For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಕ್ವಾರಂಟೈನ್ ಮುಗಿಸಿ ಮುಂಬೈ ತಂಡ ಸೇರಿಕೊಂಡ ರೋಹಿತ್ ಶರ್ಮಾ

IPL 2021: Rohit Sharma finished quarantine and joined Mumbai Indians Squad

ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದ್ದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನಾಲ್ಕನೇ ಆವೃತ್ತಿಯ ದ್ವಿತೀಯಾರ್ಧ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಇದೇ ವರ್ಷದ ಏಪ್ರಿಲ್ 9ರಂದು ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವ ತನಕ ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿತ್ತು.

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳನ್ನು ಇದೇ ಸೆಪ್ಟೆಂಬರ್ 19ರಿಂದ ಕಳೆದ ಬಾರಿಯಂತೆ ಯುಎಇಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು ಟೂರ್ನಿಯ ಪುನರ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಅಷ್ಟೇ ಅಲ್ಲದೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯ ಮೊದಲಾರ್ಧದಲ್ಲಿ ಭಾಗವಹಿಸಿದ್ದ ವಿವಿಧ ತಂಡಗಳ ಕೆಲ ಆಟಗಾರರು ದ್ವಿತೀಯಾರ್ಧದಲ್ಲಿ ನಡೆಯಲಿರುವ ಪಂದ್ಯಗಳಿಂದ ಹಿಂದೆ ಸರಿದಿದ್ದು ಅಂತಹ ಆಟಗಾರರ ಬದಲಾಗಿ ನೂತನ ಆಟಗಾರನನ್ನು ವಿವಿಧ ತಂಡಗಳು ಆಯ್ಕೆ ಮಾಡಿಕೊಂಡಿವೆ.

ಹೀಗಾಗಿ ಯುಎಇಯಲ್ಲಿ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧ ಮೊದಲನೇ ಭಾಗಕ್ಕಿಂತ ತುಂಬಾ ವಿಭಿನ್ನವಾಗಿರಲಿದ್ದು ಯಾವ ತಂಡಗಳು ಯಾವ ರೀತಿಯ ಪ್ರದರ್ಶನವನ್ನು ನೀಡಬಹುದು ಎಂಬುದನ್ನು ಹಿರಿಯ ಆಟಗಾರರು ಮತ್ತು ಕ್ರಿಕೆಟ್ ಪಂಡಿತರು ಊಹಿಸತೊಡಗಿದ್ದಾರೆ. ಇನ್ನು ವಿವಿಧ ತಂಡದ ಹಲವಾರು ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಲು ಇನ್ನೂ ತಿಂಗಳು ಬಾಕಿ ಇರುವಾಗಲೇ ದುಬೈ ತಲುಪಿ ಕ್ವಾರಂಟೈನ್ ನಿಯಮವನ್ನು ಮುಗಿಸಿ ತರಬೇತಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಅದೇ ರೀತಿ ಮುಂಬೈ ಇಂಡಿಯನ್ಸ್ ತಂಡದ ಆಟಗಾರರು ಕೂಡ ಕೆಲವು ದಿನಗಳ ಹಿಂದೆಯೇ ಮುಂಚಿತವಾಗಿ ದುಬೈ ತಲುಪಿ ಕ್ವಾರಂಟೈನ್ ನಿಯಮವನ್ನು ಮುಗಿಸಿ ತರಬೇತಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರತರಾಗಿದ್ದ ಕಾರಣ ಇತ್ತೀಚೆಗಷ್ಟೇ ಟೆಸ್ಟ್ ಸರಣಿ ಮುಗಿದ ಬಳಿಕ ದುಬೈ ಪ್ರಯಾಣವನ್ನು ಕೈಗೊಂಡು ಕ್ವಾರಂಟೈನ್ ನಿಯಮಕ್ಕೆ ಒಳಗಾಗಿದ್ದರು.

ಹೀಗೆ ಕ್ವಾರಂಟೈನ್ ನಿಯಮಕ್ಕೆ ಒಳಗಾಗಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಇಂದು ( ಸೆಪ್ಟೆಂಬರ್ 18 ) ಕ್ವಾರಂಟೈನ್ ನಿಯಮವನ್ನು ಯಶಸ್ವಿಯಾಗಿ ಮುಗಿಸಿದ್ದು ಮುಂಬೈ ಇಂಡಿಯನ್ಸ್ ತಂಡದ ಆಟಗಾರರನ್ನು ಸೇರಿಕೊಂಡಿದ್ದಾರೆ. ಹೀಗೆ ಕ್ವಾರಂಟೈನ್ ಮುಗಿಸಿ ತಂಡಕ್ಕೆ ಪ್ರವೇಶವನ್ನು ಮಾಡಿದ ರೋಹಿತ್ ಶರ್ಮಾಗೆ ಮುಂಬೈ ಇಂಡಿಯನ್ಸ್ ತಂಡದ ಆಟಗಾರರು ನಗುಮುಖದೊಂದಿಗೆ ಪರಸ್ಪರ ಅಪ್ಪುಗೆಯನ್ನು ನೀಡುತ್ತಾ ಸ್ವಾಗತವನ್ನು ಕೋರಿದರು.

ರೋಹಿತ್ ಶರ್ಮಾಗೆ ಮುಂಬೈ ಇಂಡಿಯನ್ಸ್ ತಂಡದ ಆಟಗಾರರು ಸ್ವಾಗತ ಕೋರಿರುವ ವಿಡಿಯೋವನ್ನು ಮುಂಬೈ ಇಂಡಿಯನ್ಸ್ ತಂಡ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ. ಕ್ವಾರಂಟೈನ್ ಮುಗಿಸಿ ತಂಡದ ಆಟಗಾರರನ್ನು ನೋಡಿದ ಕೂಡಲೇ ಪ್ರತಿಯೊಬ್ಬ ಆಟಗಾರನ ಬಳಿಯೂ ತೆರಳಿ ವೈಯಕ್ತಿಕವಾಗಿ ಮಾತನಾಡುತ್ತಾ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ವಿಡಿಯೋ ವೀಕ್ಷಿಸಿದ ಕ್ರಿಕೆಟ್ ಅಭಿಮಾನಿಗಳು ರೋಹಿತ್ ಶರ್ಮಾ ಅವರ ಸರಳತೆಗೆ ಮನಸೋತು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಭಾಗ ಆರಂಭವಾದಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ತನ್ನ ಮೊದಲನೇ ಪಂದ್ಯವನ್ನಾಡಿದ್ದ ಮುಂಬೈ ಇಂಡಿಯನ್ಸ್ ದ್ವಿತೀಯಾರ್ಧದಲ್ಲಿ ಸೆಪ್ಟೆಂಬರ್ 19ರ ಭಾನುವಾರದಂದು ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೆಣಸಾಟ ನಡೆಸಲಿದೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಭಾಗದಲ್ಲಿ 7 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ ತಂಡ 4 ಪಂದ್ಯಗಳಲ್ಲಿ ಜಯ ಸಾಧಿಸಿ, 3 ಪಂದ್ಯಗಳಲ್ಲಿ ಸೋಲುಂಡಿದ್ದು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.

Story first published: Saturday, September 18, 2021, 16:05 [IST]
Other articles published on Sep 18, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+