ಐಪಿಎಲ್ 2021: ರಾಜಸ್ಥಾನ್ ವಿರುದ್ಧ ಗೆಲುವಿನ ನಗೆ ಬೀರಿದ ಹೈದರಾಬಾದ್

ಸೋಲಿನ ಮೇಲೆ ಸೋಲು ಕಂಡು ಪ್ಲೇಆಫ್ ಸ್ಪರ್ಧೆಯಿಂದ ಈಗಾಗಲೇ ಹೊರಬಿದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಕಡೆಗೂ ಸೋಲಿನ ಸರಪಳಿಯನ್ನು ತುಂಡರಿಸಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್‌ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಈ ಬಾರಿಯ ಟೂರ್ನಿಯಲ್ಲಿ ಎರಡನೇ ಗೆಲುವಿನ ರುಚಿಕಂಡಿದೆ ಸನ್‌ರೈಸರ್ಸ್ ಹೈದರಾಬಾದ್ ತಂಡ.

ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ ಮೊದಲಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ನಾಯಕ ಸಂಜು ಸ್ಯಾಮ್ಸನ್ ಅದ್ಭುತ ಪ್ರದರ್ಶನದ ನೆರವಿನಿಂದ ಆರ್‌ಆರ್ 164 ರನ್‌ಗಳನ್ನು ಗಳಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಜೇಸನ್ ರಾಯ್ ಹಾಗೂ ನಾಯಕ ಕೇನ್ ವಿಲಿಯಮ್ಸನ್ ಅದ್ಭುತ ಆಟದ ನೆರವಿನಿಂದ ಇನ್ನೂ 9 ಎಸೆತಗಳು ಬಾಕಿಯಿರುವಂತೆ ಗೆಲುವು ಸಾಧಿಸಿದೆ.

ರೈನಾ ಹೊರಗಿಟ್ಟು ಈತನನ್ನೇ ಪ್ರಮುಖ ಬ್ಯಾಟರ್ ಆಗಿ ಕಣಕ್ಕಿಳಿಸಿ: ಮಂಜ್ರೇಕರ್ ಹೇಳಿದ ಅಚ್ಚರಿಯ ಹೆಸರು!ರೈನಾ ಹೊರಗಿಟ್ಟು ಈತನನ್ನೇ ಪ್ರಮುಖ ಬ್ಯಾಟರ್ ಆಗಿ ಕಣಕ್ಕಿಳಿಸಿ: ಮಂಜ್ರೇಕರ್ ಹೇಳಿದ ಅಚ್ಚರಿಯ ಹೆಸರು!

ಸನ್‌ರೈಸರ್ಸ್ ಹಯದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಅನುಭವಿಸಿದ ಸೋಲು ಸಂಜು ಸ್ಯಾಮ್ಸನ್ ಬಳಗಕ್ಕೆ ಮತ್ತೊಂದು ಹಿನ್ನಡೆಯುಂಟು ಮಾಡಿದೆ. ಪ್ಲೇಆಫ್‌ಗೆ ಏರುವ ಅವಕಾಶವನ್ನು ರಾಜಸ್ಥಾನ್ ರಾಯಲ್ಸ್ ಮತ್ತಷ್ಟು ಕಠಿಣಗೊಳಿಸಿದೆ. ಸದ್ಯ ಅಂಕಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 6ನೇ ಸ್ಥಾನದಲ್ಲಿದೆ.

ಮೊದಲು ಬ್ಯಾಟಿಂಗ್ ನಡೆಸಿದ ರಾಜಸ್ಥಾನ್ ತಾಯಲ್ಸ್ ತಂಡದ ಪರವಾಗಿ ನಾಯಕ ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ 82 ರನ್‌ಗಳ ಕೊಡುಗೆಯನ್ನು ನೀಡಿದರು. ಆರಂಭದಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ನಡೆಸಿದ ಸಂಜು ಬಳಿಕ ತಮ್ಮ ರನ್ ವೇಗವನ್ನು ಹೆಚ್ಚಿಸಿದರು. ