ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021:ಆರ್‌ಸಿಬಿ vs ಪಂಜಾಬ್, ಟಾಸ್ ವರದಿ, ಪ್ಲೇಯಿಂಗ್ XI

IPL 2021, RCB vs PBKS, match 49, Toss report, Playing XI, Highlights

ಐಪಿಎಲ್‌ನಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪಂಜಾಬ್ ಕಿಂಗ್ಸ್ ಎದುರಾಳಿಯಾಗಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ತಂಡದಲ್ಲಿ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೆಲ್ಲರೂ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಯಾವುದೇ ಬದಲಾವಣೆ ಮಾಡದಿರಲು ತಂಡ ನಿರ್ಧರಿಸಿದೆ. ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ವಿರಾಟ್ ಕೊಹ್ಲಿ ಪಡೆ ಸರ್ವಾಂಗೀಣ ಪ್ರದರ್ಶನ ನೀಡಿತ್ತು. ಅದೇ ರೀತಿಯ ಪ್ರದರ್ಶನ ನೀಡಲು ಕೊಹ್ಲಿ ಪಡೆ ಹಾತೊರೆಯುತ್ತಿದೆ.

1
50853

ಐಪಿಎಲ್ ಇತಿಹಾಸದಲ್ಲಿ ಪಂಜಾಬ್ ಮೂಲದ ಫ್ರಾಂಚೈಸಿ ಹಾಗೂ ಆರ್‌ಸಿಬಿ ಈವರೆಗೆ ಒಟ್ಟು 27 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಇದರಲ್ಲಿ ಪಂಜಾಬ್ ಕಿಂಗ್ಸ್ ಮೇಲುಗೈ ಸಾಧಿಸಿದ್ದು 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಪಂದ್ಯಗಳಲ್ಲಿ ಮಾತ್ರವೇ ಗೆಲುವು ಸಾಧಿಸಿದೆ. ಇದರಲ್ಲಿ ಭಾರತದಲ್ಲಿ ಈ ಎರಡು ತಂಡಗಳ ಮುಖಾಮುಖಿಯಲ್ಲಿ ಎರಡು ತಂಡಗಳು ಕೂಡ ತಲಾ 11 ಗೆಲುವು ಸಾಧಿಸಿದ್ದರೆ ವಿದೇಶದಲ್ಲಿ ಒಟ್ಟು ಐದು ಪಂದ್ಯಗಳನ್ನು ಆಡಿದ್ದು ಇದರಲ್ಲಿ 4ರಲ್ಲಿ ಪಂಜಾಬ್ ಕಿಂಗ್ಸ್ ಹಾಗೂ 1ರಲ್ಲಿ ಮಾತ್ರವೇ ಆರ್‌ಸಿಬಿ ಗೆದ್ದಿದೆ.

ಇನ್ನು ಈ ಎರಡು ತಂಡಗಳ ಮುಖಾಮುಖಿಯಲ್ಲಿ ಆರ್‌ಸಿಬಿ ತಂಡದ ಸರಾಸರಿ ಸ್ಕೋರ್ 159 ಆಗಿದ್ದರೆ ಪಂಜಾಬ್ ತಂಡದ ಸರಾಸರಿ ಸ್ಕೋರ್ 158 ಆಗಿದೆ. ಇನ್ನು ಆರ್‌ಸಿಬಿ ಹಾಗೂ ಪಂಜಾಬ್ ತಂಡಗಳ ಹಣಾಹಣಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರನಾಗಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಯಶಸ್ಸು ಸಾಧಿಸಿದ್ದಾರೆ. ಕೊಹ್ಲಿ ಪಂಜಾಬ್ ವಿರುದ್ಧ 716 ರನ್‌ಗಳಿಸಿದ್ದಾರೆ. ಪಂಜಾಬ್ ತಂಡದ ಪರವಾಗಿ ರಾಹುಲ್ ಹೆಚ್ಚು ರನ್‌ಗಳಿಸಿದ್ದು 412 ರನ್‌ಗಳಿಸಿದ್ದಾರೆ.

1
50853
1
4-2021

ಇನ್ನು ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ತಂಡಗಳ ಮುಖಾಮುಖಿಯಲ್ಲಿ 22 ವಿಕೆಟ್ ಪಡೆದಿರುವ ಯುಜುವೇಂದ್ರ ಚಾಹಲ್ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್ ಆಗಿದ್ದಾರೆ. ಪಂಜಾಬ್ ಪರವಾಗಿ ಎಂ ಅಶ್ವಿನ್ ಹಾಗೂ ಮೊಹಮ್ಮದ್ ಶಮಿ 6 ವಿಕೆಟ್ ಪಡೆದು ಅತಿ ಹೆಚ್ಚಿನ ವಿಕೆಟ್ ಪಡೆದ ಬೌಲರ್ ಎನಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿ ವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಜಾರ್ಜ್ ಗಾರ್ಟನ್, ಶಹಬಾಜ್ ಅಹಮದ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್

ಬೆಂಚ್: ದುಷ್ಮಂತ ಚಮೀರಾ, ಸಚಿನ್ ಬೇಬಿ, ಕೈಲ್ ಜೇಮೀಸನ್, ನವದೀಪ್ ಸೈನಿ, ಪವನ್ ದೇಶಪಾಂಡೆ, ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್, ವಾನಿಂದು ಹಸರಂಗ, ಟಿಮ್ ಡೇವಿಡ್, ಆಕಾಶ್ ದೀಪ್, ಸುಯಾಶ್ ಪ್ರಭುದೇಸಾಯಿ

ಪಂಜಾಬ್ ಕಿಂಗ್ಸ್ ಆಡುವ ಬಳಗ: ಕೆಎಲ್ ರಾಹುಲ್ (ನಾಯಕ/ ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ಸರ್ಫರಾಜ್ ಖಾನ್, ಶಾರುಖ್ ಖಾನ್, ಮೊಯಿಸ್ ಹೆನ್ರಿಕ್ಸ್, ಹರಪ್ರೀತ್ ಬ್ರಾರ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್

ಇವನ ಆಟದಿಂದ RCBಗೆ ಖುಲಾಯಿಸ್ತು ಲಕ್: ಈ ಸಲ RCB ಕಪ್ ಗೆಲ್ಲೋದು ಪಕ್ಕಾ | Oneindia Kannada

ಬೆಂಚ್: ಆದಿಲ್ ರಶೀದ್, ಮನ್ ದೀಪ್ ಸಿಂಗ್, ಕ್ರಿಸ್ ಜೋರ್ಡಾನ್, ಜಲಜ್ ಸಕ್ಸೇನಾ, ಮುರುಗನ್ ಅಶ್ವಿನ್, ಸೌರಭ್ ಕುಮಾರ್, ಇಶಾನ್ ಪೊರೆಲ್, ಉತ್ಕರ್ಶ್ ಸಿಂಗ್, ದರ್ಶನ್ ನಲ್ಕಂಡೆ, ಪ್ರಭಸಿಮ್ರಾನ್ ಸಿಂಗ್, ನಾಥನ್ ಎಲ್ಲಿಸ್, ಫ್ಯಾಬಿಯನ್ ಅಲೆನ್, ದೀಪಕ್ ಹೂಡಾ

Story first published: Sunday, October 3, 2021, 16:05 [IST]
Other articles published on Oct 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X