ಸಿಕ್ಸರ್ ದಾಖಲೆ ಪಟ್ಟಿಯಲ್ಲಿ ಎಂಎಸ್ ಧೋನಿ ಸರಿಗಟ್ಟಿದ ರೋಹಿತ್ ಶರ್ಮಾ

ಚೆನ್ನೈ: ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಅತ್ಯಧಿಕ ಸಿಕ್ಸರ್‌ಗಾಗಿ ದಾಖಲೆ ನಿರ್ಮಿಸಿದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ರೋಹಿತ್ ಸರಗಟ್ಟಿದ್ದಾರೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 9ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಶರ್ಮಾ ಸಿಕ್ಸರ್‌ಗಾಗಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಶನಿವಾರದ ಪಂದ್ಯದಲ್ಲಿ ಆರಂಭಿಕರಾಗಿ ಬಂದಿದ್ದ ಶರ್ಮಾ 25 ಎಸೆತಗಳಲ್ಲಿ 32 ರನ್ ಸೇರಿಸಿದರು. ಇದರಲ್ಲಿ 2 ಫೋರ್, 2 ಸಿಕ್ಸರ್ ಸೇರಿತ್ತು. ಈ ಎರಡು ಸೆಕ್ಸರ್‌ನೊಂದಿಗೆ ಶರ್ಮಾ ದಾಖಲೆ ನಿರ್ಮಿಸಿದ್ದಾರೆ. ಐಪಿಎಲ್‌ನಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದ ಭಾರತೀಯರಲ್ಲಿ ಶರ್ಮಾ ಅವರು ಎಂಎಸ್ ಧೋನಿಯನ್ನು ಮೀರಿಸಿದ್ದಾರೆ.
ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ 216 ಸಿಕ್ಸರ್ ದಾಖಲೆ ಹೊಂದಿದ್ದರು. ಈಗ ಶರ್ಮಾ 217 ಸಿಕ್ಸರ್‌ಗಳನ್ನು ಬಾರಿಸಿ ಧೋನಿಯನ್ನು ಮೀರಿಸಿದ್ದಾರೆ. ಐಪಿಎಲ್‌ನಲ್ಲಿ ಅತ್ಯಧಿಕ ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯರಲ್ಲಿ ಶರ್ಮಾ ಮೊದಲ ಸ್ಥಾನಕ್ಕೇರಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications