂ ಮುಂದಿನ ಒಂದು ಪಂದ್ಯದಿಂದ ನಾಯಕ ನಿಷೇಧಕ್ಕೆ ಒಳಗಾಗಲಿದ್ದಾರೆ. ಇದರ ಜೊತೆಗೆ ತಂಡದ ಪ್ರತಿಯೊಬ್ಬ ಸದಸ್ಯ ಕೂಡ 12 ಲಕ್ಷ ಅಥವಾ ಪಂದ್ಯದ ಸಂಭಾವನೆಯ 50 ಶೇಕಡಾದಷ್ಟು ದಂಡಕ್ಕೆ ಒಳಗಾಗಲಿದ್ದಾರೆ.

Story first published: Monday, April 26, 2021, 13:47 [IST]
Other articles published on Apr 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X