For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಎಬಿಡಿ ಅಬ್ಬರ, ಡೆಲ್ಲಿ ವಿರುದ್ಧ ಬೆಂಗಳೂರಿಗೆ ರೋಚಕ ಗೆಲುವು

IPL 2021: Royal Challengers Bangalore vs Delhi Capitals, 22nd Match, report

ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ (ಏಪ್ರಿಲ್ 27) ನಡೆದ ಐಪಿಎಲ್ 22ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 1 ರನ್ ರೋಚಕ ಜಯ ಗಳಿಸಿದೆ. ಎಬಿ ಡಿ ವಿಲಿಯರ್ಸ್ ಭರ್ಜರಿ ಬ್ಯಾಟಿಂಗ್‌, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ ಬೌಲಿಂಗ್ ನೆರವಿನಿಂದ ಆರ್‌ಸಿಬಿ 5ನೇ ಜಯ ದಾಖಲಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಾಯಕ ವಿರಾಟ್ ಕೊಹ್ಲಿ 12, ದೇವದತ್ ಪಡಿಕ್ಕಲ್ 17, ರಜತ್ ಪಟಿದಾರ್ 31, ಗ್ಲೆನ್ ಮ್ಯಾಕ್ಸ್‌ವೆಲ್ 25, ಎಬಿ ಡಿ ವಿಲಿಯರ್ಸ್ 75 (42 ಎಸೆತ), ವಾಷಿಂಗ್ಟನ್ ಸುಂದರ್ 6 ರನ್‌ನೊಂದಿಗೆ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದು 171 ರನ್ ಗಳಿಸಿತ್ತು.

1
50830

ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್, ಪೃಥ್ವಿ ಶಾ 21, ರಿಷಭ್ ಪಂತ್ 58, ಮಾರ್ಕಸ್ ಸ್ಟೋಯ್ನಿಸ್ 22, ಶಿಮ್ರನ್ ಹೆಟ್ಮೈಯರ್ 53 (25), ಶಿಖರ್ ಧವನ್ 6, ಸ್ಟೀವ್ ಸ್ಮಿತ್ 4 ರನ್‌ನೊಂದಿಗೆ 20 ಓವರ್‌ಗೆ 4 ವಿಕೆಟ್ ಕಳೆದು 170 ರನ್ ಗಳಿಸಿ ತಲೆ ಬಾಗಿತು.

ಆರ್‌ಸಿಬಿ ಇನ್ನಿಂಗ್ಸ್‌ನಲ್ಲಿ ಡೆಲ್ಲಿಯ ಇಶಾಂತ್ ಶರ್ಮಾ, ಕಾಗಿಸೊ ರಬಾಡ, ಆವೇಶ್ ಖಾನ್, ಅಮಿತ್ ಮಿಶ್ರಾ, ಅಕ್ಷರ್ ಪಟೇಲ್ ತಲಾ 1 ವಿಕೆಟ್ ಪಡೆದರೆ, ಡೆಲ್ಲಿ ಇನ್ನಿಂಗ್ಸ್‌ನಲ್ಲಿ ಹರ್ಷಲ್ ಪಟೇಲ್ 2, ಮೊಹಮ್ಮದ್ ಸಿರಾಜ್ ಮತ್ತು ಕೈಲ್ ಜೇಮಿಸನ್ ತಲಾ 1 ವಿಕೆಟ್‌ನಿಂದ ಗಮನ ಸೆಳೆದರು.

Story first published: Wednesday, April 28, 2021, 0:35 [IST]
Other articles published on Apr 28, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+