ಐಪಿಎಲ್ 2021: ಎಲಿಮಿನೇಟರ್ ಅಗ್ನಿ ಪರೀಕ್ಷೆ ಗೆಲ್ಲುತ್ತಾ ವಿರಾಟ್ ಕೊಹ್ಲಿ ಬಳಗ!

ಐಪಿಎಲ್ 14ನೇ ಆವೃತ್ತಿಯ ಪ್ಲೇಆಫ್ ಪಂದ್ಯಗಳು ನಡೆಯುತ್ತಿದ್ದು ಮೊದಲ ಕ್ವಾಲಿಫೈಯರ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಿದ್ದು ಫೈನಲ್‌ಗೆ ಪ್ರವೇಶ ಪಡೆದಿದೆ. ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ನೇರವಾಗಿ ಪ್ರವೇಶ ಪಡೆಯುವಲ್ಲಿ ವಿಫಲವಾಗಿದ್ದು ಮತ್ತೊಂದು ಕ್ವಾಲಿಫೈಯರ್‌ನಲ್ಲಿ ಸೆಣೆಸಾಡಬೇಕಿದೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಇ ತಂಡ ಇಂದು ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು ಈ ಪಂದ್ಯದಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.

ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಎದುರಾಳಿಯಾಗಿ ಇಯಾನ್ ಮಾರ್ಗನ್ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸವಾಲೆಸೆಯಲಿದೆ. ಭಾರತದಲ್ಲಿ ನಡೆದ ಮೊದಲ ಚರಣದ ಪಂದ್ಯದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಕೆಕೆಆರ್ ಎರಡನೇ ಚರಣದಲ್ಲಿ ಅಮೋಘ ಲಯಕ್ಕೆ ಮರಳಿತು. ಈ ಮೂಲಕ ಅದ್ಭುತ ರೀತಿಯಲ್ಲಿ ಟೂರ್ನಿಯಲ್ಲಿ ಕಮ್‌ಬ್ಯಾಕ್ ಮಾಡುವ ಮೂಲಕ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ, ಚೆನ್ನೈ ಸೂಪರ್ ಕಿಂಗ್ಸ್ ಫೈನಲ್‌ಗೆ ಎಂಟ್ರಿಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ, ಚೆನ್ನೈ ಸೂಪರ್ ಕಿಂಗ್ಸ್ ಫೈನಲ್‌ಗೆ ಎಂಟ್ರಿ

ಆರ್‌ಸಿಬಿ ತಂಡದ ಪರವಾಗಿ ಗ್ಲೆನ್ ಮ್ಯಾಕ್ಸ್‌ವೆಲ್ ಅದ್ಭುತವಾದ ಫಾರ್ಮ್‌ನಲ್ಲಿದ್ದು ಸತತವಾಗಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. ತಂಡ ಮ್ಯಾಕ್ಸ್‌ವೆಲ್ ಬ್ಯಾಟಿಂಗನ್ನು ಹೆಚ್ಚು ನೆಚ್ಚಿಕೊಂಡಿರುವಂತೆ ಭಾಸವಾಗುತ್ತಿದೆ. ಆದರೆ ಉಳಿದ ಆಟಗಾರರಿಂದಲೂ ಉತ್ತಮ ಸಾಥ್ ದೊರೆಯುತ್ತಿರುವುದು ಸಮಾಧಾನಕರ ಸಂಗತಿ. ಅದರಲ್ಲೂ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೀಕರ್ ಭರತ್ ಪ್ರದರ್ಶಿಸಿದ ಅಮೋಘ ಪ್ರದರ್ಶನ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿತ್ತು. ಈ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ಕೂಡ ಅಜೇಯ ಅರ್ಧ ಶತಕದ ಕೊಡುಗೆ ನೀಡಿ ಮಿಂಚಿದ್ದಾರೆ.

ಮತ್ತೊಂದೆಡೆ ಯುವ ಆರಂಭಿಕ ಆಟಗಾರರ ಕಳೆದ ಎರಡು ಪಂದ್ಯಗಳಲ್ಲಿ ನೀಡಿದ ಪ್ರದರ್ಶನ ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಆತಂಕ ಮೂಡಿಸಿದೆ. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಪಡಿಕ್ಕಲ್ ಮೊದಲ ಎಸೆತದಲ್ಲಿಯೇ ಔಟಾಗಿದ್ದರೆ ಅದಕ್ಕೂ ಹಿಂದಿನ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದರು. ಇದು ತಂಡದ ಫಲಿತಾಂಶದ ಮೇಲೆಯೂ ಪರಿಣಾಮ ಬೀರಿತ್ತು.

