Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಆರ್‌ಸಿಬಿ ಪರ ಮತ್ತೊಂದು ಭರ್ಜರಿ ಅರ್ಧ ಶತಕ ಸಿಡಿಸಿದ ಮ್ಯಾಕ್ಸ್‌ವೆಲ್

IPL 2021: RCB vs KKR, glenn maxwell another half century for KKR

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ತಂದ ಪರವಾಗಿ ಮತ್ತೊಂದು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ಸ್ಪೋಟಕ ಅರ್ಧ ಶತಕವನ್ನು ಸಿಡಿಸಿ ತಂಡಕ್ಕೆ ನೆರವಾಗಿದ್ದಾರೆ.

ಕಳೆದ ಬಾರಿಯ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಮ್ಯಾಕ್ಸ್‌ವೆಲ್ ಈ ಬಾರಿ ಆರ್‌ಸಿಬಿಗೆ ಬೃಹತ್ ಮೊತ್ತಕ್ಕೆ ಹರಾಜಾಗಿದ್ದರು. ಆಸ್ಟ್ರೇಲಿಯಾದ ಈ ಆಲ್‌ರೌಂಡರ್ ಮೇಲೆ ಬೆಂಗಳೂರು ಮೂಲದ ಫ್ರಾಂಚೈಸಿ ಇಟ್ಟ ನಂಬಿಕೆಗೆ ಪೂರಕವಾದ ಪ್ರದರ್ಶನವನ್ನು ನೀಡುತ್ತಿದ್ದಾರೆ.

ಗ್ಲೆನ್ ಮ್ಯಾಕ್ಸ್‌ವೆಲ್ ಈ ಆವೃತ್ತಿಯ ಮೂರು ಪಂದ್ಯದಲ್ಲಿ ಎರಡನೇ ಅರ್ಧ ಶತಕವನ್ನು ಸಿಡಿಸಿದ್ದಾರೆ. ಇದಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ಜವಾಬ್ಧಾರಿಯುತ 59 ರನ್‌ಗಳನ್ನು ಗಳಿಸಿ ತಂಡದ ಗೆಲುವಿಗೆ ಕಾರಣರಾಗಿದ್ದರು.

ಗ್ಲೆನ್ ಮ್ಯಾಕ್ಸ್‌ವೆಲ್ ಈ ಬಾರಿಯ ಆವೃತ್ತಿಯಲ್ಲಿ ಪ್ರಥಮ ಪಂದ್ಯದಲ್ಲೂ ಅದ್ಭುತ ಆಟವನ್ನು ಪ್ರದರ್ಶಿಸಿದ್ದರು. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ 39 ರನ್‌ಗಳಿಸಿದ್ದರು. ಆ ಪಂದ್ಯದಲ್ಲಿ ತಂಡದ ಪರವಾಗಿ ಎರಡನೇ ಅತಿ ಹೆಚ್ಚಿನ ರನ್‌ ಗಳಿಸಿದ ಆಟಗಾರನಾಗಿದ್ದರು ಮ್ಯಾಕ್ಸ್‌ವೆಲ್.

Story first published: Sunday, April 18, 2021, 16:50 [IST]
Other articles published on Apr 18, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+