ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಆರ್‌ಸಿಬಿ ತಂಡದ ಬಗ್ಗೆ ಭವಿಷ್ಯ ಹೇಳಿದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್

IPL 2021: RCB will finish in the Top 4 in this season - Gautam Gambhir

ಕಳೆದ 13 ಆವೃತ್ತಿಗಳಿಂದ ಐಪಿಎಲ್‌ನಲ್ಲಿ ಟ್ರೋಫಿಯ ಬರವನ್ನು ಎದುರಿಸುತ್ತಿರುವ ಪ್ರಮುಖ ತಂಡ ಆರ್‌ಸಿಬಿ. ಸಾಕಷ್ಟು ಬಲಿಷ್ಠ ಆಟಗಾರರನ್ನು ಹೊಂದಿದ ಹೊರತಾಗಿಯೂ ಆರ್‌ಸಿಬಿ ಚಾಂಪಿಯನ್ ಪಟ್ಟಕ್ಕೇರುವಲ್ಲಿ ವಿಫಲವಾಗಿದೆ. ಈ ಬಾರಿ ಮತ್ತೊಮ್ಮೆ ಕೊಹ್ಲಿ ಪಡೆ ಅದೃಷ್ಟ ಪರೀಕ್ಷೆಗೆ ಇಳಿದಿದೆ. ಆದರೆ ಟೂರ್ನಿಯ ಆರಂಭಕ್ಕೂ ಮುನ್ನ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಮುಂಬರುವ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಭವಿಷ್ಯವನ್ನು ಊಹಿಸಿದ್ದಾರೆ.

ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಮುಂಬರುವ ಐಪಿಎಲ್‌ನಲ್ಲಿ ಅಗ್ರ 4 ತಂಡಗಳಲ್ಲಿ ಸ್ಥಾನವನ್ನು ಪಡೆದುಕೊಳ್ಳಲಿದೆ ಎಂದು ಗೌತಮ್ ಗಂಭೀರ್ ತಮ್ಮ ಊಹೆಯನ್ನು ಹೇಳಿಕೊಂಡಿದ್ದಾರೆ. ಈ ಮೂಲಕ ಆರ್‌ಸಿಬಿ ಪ್ಲೇಆಫ್ ಹಂತಕ್ಕೇರುವ ಬಗ್ಗೆ ಗಂಭೀರ್ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಐಪಿಎಲ್‌ಗೂ ಮುನ್ನವೇ ಶತಕ ಬಾರಿಸಿದ ಎಂಐಯ ಕ್ರಿಸ್‌ಲಿನ್!ಐಪಿಎಲ್‌ಗೂ ಮುನ್ನವೇ ಶತಕ ಬಾರಿಸಿದ ಎಂಐಯ ಕ್ರಿಸ್‌ಲಿನ್!

ಕಳೆದ ಬಾರಿಯ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ತಂಡ ನಾಲ್ಕನೇ ಸ್ಥಾನವನ್ನು ಪಡೆದು ಪ್ಲೇಆಫ್ ಹಂತದಿಂದ ಟೂರ್ನಿಯಿಂದ ಹೊರಬಿದ್ದಿತ್ತು. ಆದರೆ ಈ ಬಾರಿ ಮತ್ತೆರಡು ಹೆಜ್ಜೆ ಮುಂದಿಟ್ಟು ಟೂರ್ನಿ ಗೆಲ್ಲುವ ಉತ್ಸಾಹದಲ್ಲಿ ಬೆಂಗಳೂರು ಮೂಲದ ಫ್ರಾಂಚೈಸಿ ಇದೆ.

ಈ ಬಾರಿಯ ಐಪಿಎಲ್‌ಗಾಗಿ ಆರ್‌ಸಿಬಿ ತಂಡ ಕೆಲ ಬದಲಾವಣೆಗಳನ್ನು ಮಾಡಿಕೊಂಡಿದೆ. ಪ್ರಮುಖವಾಗಿ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿದೆ. ಜೊತೆಗೆ ಡೇನಿಯಮ್ ಸ್ಯಾಮ್ಸ್, ನ್ಯೂಜಿಲೆಂಡ್‌ನ ಕೈಲ್ ಜೇಮಿಸನ್ ಈ ಬಾರಿ ಆರ್‌ಸಿಬಿಯನ್ನು ಮತ್ತಷ್ಟು ಬಲಿಷ್ಠಗೊಳಿಸಲಿದ್ದಾರೆ. ಜೊತೆಗೆ ನ್ಯೂಜಿಲೆಂಡ್‌ನ ಫಿನ್ ಅಲೆನ್, ಭಾರತದ ಯುವ ಬ್ಯಾಟ್ಸ್‌ಮನ್‌ ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್ ಬಗ್ಗೆಯೂ ಹೆಚ್ಚಿನ ನಿರೀಕ್ಷೆಗಳಿವೆ.

ಐಪಿಎಲ್: ಮ್ಯಾಕ್ಸ್‌ವೆಲ್ ರಚಿಸಿದ ಆಲ್ ಟೈಮ್ ತಂಡದಲ್ಲಿ ದೊಡ್ಡ ಆಟಗಾರರಿಗೇ ಸ್ಥಾನವಿಲ್ಲ!ಐಪಿಎಲ್: ಮ್ಯಾಕ್ಸ್‌ವೆಲ್ ರಚಿಸಿದ ಆಲ್ ಟೈಮ್ ತಂಡದಲ್ಲಿ ದೊಡ್ಡ ಆಟಗಾರರಿಗೇ ಸ್ಥಾನವಿಲ್ಲ!

ಆರ್‌ಸಿಬಿ ಸಂಪೂರ್ಣ ತಂಡ: ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಯುಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಕೇನ್ ರಿಚರ್ಡ್ಸನ್, ವಾಷಿಂಗ್ಟನ್ ಸುಂದರ್, ಪವನ್ ದೇಶಪಾಂಡೆ, ಫಿನ್ ಅಲೆನ್, ಶಹಬಾಜ್ ಅಹಮದ್, ನವದೀಪ್ ಸೈನಿ, ಆ್ಯಡಂ ಝಂಪಾ, ಕೈಲ್ ಜೇಮಿಸನ್, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಸಚಿನ್ ಬೇಬಿ, ಮೊಹಮ್ಮದ್ ಅಜರುದ್ದೀನ್, ಡೇನಿಯಲ್ ಕ್ರಿಶ್ಚಿಯನ್, ಕೆ.ಎಸ್.ಭರತ್, ಸುಯಶ್ ಪ್ರಭುದೇಸಾಯಿ, ಡೇನಿಯಲ್ ಸ್ಯಾಮ್ಸ್, ಹರ್ಷಲ್ ಪಟೇಲ್.

Story first published: Thursday, April 8, 2021, 10:02 [IST]
Other articles published on Apr 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X