For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಯುಎಇಯಲ್ಲಿ ಅಭ್ಯಾಸ ಪಂದ್ಯ ಆಡುತ್ತಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು

IPL 2021: Royal challengers bangalore players are spotted playing a practice match

ಕೊರೊನಾ ವೈರಸ್ ಕಾರಣದಿಂದಾಗಿ ಅರ್ಧಕ್ಕೆ ಮೊಟಕುಗೊಂಡಿದ್ದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಮುಂದುವರಿಯಲಿದೆ. ಹೌದು, ಇದೇ ವರ್ಷದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕೊರೋನಾವೈರಸ್ ಕಾರಣದಿಂದ ಮಧ್ಯದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಹೌದು, 29 ಲೀಗ್ ಪಂದ್ಯಗಳು ಮುಗಿಯುವವರೆಗೂ ಯಾವುದೇ ಆತಂಕವಿಲ್ಲದೆ ನಡೆದ ಪ್ರಸ್ತುತ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಂತರದ ದಿನಗಳಲ್ಲಿ ವಿವಿಧ ತಂಡಗಳ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.

ಹೀಗೆ ಮಧ್ಯದಲ್ಲಿಯೇ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ತೀರ್ಮಾನಿಸಿದ್ದು ಇದೇ ಸೆಪ್ಟೆಂಬರ್ 19ರಿಂದ ಟೂರ್ನಿ ಆರಂಭಗೊಳ್ಳುತ್ತಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿದ್ದ ತಂಡಗಳಿಗೂ ದ್ವಿತೀಯಾರ್ಧದಲ್ಲಿ ಕಣಕ್ಕಿಳಿಯುತ್ತಿರುವ ತಂಡಗಳಿಗೂ ಸಾಕಷ್ಟು ವ್ಯತ್ಯಾಸಗಳಿದ್ದು ಆಟಗಾರರಲ್ಲಿ ಕೆಲವೊಂದಷ್ಟು ಬದಲಾವಣೆಗಳಾಗಿವೆ.

ಹೌದು, ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಭಾಗವಹಿಸಿದ್ದ ಕೆಲ ಆಟಗಾರರು ಇದೀಗ ಯುಎಇಯಲ್ಲಿ ನಡೆಯಲಿರುವ ಐಪಿಎಲ್ ದ್ವಿತೀಯಾರ್ಧಕ್ಕೆ ಅಲಭ್ಯರಾಗಿದ್ದು ಅವರ ಬದಲಾಗಿ ಹೊಸ ಆಟಗಾರರನ್ನು ತಂಡಗಳಿಗೆ ಸೇರಿಸಿಕೊಳ್ಳಲಾಗಿದೆ. ಹೀಗೆ ನೂತನವಾಗಿ ತಂಡಗಳನ್ನು ಸೇರಿಕೊಂಡಿರುವ ಆಟಗಾರರು ಯುಎಇ ತಲುಪಿದ್ದು ನೆಟ್ ಪ್ರ್ಯಾಕ್ಟಿಸ್‌ಗಳಲ್ಲಿ ತೊಡಗಿಕೊಂಡಿದ್ದಾರೆ.

ಇನ್ನು ಇತ್ತೀಚೆಗಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಲ್ಲಾ ಆಟಗಾರರು ಯುಎಇಯನ್ನು ತಲುಪಿದ್ದು ಇಂದು ( ಸೆಪ್ಟೆಂಬರ್ 13 ) ಅಭ್ಯಾಸ ಪಂದ್ಯವೊಂದನ್ನು ಆಡುತ್ತಿದ್ದಾರೆ. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಆಟಗಾರರನ್ನು 2 ತಂಡಗಳಾಗಿ ವಿಂಗಡನೆ ಮಾಡಿಕೊಂಡು ಮುಂಬರಲಿರುವ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಸಲುವಾಗಿ ಇಂದು ಅಭ್ಯಾಸ ಪಂದ್ಯವೊಂದರಲ್ಲಿ ಭಾಗವಹಿಸಿದೆ. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಅಭ್ಯಾಸ ಪಂದ್ಯವೊಂದರಲ್ಲಿ ತೊಡಗಿಕೊಂಡಿರುವ ಫೋಟೋವೊಂದು ಟ್ವಿಟ್ಟರ್‌ನಲ್ಲಿ ಹರಿದಾಡುತ್ತಿದೆ.

ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಯಶಸ್ವೀ ಪ್ರದರ್ಶನ ನೀಡಿದ ತಂಡಗಳ ಪೈಕಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಒಂದು. ಐಪಿಎಲ್ ಮೊದಲಾರ್ಧದಲ್ಲಿ 7 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ಪಂದ್ಯಗಳಲ್ಲಿ ಜಯ ಸಾಧಿಸಿ, 2 ಪಂದ್ಯಗಳಲ್ಲಿ ಸೋಲನ್ನನುಭವಿಸಿದ್ದು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೊದಲ ಪಂದ್ಯ ಯಾವಾಗ?

ಈ ಬಾರಿಯ ಐಪಿಎಲ್ ಟೂರ್ನಿ ಭಾರತದಲ್ಲಿ ಆರಂಭವಾದಾಗ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದ್ದವು. ಇದೀಗ ಯುಎಇಯಲ್ಲಿ ಸೆಪ್ಟೆಂಬರ್‌ 19 ರಿಂದ ಐಪಿಎಲ್ ಟೂರ್ನಿ ಮುಂದುವರಿಯಲಿದ್ದು ಸೆಪ್ಟೆಂಬರ್ 20ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ಮೊದಲನೇ ಪಂದ್ಯವನ್ನಾಡಲಿದೆ.

ನೆಟ್ ಪ್ರಾಕ್ಟೀಸ್‌ನಲ್ಲಿ ದೊಡ್ಡ ಹೊಡೆತಗಳನ್ನು ಬಾರಿಸಿದ ಎಬಿಡಿ

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧ ಆರಂಭವಾಗಲು ದಿನಗಣನೆ ಆರಂಭವಾಗಿದ್ದು ಇತ್ತೀಚೆಗಷ್ಟೇ ದುಬೈ ತಲುಪಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿರುವ ಸ್ಫೋಟಕ ಆಟಗಾರ ಎಬಿ ಡಿವಿಲಿಯರ್ಸ್ ಇಂದು ( ಸೆಪ್ಟೆಂಬರ್ 13 ) ನೆಟ್ ಪ್ರಾಕ್ಟೀಸ್ ಆರಂಭಿಸಿದ್ದಾರೆ. ಹೌದು, ಎಬಿ ಡಿವಿಲಿಯರ್ಸ್ ಮೈದಾನಕ್ಕಿಳಿದು ತಾಲೀಮು ನಡೆಸುತ್ತಿದ್ದು ಮುಂದುವರೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಬೆವರು ಹರಿಸಿ ಅಭ್ಯಾಸ ನಡೆಸುತ್ತಿದ್ದಾರೆ.

Story first published: Tuesday, September 14, 2021, 9:59 [IST]
Other articles published on Sep 14, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+