For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಬೆಂಗಳೂರು vs ಕೊಲ್ಕತ್ತಾ, ಪ್ಲೇಯಿಂಗ್ ‍XI, ಅಪ್‌ಡೇಟ್ಸ್

IPL 2021: Royal Challengers Bangallore vs Kolkata Knight Riders, Match 10, Updates

ಐಪಿಎಲ್‌ನಲ್ಲಿ ಇಂದು ಮೊದಲ ಡಬಲ್ ಹೆಡ್ಡರ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಕಳೆದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ವಿರಾಟ್ ಪಡೆ ಈ ಪಂದ್ಯದಲ್ಲಿ ಹೆಚ್ಚಿನ ಆತ್ಮವಿಶ್ವಾಸದಿಂದ ಕಣಕ್ಕಿಳಿಯುತ್ತಿದೆ. ಅದರಲ್ಲೂ ಆಡುವ ಬಳಗದಲ್ಲಿ ಕೇವಲ 3 ವಿದೇಶಿ ಆಟಗಾರರನ್ನು ಕಣಕ್ಕಿಳಿಸಿರುವುದು ಕುತೂಹಲ ಮೂಡಿಸಿದೆ. ಕಳೆದ ಪಂದ್ಯದಲ್ಲಿ ಆಡಿದ ಡೇನಿಯಲ್ ಕ್ರಿಶ್ಚಿಯನ್ ಬದಲಿಗೆ ರಜತ್ ಪಾಟೀದಾರ್‌ಗೆ ಅವಕಾಶ ನೀಡಲಾಗಿದೆ.

ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದ್ದು ಯಾವುದೇ ಬದಲಾವಣೆಯನ್ನು ಮಾಡಿಕೊಂಡಿಲ್ಲ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ:
ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಕೈಲ್ ಜಾಮಿಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್

ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ:
ನಿತೀಶ್ ರಾಣಾ, ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗಾನ್ (ನಾಯಕ), ಶಕೀಬ್ ಅಲ್ ಹಸನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಆಂಡ್ರೆ ರಸ್ಸೆಲ್, ಪ್ಯಾಟ್ ಕಮ್ಮಿನ್ಸ್, ಹರ್ಭಜನ್ ಸಿಂಗ್, ಪ್ರಸಿದ್ಧ್ ಕೃಷ್ಣ, ವರುಣ್ ಚಕ್ರವರ್ತಿ

Story first published: Sunday, April 18, 2021, 15:26 [IST]
Other articles published on Apr 18, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+