'ನಮ್ಮಿಂದ ಆಗುತ್ತಿಲ್ಲ'; ಬೆಂಗಳೂರು ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್

ಸದ್ಯ ಯುಎಇಯಲ್ಲಿ ಮುಂದುವರಿಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಅಂದುಕೊಂಡಿದ್ದು ಯಾವುದೂ ಕೂಡ ನಡೆಯುತ್ತಿಲ್ಲ ಎಂದೆನಿಸುತ್ತದೆ. ಈ ಬಾರಿಯ ಐಪಿಎಲ್ ಟೂರ್ನಿ ಭಾರತದಲ್ಲಿ ಆರಂಭವಾದಾಗಲೂ ಸಹ ಮುಂಬೈ ಇಂಡಿಯನ್ಸ್ ತಂಡ ಈ ಹಿಂದಿನ ಐಪಿಎಲ್ ಟೂರ್ನಿಗಳಲ್ಲಿ ತೋರಿಸುತ್ತಿದ್ದಂತಹ ಅತ್ಯದ್ಭುತ ಪ್ರದರ್ಶನವನ್ನು ತೋರಿಸುವಲ್ಲಿ ವಿಫಲವಾಗಿ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿ ಕೊರೋನಾವೈರಸ್ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡ ಸಮಯಕ್ಕೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಳ್ಳಲಷ್ಟೇ ಶಕ್ತವಾಗಿತ್ತು.

IPL 2021 Playoffs: ಪ್ಲೇಆಫ್‌ ಪ್ರವೇಶಿಸಲು ಎಲ್ಲಾ 8 ತಂಡಗಳು ಇಷ್ಟು ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕಾಗಿದೆ!IPL 2021 Playoffs: ಪ್ಲೇಆಫ್‌ ಪ್ರವೇಶಿಸಲು ಎಲ್ಲಾ 8 ತಂಡಗಳು ಇಷ್ಟು ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕಾಗಿದೆ!

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಈ ಬಾರಿಯ ಐಪಿಎಲ್ ಟೂರ್ನಿ ಯುಎಇಗೆ ಸ್ಥಳಾಂತರಿಸಲ್ಪಟ್ಟಿತು. ಈ ಸುದ್ದಿಯನ್ನು ಕೇಳಿದ ಮುಂಬೈ ಇಂಡಿಯನ್ಸ್ ತಂಡದ ಅಭಿಮಾನಿಗಳು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಯುಎಇ ಚರಣದಲ್ಲಿ ರೋಹಿತ್ ಶರ್ಮ ಪಡೆ ಅತ್ಯದ್ಭುತ ಪ್ರದರ್ಶನವನ್ನು ನೀಡುವುದು ಖಚಿತ ಎಂದು ನಂಬಿಕೆಯನ್ನು ಇಟ್ಟಿದ್ದರು. ಅಭಿಮಾನಿಗಳ ಈ ದೊಡ್ಡ ಮಟ್ಟದ ನಂಬಿಕೆಗೆ ಕಾರಣ ಇದೇ ಯುಎಇಯಲ್ಲಿ ಕಳೆದ ಬಾರಿ ನಡೆದಿದ್ದ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದು. ಹೀಗಾಗಿ ಈ ಬಾರಿ ಯುಎಇಯಲ್ಲಿ ಮುಂದುವರೆದಿರುವ ಟೂರ್ನಿಯಲ್ಲಿಯೂ ಕೂಡ ಮುಂಬೈ ಇಂಡಿಯನ್ಸ್ ತಂಡ ಅದೇ ರೀತಿಯ ಪ್ರದರ್ಶನವನ್ನು ನೀಡಲಿದೆ ಎಂದು ಎಣಿಸಲಾಗಿತ್ತು. ಆದರೆ ಅಭಿಮಾನಿಗಳ ಊಹೆ ಹುಸಿಯಾಗಿದ್ದು ಮುಂಬೈ ಇಂಡಿಯನ್ಸ್ ತಂಡ ಯುಎಇಯಲ್ಲಿ ಮುಂದುವರಿಯುತ್ತಿರುವ ಈ ಬಾರಿಯ ಐಪಿಎಲ್ ಟೂರ್ನಿಯ ತನ್ನ ಮೊದಲ 3 ಪಂದ್ಯಗಳನ್ನೂ ಸೋತು ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದೆ.

ಹೌದು, ಯುಎಇಯಲ್ಲಿ ಮುಂದುವರಿಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೆಪ್ಟೆಂಬರ್ 26ರ ಭಾನುವಾರದಂದು ನಡೆದ ಪಂದ್ಯದಲ್ಲಿ ಹೀನಾಯವಾಗಿ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡು ಬೆಂಗಳೂರು ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ನೀಡಿದರು. ಹೀಗೆ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿರಾಟ್ ಕೊಹ್ಲಿ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅರ್ಧಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು. ಇನ್ನು ಬೆಂಗಳೂರು ತಂಡ ನೀಡಿದ 166 ರನ್‌ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಉತ್ತಮ ಆರಂಭವನ್ನು ಪಡೆದುಕೊಂಡ ಹೊರತಾಗಿಯೂ 18.1 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 111 ರನ್ ಗಳಿಸಿತು.

ಈ ಕೆಲಸ ಮಾಡಿದ್ರೆ ಧೋನಿ ಕಳಪೆ ಫಾರ್ಮ್‌ನಿಂದ ಹೊರಬಂದು ಹೆಚ್ಚು ರನ್ ಗಳಿಸಬಹುದು: ಗಂಭೀರ್ಈ ಕೆಲಸ ಮಾಡಿದ್ರೆ ಧೋನಿ ಕಳಪೆ ಫಾರ್ಮ್‌ನಿಂದ ಹೊರಬಂದು ಹೆಚ್ಚು ರನ್ ಗಳಿಸಬಹುದು: ಗಂಭೀರ್

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಹತ್ವದ ಪಂದ್ಯದಲ್ಲಿ 54 ರನ್‌ಗಳ ಅಮೋಘ ಗೆಲುವನ್ನು ಸಾಧಿಸಿತು. ಈ ಮೂಲಕ ಯುಎಇ ಚರಣದಲ್ಲಿ ಸತತ 3 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನ್ನು ಅನುಭವಿಸಿದಂತಾಗಿದ್ದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಜಾರಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೀಡಿದ್ದ ಗುರಿಯನ್ನು ಬೆನ್ನತ್ತಿದ್ದ ಮುಂಬೈ ಇಂಡಿಯನ್ಸ್ ತಂಡ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಮಾಡುವ ಮೂಲಕ ಈ ಪಂದ್ಯವನ್ನು ಗೆಲ್ಲಲಿದೆ ಎನ್ನುವ ನಿರೀಕ್ಷೆಯನ್ನು ಹುಟ್ಟುಹಾಕಿತ್ತು. ಆದರೆ ನಂತರ ಬೆಂಗಳೂರು ತಂಡದ ಬೌಲರ್‌ಗಳ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟ್ಸ್‌ಮನ್‌ಗಳು ಸಾಲುಸಾಲಾಗಿ ಪೆವಿಲಿಯನ್ ಪರೇಡ್ ನಡೆಸಿ ಆಲ್ ಔಟ್ ಆದರು. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಹೀನಾಯವಾಗಿ ಸೋತ ನಂತರ ಪಂದ್ಯದ ಕುರಿತು ಮಾತನಾಡಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಸೋಲಿಗೆ ಕಾರಣರಾದದ್ದು ಯಾರು ಎಂಬ ವಿಷಯವನ್ನು ಈ ಕೆಳಕಂಡಂತೆ ಬಿಚ್ಚಿಟ್ಟಿದ್ದಾರೆ..

