ಐಪಿಎಲ್ 2021: ಮಹತ್ವದ ಮೈಲಿಗಲ್ಲನ್ನು ಮುಟ್ಟಲು ಆರ್‌ಸಿಬಿ ಸಜ್ಜು

ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಆರ್‌ಸಿಬಿ ಅತ್ಯುತ್ತಮ ಆರಂಭವನ್ನು ಪಡೆದುಕೊಂಡಿದೆ. ವಿರಾಟ್ ಕೊಹ್ಲಿ ನೇತೃತ್ವದ ತಂಡ ಈ ಬಾರಿ ಆಡಿದ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ತಂಡದ ಉತ್ಸಾಹವನ್ನು ಹೆಚ್ಚಿಸಿದೆ. ಈಗ ನಾಲ್ಕನೇ ಪಂದ್ಯವನ್ನಾಡಲು ಕೊಹ್ಲಿ ಬಳಗ ಸಜ್ಜಾಗಿದೆ.
ಈ ಪಂದ್ಯ ವಿರಾಟ್ ಕೊಹ್ಲಿ ಪಡೆಗೆ ಮತ್ತೊಂದು ಕಾರಣಕ್ಕೆ ವಿಶೇಷವಾಗಿರಲಿದೆ. ಇದು ಐಪಿಎಲ್‌ನಲ್ಲಿ ಆರ್‌ಸಿಬಿ ಆಡುತ್ತಿರುವ 200ನೇ ಪಂದ್ಯವಾಗಿದೆ. ಈ ಮಹತ್ವದ ಮೈಲಿಗಲ್ಲನ್ನು ತಲುಪಿದ ಸಾಧನೆಯನ್ನು ಗೆಲುವಿನ ಮೂಲಕ ಸ್ಮರಣೀಯವಾಗಿಸಲು ಆಟಗಾರರು ಸಜ್ಜಾಗಿದ್ದಾರೆ.
2008ರಲ್ಲಿ ಐಪಿಎಲ್ ಉದ್ಘಾಟನಾ ಆವೃತ್ತಿಯ ಪ್ರಥಮ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುವ ಮೂಲಕ ಆರ್‌ಸಿಬಿ ತನ್ನ ಪ್ರಯಾಣವನ್ನು ಆರಂಭಿಸಿತು. ಸಾಕಷ್ಟು ಏರಿಳಿತಗಳನ್ನು ಕಂಡಿರುವ ಬೆಂಗಳೂರು ಮೂಲದ ಫ್ರಾಂಚೈಸಿ ಮೂರು ಬಾರಿ ರನ್ನರ್ ಅಪ್ ಸ್ಥಾನವನ್ನು ಅಲಂಕರಿಸಿರುವುದು ಈವರೆಗಿನ ಅತ್ಯುನ್ನತ ಸಾಧನೆಯಾಗಿದೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ತಂಡವಾಗಿ ಮೊದಲ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಇದೆ. ಮುಂಬೈ 207 ಪಂದ್ಯಗಳನ್ನು ಆಡಿದೆ. ಎರಡನೇ ಸ್ಥಾನದಲ್ಲಿ ಆರ್‌ಸಿಬಿ ಇದ್ದು 200 ಪಂದ್ಯಗಳ ಮೈಲಿಗಲ್ಲು ತಲುಪಿದ ಎರಡನೇ ತಂಡ ಎನಿಸಲಿದೆ. 198 ಪಂದ್ಯಗಳನ್ನು ಆಡಿರುವ ಡೆಲ್ಲಿ ಕ್ಯಾಪಿಟಲ್ಸ್ 3 ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ 196 ಪಂದ್ಯಗಳನ್ನು ಆಡಿ 3ನೇ ಸ್ಥಾನದಲ್ಲಿದೆ.
ಗುರುವಾರ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗುತ್ತಿದೆ. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಈ ಬಾರಿಯ ಐಪಿಎಲ್‌ನಲ್ಲಿ ಒಂದು ಗೆಲುವನ್ನು ಮಾತ್ರ ಸಾಧಿಸಿದ್ದು ಉಳಿದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಮತ್ತೊಂದು ಗೆಲುವಿಗಾಗಿ ಹವಣಿಸುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications