ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಮಹತ್ವದ ಮೈಲಿಗಲ್ಲನ್ನು ಮುಟ್ಟಲು ಆರ್‌ಸಿಬಿ ಸಜ್ಜು

 IPL 2021: RCB vs RR: 200th IPL match for Royal Challengers Bangalore Franchise

ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಆರ್‌ಸಿಬಿ ಅತ್ಯುತ್ತಮ ಆರಂಭವನ್ನು ಪಡೆದುಕೊಂಡಿದೆ. ವಿರಾಟ್ ಕೊಹ್ಲಿ ನೇತೃತ್ವದ ತಂಡ ಈ ಬಾರಿ ಆಡಿದ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ತಂಡದ ಉತ್ಸಾಹವನ್ನು ಹೆಚ್ಚಿಸಿದೆ. ಈಗ ನಾಲ್ಕನೇ ಪಂದ್ಯವನ್ನಾಡಲು ಕೊಹ್ಲಿ ಬಳಗ ಸಜ್ಜಾಗಿದೆ.

ಈ ಪಂದ್ಯ ವಿರಾಟ್ ಕೊಹ್ಲಿ ಪಡೆಗೆ ಮತ್ತೊಂದು ಕಾರಣಕ್ಕೆ ವಿಶೇಷವಾಗಿರಲಿದೆ. ಇದು ಐಪಿಎಲ್‌ನಲ್ಲಿ ಆರ್‌ಸಿಬಿ ಆಡುತ್ತಿರುವ 200ನೇ ಪಂದ್ಯವಾಗಿದೆ. ಈ ಮಹತ್ವದ ಮೈಲಿಗಲ್ಲನ್ನು ತಲುಪಿದ ಸಾಧನೆಯನ್ನು ಗೆಲುವಿನ ಮೂಲಕ ಸ್ಮರಣೀಯವಾಗಿಸಲು ಆಟಗಾರರು ಸಜ್ಜಾಗಿದ್ದಾರೆ.

ಐಪಿಎಲ್ 2021: ಬೆಂಗಳೂರು vs ರಾಜಸ್ಥಾನ್ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?ಐಪಿಎಲ್ 2021: ಬೆಂಗಳೂರು vs ರಾಜಸ್ಥಾನ್ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

2008ರಲ್ಲಿ ಐಪಿಎಲ್ ಉದ್ಘಾಟನಾ ಆವೃತ್ತಿಯ ಪ್ರಥಮ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುವ ಮೂಲಕ ಆರ್‌ಸಿಬಿ ತನ್ನ ಪ್ರಯಾಣವನ್ನು ಆರಂಭಿಸಿತು. ಸಾಕಷ್ಟು ಏರಿಳಿತಗಳನ್ನು ಕಂಡಿರುವ ಬೆಂಗಳೂರು ಮೂಲದ ಫ್ರಾಂಚೈಸಿ ಮೂರು ಬಾರಿ ರನ್ನರ್ ಅಪ್ ಸ್ಥಾನವನ್ನು ಅಲಂಕರಿಸಿರುವುದು ಈವರೆಗಿನ ಅತ್ಯುನ್ನತ ಸಾಧನೆಯಾಗಿದೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ತಂಡವಾಗಿ ಮೊದಲ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಇದೆ. ಮುಂಬೈ 207 ಪಂದ್ಯಗಳನ್ನು ಆಡಿದೆ. ಎರಡನೇ ಸ್ಥಾನದಲ್ಲಿ ಆರ್‌ಸಿಬಿ ಇದ್ದು 200 ಪಂದ್ಯಗಳ ಮೈಲಿಗಲ್ಲು ತಲುಪಿದ ಎರಡನೇ ತಂಡ ಎನಿಸಲಿದೆ. 198 ಪಂದ್ಯಗಳನ್ನು ಆಡಿರುವ ಡೆಲ್ಲಿ ಕ್ಯಾಪಿಟಲ್ಸ್ 3 ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ 196 ಪಂದ್ಯಗಳನ್ನು ಆಡಿ 3ನೇ ಸ್ಥಾನದಲ್ಲಿದೆ.

ಐಪಿಎಲ್ 2021 : ಚೆನ್ನೈ - ಕೊಲ್ಕತ್ತಾ ಪಂದ್ಯದ ಪ್ರಮುಖ ಅಂಕಿ ಅಂಶ ಮತ್ತು ನಿರ್ಮಾಣವಾದ ದಾಖಲೆಗಳುಐಪಿಎಲ್ 2021 : ಚೆನ್ನೈ - ಕೊಲ್ಕತ್ತಾ ಪಂದ್ಯದ ಪ್ರಮುಖ ಅಂಕಿ ಅಂಶ ಮತ್ತು ನಿರ್ಮಾಣವಾದ ದಾಖಲೆಗಳು

ಗುರುವಾರ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗುತ್ತಿದೆ. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಈ ಬಾರಿಯ ಐಪಿಎಲ್‌ನಲ್ಲಿ ಒಂದು ಗೆಲುವನ್ನು ಮಾತ್ರ ಸಾಧಿಸಿದ್ದು ಉಳಿದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಮತ್ತೊಂದು ಗೆಲುವಿಗಾಗಿ ಹವಣಿಸುತ್ತಿದೆ.

Story first published: Thursday, April 22, 2021, 15:18 [IST]
Other articles published on Apr 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X