ಐಪಿಎಲ್ 2021: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ್ ರಾಯಲ್ಸ್, ಪ್ಲೇಯಿಂಗ್ XI, ಅಪ್‌ಡೇಟ್ಸ್

ಐಪಿಎಲ್ 14ನೇ ಆವೃತ್ತಿಯ 6ನೇ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಎದುರಾಳಿಯನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.
ಸತತ ಗೆಲುವಿನ ಉತ್ಸಾಹದಲ್ಲಿರುವ ವಿರಾಟ್ ಕೊಹ್ಲಿ ಬಳಗ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಬಾರಿಯ ಆವೃತ್ತಿಯ ಮೊದಲ ಪಂದ್ಯವನ್ನು ಆಡುತ್ತಿದೆ. ಚೆನ್ನೈನ ಬ್ಯಾಟಿಂಗ್‌ಗೆ ಕಠಿಣವಾಗಿರುವ ಪಿಚ್‌ನಲ್ಲಿ ಆರಂಭಿಕ ಮೂರು ಪಂದ್ಯಗಳನ್ನು ಆಡಿತ್ತು ಕೊಹ್ಲಿ ಪಡೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಂಡಿದ್ದು ಪಾಟೀದಾರ್ ಬದಲಿಗೆ ಕೈಲ್ ರಿಚರ್ಡ್ಸನ್ ಅವಕಾಶ ಪಡೆದಿದ್ದಾರೆ.
ಇನ್ನು ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಈ ಬಾರಿಯ ಆವೃತ್ತಿಯಲ್ಲಿಯೂ ಕಳಪೆ ಪ್ರದರ್ಶನ ನೀಡುತ್ತಿದೆ. ಸತತ ನೆರಡು ಸೋಲಿನ ನಂತರ ಗೆಲುವಿನ ಹಾದಿಗೆ ಮರಳುವ ಯತ್ಸದಲ್ಲಿದೆ. ಇಂದಿನ ಪಂದ್ಯದಲ್ಲಿ ಆರ್‌ಆರ್ ಕೂಡ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದ್ದು ಉನಾದ್ಕಟ್ ಸ್ಥಾನದಲ್ಲಿ ಶ್ರೇಯಸ್ ಗೋಪಾಲ್ ಆಡುವ ಅವಕಾಶ ಪಡೆದಿದ್ದಾರೆ.
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್, ಮನನ್ ವೊಹ್ರಾ, ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ಶಿವಮ್ ದುಬೆ, ಡೇವಿಡ್ ಮಿಲ್ಲರ್, ರಿಯಾನ್ ಪರಾಗ್, ರಾಹುಲ್ ತೇವಟಿಯಾ, ಕ್ರಿಸ್ ಮೋರಿಸ್, ಶ್ರೇಯಾಸ್ ಗೋಪಾಲ್, ಚೇತನ್ ಸಕರಿಯಾ, ಮುಸ್ತಾಫಿಜುರ್ ರಹಮಾನ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕೈಲ್ ಜಾಮಿಸನ್, ಕೇನ್ ರಿಚರ್ಡ್ಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications