ಐಪಿಎಲ್ 2021: ಬೆಂಗಳೂರು vs ಚೆನ್ನೈ, ಪ್ಲೇಯಿಂಗ್ XI, ಅಪ್‌ಡೇಟ್ಸ್

ಐಪಿಎಲ್ ಅಂಗಳದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಮಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ವಿರಾಟ್ ಕೊಹ್ಲಿ ನಾಯಕತ್ವದ ಬೆಂಗಳೂರು ಹಾಗೂ ಧೋನಿ ನೇತೃತ್ವದ ಚೆನ್ನೈ ತಂಡಗಳು ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದು ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನಗಳನ್ನು ಅಲಂಕರಿಸಿದೆ. ಹೀಗಾಗಿಈ ಕಾದಾಟ ಸಾಕಷ್ಟು ರೋಚಕತೆಯನ್ನು ಪಡೆದುಕೊಂಡಿದೆ.
ಆರ್‌ಸಿಬಿ ತಂಡದಲ್ಲಿ ಎರಡು ಬದಲಾವಣೆಯನ್ನು ಮಾಡಿಕೊಂಡಿದ್ದು ಡೇನಿಯಲ್ ಕ್ರಿಶ್ಚಿಯನ್ ಹಾಗೂ ನವದೀಪ್ ಸೈನಿ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರಿಗಾಗಿ ಕಳೆದ ಪಂದ್ಯದಲ್ಲಿ ಆಡಿದ್ದ ರಿಚರ್ಡ್ಸನ್ ಹಾಗೂ ಶಹ್ಬಾಜ್ ಹೊರಗುಳಿದಿದ್ದಾರೆ. ಚೆನ್ನೈ ತಂಡದಲ್ಲಿಯೂ ಎರಡು ಬದಲಾವಣೆಯಾಗಿದ್ದು ಬ್ರಾವೋ ಹಾಗೂ ತಾಹೀರ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಡೇನಿಯಲ್ ಕ್ರಿಶ್ಚಿಯನ್, ಕೈಲ್ ಜೇಮೀಸನ್, ಹರ್ಷಲ್ ಪಟೇಲ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಾಹಲ್
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ನಾಯಕ/ವಿಕೆಟ್ ಕೀಪರ್ ), ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್, ಡ್ವೇನ್ ಬ್ರಾವೋ, ಶಾರ್ದುಲ್ ಠಾಕೂರ್, ದೀಪಕ್ ಚಹರ್, ಇಮ್ರಾನ್ ತಾಹಿರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications