For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಮಧ್ಯೆ ಬಲಿಷ್ಠರು ಯಾರು?

IPL 2021: RCB vs PBKS, match 49, Head to Head stats and full squads

ಶಾರ್ಜಾ, ಅಕ್ಟೋಬರ್ 3: ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಇಂದು ಶಾರ್ಜಾ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲಿದೆ. ಎರಡನೇ ಚರಣದ ಆರಂಭದಲ್ಲಿ ಕಳೆಗುಂದಿದಂತೆ ಕಂಡು ಬಂದಿದ್ದ ಆರ್‌ಸಿಬಿ ಈಗ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಈಗ ವಿರಾಟ್ ಕೊಹ್ಲಿ ತಂಡ ಪ್ಲೇಆಫ್‌ನಲ್ಲಿ ತನ್ನ ಸ್ಥಾನವನ್ನು ಅಧಿಕೃತಪಡಿಸಲು ಕಾಯುತ್ತಿದೆ. ಇದಕ್ಕಾಗಿ ಆರ್‌ಸಿಬಿಗೆ ಇನ್ನು ಒಂದು ಗೆಲುವು ಸಾಕು. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಇಂದಿನ ಪಂದ್ಯವನ್ನು ಗೆದ್ದು ಪ್ಲೇಆಫ್‌ಗೆ ಟಿಕೆಟ್ ಗಿಟ್ಟಿಸಿಕೊಳ್ಳುವ ಉತ್ಸಾಹದಲ್ಲಿದೆ ವಿರಾಟ್ ಕೊಹ್ಲಿ ಬಳಗ.

ಮತ್ತೊಂದೆಡೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಗೆಲುವು ಸಾಧಿಸುರುವ ಉತ್ಸಾಹದಲ್ಲಿರುವ ಪಂಜಾಬ್ ಕಿಂಗ್ಸ್ ತಂಡ ಕೂಡ ಮತ್ತೊಂದು ಗೆಲುವಿಗಾಗಿ ಹವಣಿಸುತ್ತಿದೆ. ಅದರಲ್ಲೂ ಆರ್‌ಸಿಬಿ ವಿರುದ್ಧ ಇತ್ತೀಚಿನ ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ಅದ್ಭುತ ಯಶಸ್ಸು ಸಾಧಿಸಿದೆ. ಆರ್‌ಸಿಬಿ ವಿರುದ್ಧದ ಈ ಹಿಂದಿನ ಮೂರು ಮುಖಾಮುಖಿಯಲ್ಲಿ ಕೆಎಲ್ ರಾಹುಲ್ ಬಳಗ ಸತತವಾಗಿ ಗೆಲುವು ಸಾಧಿಸುತ್ತಾ ಬಂದಿದೆ. ಆರ್‌ಸಿಬಿ ತಂಡ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಂಜಾಬ್ ವಿರುದ್ಧ ಯಶಸ್ಸು ಸಾಧಿಸಬೇಕಿದೆ.

ಹೆಡ್ ಟು ಹೆಡ್ ಅಂಕಿಅಂಶ: ಐಪಿಎಲ್ ಇತಿಹಾಸದಲ್ಲಿ ಪಂಜಾಬ್ ಮೂಲದ ಫ್ರಾಂಚೈಸಿ ಹಾಗೂ ಆರ್‌ಸಿಬಿ ಈವರೆಗೆ ಒಟ್ಟು 27 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಇದರಲ್ಲಿ ಪಂಜಾಬ್ ಕಿಂಗ್ಸ್ ಮೇಲುಗೈ ಸಾಧಿಸಿದ್ದು 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಪಂದ್ಯಗಳಲ್ಲಿ ಮಾತ್ರವೇ ಗೆಲುವು ಸಾಧಿಸಿದೆ. ಇದರಲ್ಲಿ ಭಾರತದಲ್ಲಿ ಈ ಎರಡು ತಂಡಗಳ ಮುಖಾಮುಖಿಯಲ್ಲಿ ಎರಡು ತಂಡಗಳು ಕೂಡ ತಲಾ 11 ಗೆಲುವು ಸಾಧಿಸಿದ್ದರೆ ವಿದೇಶದಲ್ಲಿ ಒಟ್ಟು ಐದು ಪಂದ್ಯಗಳನ್ನು ಆಡಿದ್ದು ಇದರಲ್ಲಿ 4ರಲ್ಲಿ ಪಂಜಾಬ್ ಕಿಂಗ್ಸ್ ಹಾಗೂ 1ರಲ್ಲಿ ಮಾತ್ರವೇ ಆರ್‌ಸಿಬಿ ಗೆದ್ದಿದೆ.

ಇನ್ನು ಈ ಎರಡು ತಂಡಗಳ ಮುಖಾಮುಖಿಯಲ್ಲಿ ಆರ್‌ಸಿಬಿ ತಂಡದ ಸರಾಸರಿ ಸ್ಕೋರ್ 159 ಆಗಿದ್ದರೆ ಪಂಜಾಬ್ ತಂಡದ ಸರಾಸರಿ ಸ್ಕೋರ್ 158 ಆಗಿದೆ. ಇನ್ನು ಆರ್‌ಸಿಬಿ ಹಾಗೂ ಪಂಜಾಬ್ ತಂಡಗಳ ಹಣಾಹಣಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರನಾಗಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಯಶಸ್ಸು ಸಾಧಿಸಿದ್ದಾರೆ. ಕೊಹ್ಲಿ ಪಂಜಾಬ್ ವಿರುದ್ಧ 716 ರನ್‌ಗಳಿಸಿದ್ದಾರೆ. ಪಂಜಾಬ್ ತಂಡದ ಪರವಾಗಿ ರಾಹುಲ್ ಹೆಚ್ಚು ರನ್‌ಗಳಿಸಿದ್ದು 412 ರನ್‌ಗಳಿಸಿದ್ದಾರೆ.

ಇನ್ನು ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ತಂಡಗಳ ಮುಖಾಮುಖಿಯಲ್ಲಿ 22 ವಿಕೆಟ್ ಪಡೆದಿರುವ ಯುಜುವೇಂದ್ರ ಚಾಹಲ್ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್ ಆಗಿದ್ದಾರೆ. ಪಂಜಾಬ್ ಪರವಾಗಿ ಎಂ ಅಶ್ವಿನ್ ಹಾಗೂ ಮೊಹಮ್ಮದ್ ಶಮಿ 6 ವಿಕೆಟ್ ಪಡೆದು ಅತಿ ಹೆಚ್ಚಿನ ವಿಕೆಟ್ ಪಡೆದ ಬೌಲರ್ ಎನಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಪೂರ್ಣ ತಂಡ: ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್, ದೇವದತ್ ಪಡಿಕ್ಕಲ್, ಯುಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಜಾರ್ಜ್ ಗಾರ್ಟನ್, ಆಕಾಶ್ ದೀಪ್, ಪವನ್ ದೇಶಪಾಂಡೆ, ಟಿಮ್ ಡೇವಿಡ್, ಶಹಬಾಜ್ ಅಹಮದ್, ನವದೀಪ್ ಸೈನಿ, ವನಿಂದು ಹಸರಂಗ, ಕೈಲ್ ಜೇಮಿಸನ್ , ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಸಚಿನ್ ಬೇಬಿ, ಮೊಹಮ್ಮದ್ ಅಜರುದ್ದೀನ್, ಡೇನಿಯಲ್ ಕ್ರಿಶ್ಚಿಯನ್, ಕೆಎಸ್ ಭರತ್, ಸುಯಾಶ್ ಪ್ರಭುದೇಸಾಯಿ, ದುಷ್ಮಂತ ಚಮೀರಾ, ಹರ್ಷಲ್ ಪಟೇಲ್

ಪಂಜಾಬ್ ಕಿಂಗ್ಸ್ ಸಂಪೂರ್ಣ ತಂಡ: ಕೆಎಲ್ ರಾಹುಲ್ (ನಾಯಕ), ಮಯಾಂಕ್ ಅಗರ್ವಾಲ್, ಮನ್‌ದೀಪ್ ಸಿಂಗ್, ಪ್ರಬ್ಸಿಮ್ರಾನ್ ಸಿಂಗ್, ನಿಕೋಲಸ್ ಪೂರನ್, ಸರ್ಫರಾಜ್ ಖಾನ್, ದೀಪಕ್ ಹೂಡಾ, ಎಂ ಅಶ್ವಿನ್, ರವಿ ಬಿಷ್ಣೋಯ್, ಹರಪ್ರೀತ್ ಬ್ರಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಇಶಾನ್ ಪೊರೆಲ್, ದರ್ಶನ್ ನಲ್ಕಂಡೆ, ಕ್ರಿಸ್ ಜೋರ್ಡಾನ್, ಡೇವಿಡ್ ಮಲನ್, ಆದಿಲ್ ರಶೀದ್, ಶಾರುಖ್ ಖಾನ್, ನಾಥನ್ ಎಲ್ಲಿಸ್, ಮೊಯಿಸ್ ಹೆನ್ರಿಕ್ಸ್, ಜಲಜ್ ಸಕ್ಸೇನಾ, ಉತ್ಕರ್ಶ್ ಸಿಂಗ್, ಫ್ಯಾಬಿಯನ್ ಅಲೆನ್, ಸೌರಭ್ ಕುಮಾರ್

Story first published: Sunday, October 3, 2021, 12:12 [IST]
Other articles published on Oct 3, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+