ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಮ್ಯಾಕ್ಸ್‌ವೆಲ್ ಅಬ್ಬರ, ರಾಜಸ್ಥಾನ್ ರಾಯಲ್ಸ್ ಸದೆಬಡಿದ ಆರ್‌ಸಿಬಿ ಪ್ಲೇಆಫ್‌ಗೆ ಮತ್ತಷ್ಟು ಹತ್ತಿರ

IPL 2021: Royal challengers Bangalore won against Rajasthan Royals by 7 wickets

ಸದ್ಯ ಯುಎಇಯಲ್ಲಿ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಏಳನೇ ಗೆಲುವನ್ನು ಸಾಧಿಸಿದೆ. ಸೆಪ್ಟೆಂಬರ್ 29ರ ಬುಧವಾರದಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ವಿಕೆಟ್‍ಗಳ ಗೆಲುವನ್ನು ಸಾಧಿಸುವುದರ ಮೂಲಕ ಪ್ಲೇ ಆಫ್ ಸುತ್ತಿಗೆ ಮತ್ತಷ್ಟು ಸನಿಹವಾಗಿದೆ.

ಮುಂಬೈ ಇಂಡಿಯನ್ಸ್‌ನ ಈ ಆಟಗಾರರನ್ನು ಆಯ್ಕೆ ಮಾಡಿದ್ದು ಭಾರತಕ್ಕೆ ತಲೆನೋವಾಗಿದೆ ಎಂದ ಅಗರ್ಕರ್ಮುಂಬೈ ಇಂಡಿಯನ್ಸ್‌ನ ಈ ಆಟಗಾರರನ್ನು ಆಯ್ಕೆ ಮಾಡಿದ್ದು ಭಾರತಕ್ಕೆ ತಲೆನೋವಾಗಿದೆ ಎಂದ ಅಗರ್ಕರ್

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭದಲ್ಲಿ ಸತತವಾಗಿ 4 ಪಂದ್ಯಗಳನ್ನು ಗೆಲ್ಲುವುದರ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಧ್ಯದಲ್ಲಿ ಹ್ಯಾಟ್ರಿಕ್ ಸೋಲನ್ನು ಕಂಡು ಮಂಕಾಗಿತ್ತು. ಅದರಲ್ಲಿಯೂ ಟೂರ್ನಿ ಯುಎಇಗೆ ಸ್ಥಳಾಂತರಿಸಲ್ಪಟ್ಟ ನಂತರ ಸಾಲು ಸಾಲು ಪಂದ್ಯಗಳಲ್ಲಿ ಸೋತು ಕಳಪೆ ಪ್ರದರ್ಶನ ನೀಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಪ್ಟೆಂಬರ್ 26ರ ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವುದರ ಮೂಲಕ ಗೆಲುವಿನ ಹಾದಿಗೆ ಮರಳಿತ್ತು.

ಧೋನಿಯನ್ನು ಮೆಂಟರ್ ಆಗಿ ಆಯ್ಕೆ ಮಾಡಿದ್ದು ತಂಡದ ಇತರರನ್ನು ತುಳಿಯುವುದಕ್ಕಾ?; ಬಿಸಿಸಿಐ ಹೇಳಿದ್ದಿಷ್ಟುಧೋನಿಯನ್ನು ಮೆಂಟರ್ ಆಗಿ ಆಯ್ಕೆ ಮಾಡಿದ್ದು ತಂಡದ ಇತರರನ್ನು ತುಳಿಯುವುದಕ್ಕಾ?; ಬಿಸಿಸಿಐ ಹೇಳಿದ್ದಿಷ್ಟು

ಈ ಪಂದ್ಯದಲ್ಲಿ ಗೆಲುವನ್ನು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ತನ್ನ ಆರನೇ ಗೆಲುವನ್ನು ಪಡೆದುಕೊಂಡು ಪ್ಲೇ ಆಫ್ ಹಂತ ತಲುಪುವತ್ತ ಹೆಜ್ಜೆ ಇಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ( ಸೆಪ್ಟೆಂಬರ್ 29 ) ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವನ್ನು ಸಾಧಿಸಿ 14 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಪ್ಲೇ ಆಫ್ ಸುತ್ತು ಪ್ರವೇಶಿಸುವ ಸನಿಹಕ್ಕೆ ಬಂದು ನಿಂತಿದೆ.

