ಇಶಾಂತ್ ಶರ್ಮಾ ಹಿಮ್ಮಡಿ ಗಾಯದಿಂದ ಬಳಲುತ್ತಿದ್ದಾರೆ: ರಿಕಿ ಪಾಂಟಿಂಗ್

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ವೇಗಿ ಇಶಾಂತ್ ಶರ್ಮಾ ಹಿಮ್ಮಡಿ ನೋವಿನಿಂದ ಬಳಲುತ್ತಿದ್ದಾರೆ ಎಂಬುದನ್ನು ಖಚಿತಪಡಿಸಿದ್ದಾರೆ. ಇಶಾಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೊದಲ ಎರಡು ಪಂದ್ಯಗಳಿಂದಲೂ ಹೊರಗೆ ಉಳಿದಿದ್ದರು.

32ರ ಹರೆಯದ ಇಶಾಂತ್ ಶರ್ಮಾ ಅವರನ್ನು ಈ ಬಾರಿಯ ಹರಾಜು ಪ್ರಕ್ರಿಯೆಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ರೀಟೈನ್ ಮಾಡಿಕೊಂಡಿತ್ತು. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಇಶಾಂತ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿರಲಿಲ್ಲ. ಇಶಾಂತ್ ಬದಲಿಗೆ ಆವೇಶ್ ಖಾನ್ ಸ್ಥಾನ ಗಿಟ್ಟಿಸಿಕೊಂಡಿದ್ದರು.

ಐಪಿಎಲ್: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಹೈಲೈಟ್ಸ್‌

"ಇಶಾಂತ್ ಶರ್ಮಾ ಅವರು ಖಂಡಿತವಾಗಿಯೂ ಹಿಮ್ಮಡಿ ನೋವಿನಿಂದ ಬಳಲುತ್ತಿದ್ದಾರೆ. ಅವರ ಚೇತರಿಕೆಯ ಕಾರ್ಯಗಳು ನಡೆಯುತ್ತಿದೆ" ಎಂದು ರಿಕಿ ಪಾಂಟಿಂಗ್ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಸೋಲಿನ ಬಳಿಕ ವರ್ಚುವಲ್ ಪ್ರೆಸ್ ಕಾನ್ಫರೆನ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಕಳೆದ ಬಾರಿಯ ಆವೃತ್ತಿಯಲ್ಲಿ ಇಶಾಂತ್ ಶರ್ಮಾ ಕೇವಲ ಒಂದು ಪಂದ್ಯವನ್ನು ಆಡಿದ್ದರು. ಅಂದು ಸ್ನಾಯು ಸೆಳೆತಕ್ಕೆ ಒಳಗಾದ ಇಶಾಂತ್ ಶರ್ಮಾ ಬಳಿಕ ಟೂರ್ನಿಯಿಂದಲೇ ಹೊರಬಿದ್ದಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದಲೂ ಇಶಾಂತ್ ಹೊರಗುಳಿಯಬೇಕಾಯಿತು.

ಡೆಲ್ಲಿ ಕ್ಯಾಪಿಟಲ್ಸ್ ಮಾಡಿದ ದೊಡ್ಡ ಎಡವಟ್ಟನ್ನು ಹೇಳಿದ ಕೋಚ್ ರಿಕಿ ಪಾಂಟಿಂಗ್

ಇನ್ನು ಈ ಬಾರಿಯ ಆವೃತ್ತಿಯಲ್ಲಿ ಇಶಾಂತ್ ಶರ್ಮಾ ಅನುಪಸ್ಥಿತಿಯಲ್ಲಿ ಸಿಕ್ಕ ಅವಕಾಶವನ್ನು ಆವೇಶ್ ಖಾನ್ ಅದ್ಭುತವಾಗಿ ಉಪಯೋಗಿಸಿಕೊಂಡಿದ್ದಾರೆ. ಆರಂಭಿಕ ಹಂತದಲ್ಲಿ ಡೆಲ್ಲಿ ವಿಕೆಟ್ ಪಡೆಯುವಲ್ಲಿ ಆವೇಶ್ ಖಾನ್ ಸಹಕಾರಿಯಾಗಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ಆವೇಶ್ ಖಾನ್ ಐದು ವಿಕೆಟ್ ಪಡೆದು ಗಮನಸೆಳೆದಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Friday, April 16, 2021, 14:43 [IST]
Other articles published on Apr 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X