For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಮುಂಬೈ vs ಬೆಂಗಳೂರು, ಟಾಸ್ ವರದಿ, ಆಡುವ ಬಳಗ

IPL 2021: RCB vs MI, match 29, Toss report and playing XI

ಐಪಿಎಲ್ 2021ನೇ ಆವೃತ್ತಿಯ 39ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡದ ಮಧ್ಯೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ವಿರಾಟ್ ಕೊಹ್ಲಿ ಬಳಗ ಮೊದಲಿಗೆ ಬ್ಯಾಟಿಂಗ್‌ಗೆ ಕಣಕ್ಕಿಳಿಯಲಿದೆ.

ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಳಗ ಮೂರು ಬದಲಾವಣೆಯನ್ನು ಮಾಡಿಕೊಂಡಿದೆ. ನವದೀಪ್ ಸೈನಿ, ಹಸರಂಗ ಹಾಗೂ ಟಿಮ್ ಡೇವಿಡ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಇವರ ಸ್ಥಾನಕ್ಕೆ ಶಹಬಾಜ್ ಅಹ್ಮದ್, ಡೇನಿಯಲ್ ಕ್ರಿಶ್ಚಿಯನ್ ಹಾಗೂ ಕೈಲ್ ಜೇಮೀಸನ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಈ ಪಂದ್ಯಕ್ಕಾಗಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಹಾರ್ದಿಕ್ ಪಾಂಡ್ಯ ಈ ಪಂದ್ಯದಲ್ಲಿ ಆಡುವ ಬಳಗವನ್ನು ಸೇರಿಕೊಂಡಿದ್ದಾರೆ. ಸೌರಬ್ ತಿವಾರಿ ತಂಡದಿಂದ ಹೊರಗುಳಿದಿದ್ದಾರೆ.

ಇನ್ನು ಈ ಪಂದ್ಯ ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳೆರಡಕ್ಕೂ ಮುಖ್ಯವಾಗಿದೆ. ಯುಎಇನಲ್ಲಿ ನಡೆಯುತ್ತಿರುವ ಎರಡನೇ ಚರಣದ ಐಪಿಎಲ್‌ನಲ್ಲಿ ಈ ಎರಡು ತಂಡಗಳು ಕೂಡ ತಲಾ ಎರಡು ಪಂದ್ಯಗಳನ್ನು ಆಡಿದೆ. ಆದರೆ ಎರಡು ಪಂದ್ಯಗಳಲ್ಲಿಯೂ ಸೋಲು ಅನುಭವಿಸಿದೆ. ಹೀಗಾಗಿ ಗೆಲುವಿನ ಲಯಕ್ಕೆ ಮರಳಲು ಈ ಪಂದ್ಯ ಅನಿವಾರ್ಯವಾಗಿದೆ.

ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಭಾರತದಲ್ಲಿ ನಡೆದ ಮೊದಲ ಚರಣದ ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಸಾಕಷ್ಟು ಭರವಸೆ ಮೂಡಿಸಿತ್ತು, ಆದರೆ ಎರಡನೇ ಚರಣದಲ್ಲಿ ಅತ್ಯಂತ ನೀರಸ ಪ್ರದರ್ಶನ ನೀಡುವ ಮೂಲಕ ಅಭಿಮಾನಿಗಳಲ್ಲಿನ ನಿರಾಸೆ ಮೂಡಿಸ್ತಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿ ವಿಲಿಯರ್ಸ್, ಶಹಬಾಜ್ ಅಹ್ಮದ್, ಡೇನಿಯಲ್ ಕ್ರಿಶ್ಚಿಯನ್, ಕೈಲ್ ಜೇಮೀಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್

ಬೆಂಚ್: ಟಿಮ್ ಡೇವಿಡ್, ನವದೀಪ್ ಸೈನಿ, ವಾನಿಂದು ಹಸರಂಗ, ದುಷ್ಮಂತ ಚಮೀರಾ, ಸಚಿನ್ ಬೇಬಿ, ಪವನ್ ದೇಶಪಾಂಡೆ, ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್, ಸುಯಾಶ್ ಪ್ರಭುದೇಸಾಯಿ, ಆಕಾಶ್ ದೀಪ್

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಆಡಮ್ ಮಿಲ್ನೆ, ರಾಹುಲ್ ಚಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್

ಬೆಂಚ್: ಹರ್ಭಜನ್ ಸಿಂಗ್, ಶಕೀಬ್ ಅಲ್ ಹಸನ್, ಟಿಮ್ ಸೌಥಿ, ಬೆನ್ ಕಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಸಂದೀಪ್ ವಾರಿಯರ್, ಟಿಮ್ ಸೀಫರ್ಟ್, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ಶಿವಂ ಮಾವಿ, ವೈಭವ್ ಅರೋರಾ

Story first published: Sunday, September 26, 2021, 22:07 [IST]
Other articles published on Sep 26, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+