ಮತ್ತೊಂದೆಡೆ ಅನುಭವಿಗಳಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಬ್ಯಾಟ್‌ನಿಂದ ಉತ್ತಮ ಪ್ರದರ್ಶನ ಬರಬೇಕಿದೆ. ಆರ್‌ಸಿಬಿ ಈ ಬಾರಿಯ ಐಪಿಎಲ್‌ನಲ್ಲಿ ಫೈನಲ್ ಪ್ರವೇಶ ಮಾಡಬೇಕಿದ್ದರೆ ಈ ಇಬ್ಬರ ಬ್ಯಾಟ್‌ನಿಂದ ಕೂಡ ಉತ್ತಮವಾಗಿ ರನ್‌ ಹರಿದುಬರಬೇಕಿದೆ. ಕೆಳ ಕ್ರಮಾಂಕದ ಆಟಗಾರರು ಕೂಡ ನಿರ್ಣಾಯಕ ಪ್ರದರ್ಶನ ನೀಡುವ ಅಗತ್ಯವಿದೆ.

ಬೌಲಿಂಗ್ ವಿಭಾಗ: ಇನ್ನು ಆರ್‌ಸಿಬಿ ತಂಡದ ಬೌಲಿಂಗ್ ವಿಭಾಗ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಪವರ್‌ಪ್ಲೇನಲ್ಲಿ ಎದುರಾಳಿಯ ವಿಕೆಟ್ ಪಡೆಯುವ ಮೂಲಕ ಒತ್ತಡಕ್ಕೆ ಸಿಲುಕಿಸುವ ಪ್ರಯತ್ನವಾಗಬೇಕಿದೆ. ಮೊದಲ ಹತ್ತು ಓವರ್‌ಗಳ ಕಾಲ ಆರ್‌ಸಿಬಿ ಬೌಲಿಂಗ್ ಪಡೆ ಹೆಚ್ಚಿನ ಯಶಸ್ಸು ಪಡೆಯುವಲ್ಲಿ ವಿಫಲವಾಗುತ್ತಿದೆ. ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ ಯುಜುವೇಂದ್ರ ಚಾಹಲ್ ಉತ್ತಮ ಲಯದಲ್ಲಿದ್ದ ತಂಡದ ಯಶಸ್ಸಿನಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ಈ ಪ್ರದರ್ಶನ ಇಂದಿನ ಪಂದ್ಯದಲ್ಲಿಯೂ ಆರ್‌ಸಿಬಿಗೆ ಅಗತ್ಯವಾಗಿದೆ.

ಕೆ. ಎಲ್ ರಾಹುಲ್ RCBಯ ನೆಕ್ಟ್ಸ್ ಕ್ಯಾಪ್ಟನ್ ಆಗೋದು ಕನ್ಫರ್ಮ್!! | Oneindia Kannada

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ (ನಾಯಕ), ಶ್ರೀಕರ್ ಭಾರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿ ವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಕೈಲ್ ಜೇಮೀಸನ್, ನವದೀಪ್ ಸೈನಿ , ಟಿಮ್ ಡೇವಿಡ್, ದುಷ್ಮಂತ ಚಮೀರಾ, ಸಚಿನ್ ಬೇಬಿ, ಪವನ್ ದೇಶಪಾಂಡೆ, ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್, ವನಿಂದು ಹಸರಂಗ, ಸುಯಶ್ ಪ್ರಭುದೇಸಾಯಿ, ಆಕಾಶ್ ದೀಪ್

ಐಪಿಎಲ್‌ನಲ್ಲಿ 25ನೇ ಅರ್ಧ ಶತಕ ಬಾರಿಸಿದ ಕನ್ನಡಿಗ ರಾಬಿನ್ ಉತ್ತಪ್ಪಐಪಿಎಲ್‌ನಲ್ಲಿ 25ನೇ ಅರ್ಧ ಶತಕ ಬಾರಿಸಿದ ಕನ್ನಡಿಗ ರಾಬಿನ್ ಉತ್ತಪ್ಪ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ಇಯಾನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಶಕೀಬ್ ಅಲ್ ಹಸನ್, ಸುನೀಲ್ ನರೈನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕರವರ್ತಿ, ಟಿಮ್ ಸೌಥಿ, ಹರ್ಭಜನ್ ಸಿಂಗ್, ಆಂಡ್ರೆ ರಸೆಲ್, ಬೆನ್ ಕಟ್ಟಿಂಗ್, ಕರುಣ್ ನಾಯರ್, ಪವನ್ ನೇಗಿ, ಗುರ್ಕೀರತ್ ಸಿಂಗ್ ಮನ್, ಶೆಲ್ಡನ್ ಜಾಕ್ಸನ್, ಸಂದೀಪ್ ವಾರಿಯರ್, ಟಿಮ್ ಸೀಫರ್ಟ್, ಪ್ರಸಿದ್ಧ್ ಕೃಷ್ಣ, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ವೈಭವ್ ಅರೋರಾ

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 15 - October 24 2021, 03:30 PM
ಶ್ರೀಲಂಕಾ
ಬಾಂಗ್ಲಾದೇಶ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Monday, October 11, 2021, 9:01 [IST]
Other articles published on Oct 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X