
ಐಪಿಎಲ್‌ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೆಣೆಸಾಡಲು ಸಜ್ಜಾಗಿದೆ. ಸದ್ಯ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಪಡೆಗೆ ಎರಡನೇ ಸ್ಥಾನಕ್ಕೇರಲು ಈ ಪಂದದಲ್ಲಿ ಗೆಲ್ಲುವುದು ಅಗತ್ಯವಾಗಿದೆ. ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಹೀಗಾಗಿ ಯಾವುದೇ ಒತ್ತಡಗಳು ಕೂಡ ಸನ್‌ರೈಸರ್ಸ್ ತಂಡದ ಮೇಲಿಲ್ಲ. ಇದರಿಂದಾಗಿ ತಂಡದ ಪ್ರದರ್ಶನ ಚೇತರಿಕೆ ಕಾಣಲಿದೆಯಾ ಎಂಬುದು ಕುತೂಹಲ ಮೂಡಿಸಿದೆ.
ಇನ್ನು ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೆಲ ಆಟಗಾರರು ಈ ಪಂದ್ಯದಲ್ಲಿ ವಿಶೇಷ ಮೈಲಿಗಲ್ಲನ್ನು ನೆಡಲು ಸಜ್ಜಾಗಿದ್ದಾರೆ. ಅಂತಾ ಸಂಭಾವ್ಯ ಮೈಲಿಗಲ್ಲುಗಳ ಬಗ್ಗೆ ಮಾಹಿತಿ ಈ ವರದಿಯಲ್ಲಿದೆ. ಮುಂದೆ ಓದಿ..
ಎಬಿ ಡಿವಿಲಿಯರ್ಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅನುಭವಿ ಆಟಗಾರ ಎಬಿ ಡಿವಿಲಿಯರ್ಸ್ ಐಪಿಎಲ್‌ನಲ್ಲಿ ಸಿಕ್ಸರ್ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ. ಐಪಿಎಲ್‌ನ ಪಂದ್ಯಗಳಲ್ಲಿ 250 ಸಿಕ್ಸರ್ ಬಾರಿಸಿದ ಎನಿಸಲು ಎಬಿ ಡಿವಿಲಿಯರ್ಸ್ ಇಂದಿನ ಪಂದ್ಯದಲ್ಲಿ ಒಂದು ಸಿಕ್ಸರ್ ಸಿಡಿಸುವ ಅಗತ್ಯವಿದೆ. ಕ್ರಿಸ್ ಗೇಲ್ ನಂತರ ಈ ಸಾಧನೆ ಮಾಡಿದ ಎರಡನೇ ಆಟಗಾರ ಎನಿಸಲಿದ್ದಾರೆ ಎಬಿ ಡಿವಿಲಿಯರ್ಸ್.
ಹರ್ಷಲ್ ಪಟೇಲ್: ಆರ್‌ಸಿಬಿ ತಂಡದ ವೇಗಿ ಹರ್ಷಲ್ ಪಟೇಲ್ ಈ ಬಾರಿಯ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಮಿಂಚುತ್ತಿದ್ದಾರೆ. ಈಗಾಗಲೇ ಐಪಿಎಲ್‌ನಲ್ಲಿ 26 ವಿಕೆಟ್ ಪಡೆದುಕೊಂಡಿರುವ ಹರ್ಷಲ್ ಪಟೇಲ್ ಐಪಿಎಲ್‌ನ ಒಂದು ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಳ್ಳಲು ಕೇವಲ 2 ವಿಕೆಟ್‌ಗಳ ಅಗತ್ಯವಿದೆ. ಸದ್ಯ ಈ ದಾಖಲೆ ಭುವನೇಶ್ವರ್ ಕುಮಾರ್ ಹೆಸರಿನಲ್ಲಿದ್ದು ಭುವಿ ಒಂದು ಋತುವಿನಲ್ಲಿ 27 ವಿಕೆಟ್ ಪಡೆದಿದ್ದಾರೆ.
ವೃದ್ಧಿಮಾನ್ ಸಾಹ: ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ವೃದ್ಧಿಮಾನ್ ಸಹಾ ಟಿ20 ಮಾದರಿಯಲ್ಲಿ ಮೈಲಿಗಲ್ಲೊಂದರ ಸನಿಹದಲ್ಲಿದ್ದಾರೆ. ವಿಕೆಟ್ ಕೀಪರ್ ಆಗಿ 100 ಕ್ಯಾಚ್‌ಗಳ ಮೈಲಿಗಲ್ಲು ತಲುಪಲು ಸಾಹಾಗೆ 2 ಕ್ಯಾಚ್ ಗಳ ಅಗತ್ಯವಿದೆ.
ಜೇಸನ್ ರಾಯ್: ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಡೇವಿಡ್ ವಾರ್ನರ್ ಬದಲಿಗೆ ಆರಂಭಿಕನಾಗಿ ಜೇಸನ್ ರಾಯ್ ಕಣಕ್ಕಿಳಿಯುತ್ತಿದ್ದಾರೆ. ಇಂಗ್ಲೆಂಡ್ ಮೂಲದ ಈ ಕ್ರಿಕೆಟಿಗ ಈ ವರ್ಷದಲ್ಲಿ 1000 ಟಿ20 ರನ್‌ಗಳನ್ನು ಗಳಿಸಲು ಇನ್ನು ಕೇವಲ 15 ರನ್‌ಗಳ ಅಗತ್ಯವಿದೆ.
ಮನೀಶ್ ಪಾಂಡೆ: ಸನ್ ರೈಸರ್ಸ್ ಹೈದರಾಬಾದ್ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಮನೀಶ್ ಪಾಂಡೆ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಇಂದಿನ ಪಂದ್ಯದಲ್ಲಿ ಅವಕಾಶ ಗಿಟ್ಟಿಸಿಕೊಂಡರೆ ಐಪಿಎಲ್‌ನಲ್ಲಿ ವಿಶೇಷ ಸಾಧನೆ ಮಾಡುವ ಅವಕಾಶ ಹೊಂದಿದ್ದಾರೆ. ಐಪಿಎಲ್‌ನ್ಲಲಿ 3,500 ರನ್‌ಗಳ ಗಡಿದಾಟಲು ಪಾಂಡೆಗೆ ಕೇವಲ 9 ರನ್ ಗಳ ಅಗತ್ಯವಿದೆ. ಇದರೊಂದಿಗೆ ಮಬನೀಶ್ ಪಾಂಡೆ 26 ರನ್ ಗಳಿಸಿದರೆ ಟಿ20 ಕ್ರಿಕೆಟ್‌ನಲ್ಲಿ 6000 ರನ್ ಗಳಿಸಿದ ಆಟಗಾರರ ಪಟ್ಟಿಗೆ ಸೇರ್ಪಡೆಯಗಲಿದ್ದಾರೆ.
ಶಹ್ಬಾಜ್ ನದೀಮ್: ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಪಿನ್ನರ್ ಶಹಬಾಜ್ ನದೀಮ್‌ಗೆ ಐಪಿಎಲ್‌ನಲ್ಲಿ 50 ವಿಕೆಟ್ ಪೂರೈಸಲು ಎರಡು ವಿಕೆಟ್ ಅಗತ್ಯವಿದೆ.
ಮೊಹಮಮ್ದ್ ಸಿರಾಜ್: ಆರ್‌ಸಿಬಿ ತಮಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಕೂಡ ಐಪಿಎಲ್‌ನಲ್ಲಿ 50 ವಿಕೆಟ್‌ಗಳನ್ನು ಪೂರೈಸುವ ಸಮೀಪದಲ್ಲಿದ್ದಾರೆ. ಈ ಸಾಧನೆಗೆ ಆರ್‌ಸಿಬಿ ವೇಗಿಗೆ 4 ವಿಕೆಟ್ ಅಗತ್ಯವಿದೆ. ಸಿರಾಜ್ ಐಪಿಎಲ್‌ನಲ್ಲಿ 47 ಪಂದ್ಯಗಳಲ್ಲಿ 46 ವಿಕೆಟ್ ಪಡೆದಿದ್ದಾರೆ.
ರಶೀದ್ ಖಾನ್ vs ಎಬಿ ಡಿವಿಲಿಯರ್ಸ್: ಆರ್‌ಸಿಬಿ ತಂಡದ ಅನುಭವಿ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಸನ್‌ರೈಸರ್ಸ್ ಹೈದರಾಬಾದ್ ಸ್ಪಿನ್ನರ್ ರಶೀದ್ ಖಾನ್ ವಿರುದ್ಧ ಹಿನ್ನೆಡೆ ಅನುಭವಿಸಿದ್ದಾರೆ. ಐಪಿಎಲ್‌ನಲ್ಲಿ ಎಬಿ ಡಿವಿಲಿಯರ್ಸ್ ಈವರೆಗೆ ರಶೀದ್ ಖಾನ್ ಅವರ 37 ಎಸೆತಗಳನ್ನು ಎದುರಿಸಿದ್ದು ಇದರಲ್ಲಿ 3 ಬಾರಿ ವಿಕೆಟ್ ಕಳೆದುಕೊಂಡಿದ್ದಾರೆ.
ಆರ್‌ಸಿಬಿ ಸಂಪೂರ್ಣ ಸ್ಕ್ವಾಡ್: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ಡೇನಿಯಲ್ ಕ್ರಿಶ್ಚಿಯನ್, ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿ ವಿಲಿಯರ್ಸ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್, ದುಷ್ಮಂತ ಚಮೀರಾ, ಸಚಿನ್ ಬೇಬಿ, ಕೈಲ್ ಜೇಮೀಸನ್, ನವದೀಪ್ ಸೈನಿ, ಪವನ್ ದೇಶಪಾಂಡೆ, ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್, ವಾನಿಂದು ಹಸರಂಗ, ಸುಯಾಶ್ ಪ್ರಭುದೇಸಾಯಿ, ಟಿಮ್ ಡೇವಿಡ್, ಆಕಾಶ್ ದೀಪ್
ಸನ್‌ರೈಸರ್ಸ್ ಹೈದರಾಬಾದ್ ಸಂಪೂರ್ಣ ಸ್ಕ್ವಾಡ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಜೇಸನ್ ರಾಯ್, ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ದಾರ್ಥ್ ಕೌಲ್, ಉಮ್ರಾನ್ ಮಲಿಕ್, ಸಂದೀಪ್ ಶರ್ಮಾ, ಮನೀಶ್ ಪಾಂಡೆ, ಖಲೀಲ್ ಅಹ್ಮದ್, ಮುಜೀಬ್ ಉರ್ ರೆಹಮಾನ್, ಶೆರ್ಫೇನ್ ರುದರ್‌ಫೋರ್ಡ್, ಜಗದೀಶ ಸುಚಿತ್, ಮೊಹಮ್ಮದ್ ನಬಿ, ಬೇಸಿಲ್ ತಂಪಿ, ವಿರಾಟ್ ಸಿಂಗ್, ಶಹಬಾಜ್ ನದೀಮ್, ಡೇವಿಡ್ ವಾರ್ನರ್, ಶ್ರೀವತ್ಸ ಗೋಸ್ವಾಮಿ, ಕೇದಾರ್ ಜಾಧವ್