ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆರ್‌ಸಿಬಿಯ ಕನಸು ಕನಸಾಗಿಯೇ ಉಳಿಯಿತಲ್ಲ

IPL 2021 : Royal Challengers Bangalore teams dream did not come true

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಮೊದಲ ನಾಲ್ಕೂ ಪಂದ್ಯಗಳನ್ನು ಸತತವಾಗಿ ಗೆಲ್ಲುವುದರ ಮೂಲಕ ಈ ಹಿಂದಿನ ಆವೃತ್ತಿಗಳಲ್ಲಿ ಪಡೆದುಕೊಳ್ಳದಂತಹ ಉತ್ತಮ ಆರಂಭವನ್ನು ಪಡೆದುಕೊಂಡಿತ್ತು. ಹೀಗೆ ಉತ್ತಮ ಆರಂಭವನ್ನು ಪಡೆದುಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಲ್ಲಿ ಇದುವರೆಗೂ 7 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಜಯಗಳಿಸಿ 2 ಪಂದ್ಯಗಳಲ್ಲಿ ಸೋಲುಂಡು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ.

ಟೂರ್ನಿಯಲ್ಲಿ ಹೀಗೆ ಉತ್ತಮ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂದ್ಯವೊಂದರಲ್ಲಿ ನೀಲಿ ಜೆರ್ಸಿಯನ್ನು ಧರಿಸಿ ಕೊರೊನಾ ವಾರಿಯರ್ಸ್ ಶ್ರಮಕ್ಕೆ ಗೌರವವನ್ನು ಸಲ್ಲಿಸುವ ಯೋಜನೆಯನ್ನು ಹಾಕಿಕೊಂಡಿತ್ತು. ಹೌದು ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸಿ ಕೊರೊನಾ ವಾರಿಯರ್ಸ್ ಪಟ್ಟಿದ್ದ ಶ್ರಮಕ್ಕೆ ನೀಲಿ ಜೆರ್ಸಿ ಧರಿಸಿ ಪಂದ್ಯವನ್ನಾಡಿ ಗೌರವ ಸಲ್ಲಿಸಿ, ತದನಂತರ ಆ ಜೆರ್ಸಿಗಳ ಮೇಲೆ ಆಟಗಾರರ ಸಹಿಯನ್ನು ಹಾಕಿಸಿ ಅವುಗಳನ್ನು ಹರಾಜಿನಲ್ಲಿ ಮಾರಾಟ ಮಾಡಿ ಬಂದ ಹಣವನ್ನು ಕೊರೊನಾ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಬೇಕೆಂದು ಆರ್‌ಸಿಬಿ ಯೋಜನೆ ಹಾಕಿಕೊಂಡಿತ್ತು. ಆದರೆ ಸೋಮವಾರ ನಡೆಯಬೇಕಿದ್ದ ಬೆಂಗಳೂರು ಮತ್ತು ಕೊಲ್ಕತ್ತಾ ನಡುವಿನ ಪಂದ್ಯ ಕೊವಿಡ್ ಕಾರಣದಿಂದ ಮುಂದೂಡಲ್ಪಟ್ಟಿತು.

ಕೊಲ್ಕತ್ತಾ ವಿರುದ್ಧದ ಪಂದ್ಯ ಮುಂದೂಡಲ್ಪಟ್ಟ ಕಾರಣದಿಂದ ಮೇ ತಿಂಗಳಿನ ಯಾವುದಾದರೂ ಒಂದು ಪಂದ್ಯದಲ್ಲಿ ನೀಲಿ ಜೆರ್ಸಿ ತೊಟ್ಟು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ ಎಂದು ಆರ್‌ಸಿಬಿ ಹೇಳಿಕೊಂಡಿತ್ತು. ಆದರೆ ಇದೀಗ ಪ್ರಸ್ತುತ ಐಪಿಎಲ್ ಟೂರ್ನಿಯೇ ರದ್ದಾಗಿದ್ದು ನೀಲಿ ಜೆರ್ಸಿ ತೊಟ್ಟು ಪಂದ್ಯವನ್ನು ಆಡುವುದರ ಮೂಲಕ ಕೊರೊನಾ ವಾರಿಯರ್ಸ್ ಪಟ್ಟ ಶ್ರಮಕ್ಕೆ ಗೌರವ ಸಲ್ಲಿಸಬೇಕು ಎಂಬ ಆರ್‌ಸಿಬಿ ಕನಸು ಕನಸಾಗಿಯೇ ಉಳಿದಿದೆ.

Story first published: Tuesday, May 4, 2021, 16:32 [IST]
Other articles published on May 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X