For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಟಿ20 ಕ್ರಿಕೆಟ್‌ನಲ್ಲಿ ದಾಖಲೆ ಬರೆದ ರೋಹಿತ್ ಶರ್ಮಾ

IPL 2021: Rohit sharma completes 4000 runs as t20 captain

ಚೆನ್ನೈ: ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 9ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ನಾಯಕನಾಗಿ 4000 ರನ್ ಬಾರಿಸಿದ ಸಾಧನೆ ಮಾಡಿದ್ದಾರೆ.

ಶನಿವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಮುಂಬೈ ಪರ ಆರಂಭಿಕರಾಗಿ ಬಂದಿದ್ದ ರೋಹಿತ್ ಶರ್ಮಾ 25 ಎಸೆತಗಳಲ್ಲಿ 32 ರನ್ ಸೇರಿಸಿದರು. ಇದರೊಂದಿಗೆ ಶರ್ಮಾ ಹೆಸರಿಗೆ ದಾಖಲೆ ಸೇರಿಕೊಂಡಿದೆ.

ಹಿಟ್‌ಮ್ಯಾನ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್‌ನಲ್ಲಿ 5 ಬಾರಿ ಚಾಂಪಿಯನ್ಸ್ ಪಟ್ಟ ಗೆದ್ದಿದೆ. ಟಿ20 ಕ್ರಿಕೆಟ್‌ನಲ್ಲಿ ಹಲವಾರು ದಾಖಲೆಗಳನ್ನು ನಿರ್ಮಿಸಿರುವ ಶರ್ಮಾ ಮತ್ತೊಂದು ದಾಖಲೆ ತನ್ನ ಹೆಸರಿಗೆ ಬರೆಯಿಸಿಕೊಂಡಿದ್ದಾರೆ.

33ರ ಹರೆಯದ ರೋಹಿತ್ 38 ಟೆಸ್ಟ್‌ ಪಂದ್ಯಗಳಲ್ಲಿ 2615 ರನ್, 227 ಏಕದಿನ ಪಂದ್ಯಗಳಲ್ಲಿ 9205 ರನ್, 111 ಟಿ20ಐ ಪಂದ್ಯಗಳಲ್ಲಿ 2864 ರನ್ ಮತ್ತು 203 ಐಪಿಎಲ್ ಪಂದ್ಯಗಳಲ್ಲಿ 5324 ರನ್ ದಾಖಲೆ ಹೊಂದಿದ್ದಾರೆ. ಏಕದಿನದಲ್ಲಿ ವೈಯಕ್ತಿಕ ಅತ್ಯಧಿಕ ರನ್ ವಿಶ್ವದಾಖಲೆ ಶರ್ಮಾ (264 ರನ್) ಹೆಸರಿನಲ್ಲಿದೆ.

Story first published: Saturday, April 17, 2021, 21:13 [IST]
Other articles published on Apr 17, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+