ಸೋಲಿಗೆ ಬ್ಯಾಟಿಂಗ್ ವಿಭಾಗವೇ ಕಾರಣ

ಸೋಲಿಗೆ ಬ್ಯಾಟಿಂಗ್ ವಿಭಾಗವೇ ಕಾರಣ

'ಬ್ಯಾಟಿಂಗ್ ಆರಂಭಿಸುವ ಮುನ್ನ ತಂಡಕ್ಕೆ ಆಸರೆಯಾಗಿ ನಿಲ್ಲಬೇಕಾದ ಎಲ್ಲಾ ಬ್ಯಾಟ್ಸ್‌ಮನ್‌ಗಳ ಜತೆಗೂ ಚರ್ಚೆ ನಡೆಸಿದ್ದೆ. ಆದರೆ ಬೆಂಗಳೂರು ತಂಡದ ಬೌಲರ್‌ಗಳು ನಮ್ಮ ತಂಡದ ಮೊದಲೆರಡು ವಿಕೆಟ್‍ಗಳು ಬಿದ್ದ ಕೂಡಲೇ ನಮ್ಮ ತಂಡದ ಮೇಲೆ ಒತ್ತಡ ಹೇರಲು ಆರಂಭಿಸಿದರು. ಇಂತಹ ಸಂದರ್ಭದಲ್ಲಿ ನಮ್ಮ ತಂಡದ ಆಟಗಾರರು ಪುಟಿದೇಳಬೇಕಿತ್ತು, ಆದರೆ ನಮ್ಮ ತಂಡದ ಯಾವುದೇ ಬ್ಯಾಟ್ಸ್‌ಮನ್‌ ನೆಲಕಚ್ಚಿ ನಿಲ್ಲಲು ಆಗಲೇ ಇಲ್ಲ. ಈ ಹಿಂದಿನ ಟೂರ್ನಿಗಳಲ್ಲಿ ಇಂತಹ ಸಂಕಷ್ಟಕ್ಕೆ ಸಿಲುಕಿದಾಗ ನಮ್ಮ ತಂಡದ ಬ್ಯಾಟ್ಸ್‌ಮನ್‌ಗಳು ದಿಟ್ಟ ಪ್ರದರ್ಶನವನ್ನು ನೀಡುವುದರ ಮೂಲಕ ಪುಟಿದೇಳುತ್ತಿದ್ದರು, ಆದರೆ ಈ ಬಾರಿಯ ಟೂರ್ನಿಯಲ್ಲಿ ಅದು ನಮ್ಮಿಂದ ಸಾಧ್ಯವಾಗುತ್ತಿಲ್ಲ' ಎಂದು ಹೇಳಿಕೆಯನ್ನು ನೀಡುವುದರ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಹೀನಾಯ ಸೋಲಿಗೆ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟ್ಸ್‌ಮನ್‌ಗಳೇ ಕಾರಣ ಎಂದು ರೋಹಿತ್ ಶರ್ಮ ಹೇಳಿದ್ದಾರೆ.

ಬೌಲಿಂಗ್ ವಿಭಾಗದ ಬಗ್ಗೆಯೂ ರೋಹಿತ್ ಶರ್ಮಾ ಮಾತು

ಬೌಲಿಂಗ್ ವಿಭಾಗದ ಬಗ್ಗೆಯೂ ರೋಹಿತ್ ಶರ್ಮಾ ಮಾತು

ಇನ್ನು ತಮ್ಮ ತಂಡದ ಬೌಲಿಂಗ್ ವಿಭಾಗದ ಬಗ್ಗೆಯೂ ಮಾತನಾಡಿದ ರೋಹಿತ್ ಶರ್ಮಾ 'ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ಹಂತದಲ್ಲಿ 180ಕ್ಕೂ ಹೆಚ್ಚು ರನ್ ಗಳಿಸುವಂತಹ ರೀತಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿತ್ತು. ಆದರೆ ನಮ್ಮ ತಂಡದ ಬೌಲರ್‌ಗಳು ಅತ್ಯದ್ಭುತವಾಗಿ ಕೊನೆಯ ಹಂತದಲ್ಲಿ ಪ್ರದರ್ಶನ ನೀಡಿದ ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 165 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದೆವು' ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕೊನೆ ಕ್ಷಣದಲ್ಲಿ ಪಂದ್ಯಕ್ಕೆ ತಿರುವು ಕೊಟ್ಟ ಹರ್ಷಲ್ | Oneindia Kannada
ಯುಎಇ ಚರಣದಲ್ಲಿ ಮುಂಬೈ ಹ್ಯಾಟ್ರಿಕ್ ಸೋಲು

ಯುಎಇ ಚರಣದಲ್ಲಿ ಮುಂಬೈ ಹ್ಯಾಟ್ರಿಕ್ ಸೋಲು

ಭಾರತ ನೆಲದಲ್ಲಿ ಆರಂಭವಾಗಿ ಸ್ಥಗಿತಗೊಂಡು ಯುಎಇಗೆ ಸ್ಥಳಾಂತರಿಸಲ್ಪಟ್ಟು ಮುಂದುವರಿಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಹ್ಯಾಟ್ರಿಕ್ ಸೋಲನ್ನು ಕಂಡಿದೆ. ಯುಎಇ ಚರಣದ ತನ್ನ ಮೊದಲನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಡಿದ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡ 20 ರನ್‌ಗಳ ಸೋಲನ್ನು ಕಂಡಿತ್ತು, ನಂತರ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿಯೂ ಮುಂಬೈ ಇಂಡಿಯನ್ಸ್ ತಂಡ ಸೋಲುಂಡಿತು ಮತ್ತು ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧವೂ ಮುಂಬೈ ಇಂಡಿಯನ್ಸ್ ಹೀನಾಯವಾಗಿ ಸೋಲನ್ನು ಕಾಣುವುದರ ಮೂಲಕ ಸತತವಾಗಿ 3 ಪಂದ್ಯಗಳಲ್ಲಿ ಸೋಲುಂಡಿದೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 4 - October 18 2021, 07:30 PM
ಶ್ರೀಲಂಕಾ
Namibia
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Monday, September 27, 2021, 8:33 [IST]
Other articles published on Sep 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X