ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021 : ಧವನ್ ಮತ್ತು ರೋಹಿತ್ ದಾಖಲೆ ಮುರಿಯುವ ಸನಿಹದಲ್ಲಿ ವಾರ್ನರ್

IPL 2021, RCB vs SRH : David Warner needs 36 more runs to become 3rd most IPL run scorer

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ 6ನೇ ಪಂದ್ಯ ಇಂದು ( ಏಪ್ರಿಲ್ 14 ) ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಬಾರಿಯ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲಿಸಿ ಜಯಗಳಿಸಿದೆ. ಇತ್ತ ಸನ್ ರೈಸರ್ಸ್ ಹೈದರಾಬಾದ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಈ ಬಾರಿಯ ಐಪಿಎಲ್ ಟೂರ್ನಿಯ ತನ್ನ ಮೊದಲನೇ ಪಂದ್ಯದಲ್ಲಿ ಸೋಲುಂಡಿದೆ.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಸೆಣಸಾಡಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ಪಂದ್ಯದ ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಅವರಿಗೆ ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿಯುವ ಅವಕಾಶವಿದೆ. ಹೌದು ಅತಿ ಹೆಚ್ಚು ರನ್ ಗಳಿಸಿರುವ ಐಪಿಎಲ್ ಆಟಗಾರರ ಪಟ್ಟಿಯಲ್ಲಿ ಡೇವಿಡ್ ವಾರ್ನರ್‌ಗೆ ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕುವ ಅವಕಾಶ ಬುಧವಾರ ನಡೆಯಲಿರುವ ಬೆಂಗಳೂರು ವಿರುದ್ಧದ ಪಂದ್ಯದಲ್ಲಿದೆ.

ಐಪಿಎಲ್ 2021: ಅತಿ ದೊಡ್ಡ ಮೈಲಿಗಲ್ಲು ಮುಟ್ಟಲು ವಿರಾಟ್ ಕೊಹ್ಲಿ ಮತ್ತಷ್ಟು ಸನಿಹಐಪಿಎಲ್ 2021: ಅತಿ ದೊಡ್ಡ ಮೈಲಿಗಲ್ಲು ಮುಟ್ಟಲು ವಿರಾಟ್ ಕೊಹ್ಲಿ ಮತ್ತಷ್ಟು ಸನಿಹ

143 ಇನ್ನಿಂಗ್ಸ್‌ಗಳನ್ನು ಆಡಿರುವ ಡೇವಿಡ್ ವಾರ್ನರ್ 5257 ಗಳಿಸಿ ಪ್ರಸ್ತುತ ಅತಿ ಹೆಚ್ಚು ರನ್ ಗಳಿಸಿರುವ ಐಪಿಎಲ್ ಆಟಗಾರರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. 176 ಇನ್ನಿಂಗ್ಸ್‌ಗಳನ್ನು ಆಡಿರುವ ಶಿಖರ್ ಧವನ್ 5282 ರನ್ ಗಳಿಸುವುದರ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಐಪಿಎಲ್ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. 197 ಇನ್ನಿಂಗ್ಸ್‌ಗಳನ್ನು ಆಡಿರುವ ರೋಹಿತ್ ಶರ್ಮಾ 5292 ರನ್ ಗಳಿಸುವುದರ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಐಪಿಎಲ್ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ ಸದ್ಯಕ್ಕೆ ಶಿಖರ್ ಧವನ್ ಗಿಂತ 25 ರನ್ ಹಿಂದೆ ಉಳಿದಿದ್ದಾರೆ ಮತ್ತು ರೋಹಿತ್ ಶರ್ಮಾಗಿಂತ 35 ರನ್ ಹಿಂದುಳಿದಿದ್ದಾರೆ. ಹೀಗಾಗಿ ಬುಧವಾರ (ಏಪ್ರಿಲ್ 14) ಬೆಂಗಳೂರು ತಂಡದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಡೇವಿಡ್ ವಾರ್ನರ್ 35ಕ್ಕಿಂತ ಹೆಚ್ಚು ರನ್ ಬಾರಿಸಿದರೆ ಐಪಿಎಲ್ ಟೂರ್ನಿಗಳಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಾರ್ನರ್ ಮೂರನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

Story first published: Wednesday, April 14, 2021, 14:13 [IST]
Other articles published on Apr 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X