149 ರನ್‌ ಗಳಿಸಿದ್ದ ರಾಜಸ್ಥಾನ್ ರಾಯಲ್ಸ್

149 ರನ್‌ ಗಳಿಸಿದ್ದ ರಾಜಸ್ಥಾನ್ ರಾಯಲ್ಸ್


ಸೆಪ್ಟೆಂಬರ್ 29ರ ಬುಧವಾರದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ರಾಜಸ್ಥಾನ್ ರಾಯಲ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಎವಿನ್ ಲೆವಿಸ್ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್‍ಗೆ 77 ರನ್‌ಗಳ ಜತೆಯಾಟವಾಡುವ ಮೂಲಕ ಉತ್ತಮ ಆರಂಭವನ್ನು ಕಟ್ಟಿಕೊಟ್ಟರು. ಎವಿನ್ ಲೆವಿಸ್ 37 ಎಸೆತಗಳಲ್ಲಿ 58 ರನ್ ಗಳಿಸಿದರೆ, ಯಶಸ್ವಿ ಜೈಸ್ವಾಲ್ 22 ಎಸೆತಗಳಲ್ಲಿ 31 ರನ್ ಕಲೆಹಾಕಿ ನಿರ್ಗಮಿಸಿದರು. ಆರಂಭಿಕ ಆಟಗಾರರ ವಿಕೆಟ್ ಪತನವಾದ ನಂತರ ಕಣಕ್ಕಿಳಿದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ 19, ಮಹಿಪಾಲ್ ಲೊಮ್ರಾರ್ 3, ಲಿಯಾಮ್ ಲಿವಿಂಗ್‌ಸ್ಟನ್ 6, ರಾಹುಲ್ ತೆವಾಟಿಯಾ 2, ರಿಯಾನ್ ಪರಾಗ್ 9, ಕ್ರಿಸ್ ಮೊರಿಸ್ 14, ಚೇತನ್ ಸಕಾರಿಯಾ 2 ಮತ್ತು ಕಾರ್ತಿಕ್ ತ್ಯಾಗಿ ಅಜೇಯ 1 ರನ್ ಗಳಿಸಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಹರ್ಷಲ್ ಪಟೇಲ್ 3, ಶಹಬಾಜ್ ಅಹ್ಮದ್ ಮತ್ತು ಯಜುವೇಂದ್ರ ಚಹಾಲ್ ತಲಾ 2 ವಿಕೆಟ್‍ಗಳನ್ನು ಪಡೆದರೆ, ಜಾರ್ಜ್ ಗಾರ್ಟನ್ ಮತ್ತು ಡೇನಿಯಲ್ ಕ್ರಿಸ್ಟಿಯನ್ ತಲಾ 1 ವಿಕೆಟ್ ಪಡೆದರು. ಹೀಗೆ ಆರಂಭದಲ್ಲಿ ಅಬ್ಬರಿಸಿ 180 ರನ್‌ಗಳ ಗಡಿ ದಾಟುವಂತಹ ಬ್ಯಾಟಿಂಗ್ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ ಅಂತಿಮವಾಗಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 150 ರನ್‌ಗಳ ಗುರಿಯನ್ನು ನೀಡಿತು.

ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಇನ್ನು ರಾಜಸ್ಥಾನ್ ರಾಯಲ್ಸ್ ತಂಡ ನೀಡಿದ 150 ರನ್‌ಗಳ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 25 ಮತ್ತು ದೇವದತ್ ಪಡಿಕ್ಕಲ್ 22 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಹೀಗೆ 6.5 ಓವರ್‌ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭಿಕ ಆಟಗಾರರ ವಿಕೆಟ್ ಕಳೆದುಕೊಂಡು 58 ರನ್ ಗಳಿಸಿತ್ತು. ನಂತರ ಮೂರನೇ ವಿಕೆಟ್‍ಗೆ ಜೊತೆಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಶ್ರೀಕರ್ ಭರತ್ 69 ರನ್‌ಗಳು ಜೊತೆಯಾಟ ಆಡುವುದರ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಗೆಲುವಿನತ್ತ ಎಳೆದೊಯ್ದರು. 16ನೇ ಓವರ್‌ನ ಅಂತಿಮ ಎಸೆತದಲ್ಲಿ ಮುಸ್ತಫಿಜರ್ ರಹಮಾನ್‌ಗೆ ಶ್ರೀಕರ್ ಭರತ್ 44 ರನ್ ಗಳಿಸಿದ್ದಾಗ ವಿಕೆಟ್ ಒಪ್ಪಿಸಿದರು. ಶ್ರೀಕರ್ ಭರತ್ ನಿರ್ಗಮಿಸುತ್ತಿದ್ದಂತೆಯೇ ಅಬ್ಬರಿಸಿದ ಗ್ಲೆನ್ ಮ್ಯಾಕ್ಸ್‌ವೆಲ್ 17ನೇ ಓವರ್‌ನಲ್ಲಿ ಕ್ರಿಸ್ ಮೊರಿಸ್‌ಗೆ 22 ರನ್ ಚಚ್ಚಿದರು. ನಂತರ 17ನೇ ಓವರ್‌ನ ಮೊದಲ ಎಸೆತವನ್ನು ಎಬಿ ಡಿವಿಲಿಯರ್ಸ್ ಬೌಂಡರಿಗೆ ಅಟ್ಟುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 17 ಎಸೆತಗಳು ಬಾಕಿ ಇರುವಾಗಲೇ 7 ವಿಕೆಟ್‍ಗಳ ಭರ್ಜರಿ ಜಯವನ್ನು ದಾಖಲಿಸಿತು. ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಗ್ಲೆನ್ ಮ್ಯಾಕ್ಸ್‌ವೆಲ್ 30 ಎಸೆತಗಳಲ್ಲಿ ಅಜೇಯ 50 ಮತ್ತು ಎಬಿಡಿವಿಲಿಯರ್ಸ್ ಅಜೇಯ 4 ರನ್ ಗಳಿಸಿದರು.

ಪ್ಲೇ ಆಫ್ ಪ್ರವೇಶಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನಷ್ಟು ಪಂದ್ಯ ಗೆಲ್ಲಬೇಕು?

ಪ್ಲೇ ಆಫ್ ಪ್ರವೇಶಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನಷ್ಟು ಪಂದ್ಯ ಗೆಲ್ಲಬೇಕು?

ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ತನ್ನ ಏಳನೇ ಜಯವನ್ನು ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನೂ 3 ಪಂದ್ಯಗಳನ್ನಾಡಲಿದ್ದು ಒಂದು ಪಂದ್ಯದಲ್ಲಿ ಗೆದ್ದರೂ ಪ್ಲೇ ಆಫ್ ಹಂತವನ್ನು ಯಶಸ್ವಿಯಾಗಿ ಪ್ರವೇಶಿಸಲಿದೆ.

Story first published: Thursday, September 30, 2021, 10:02 [IST]
Other articles published on Sep 30, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X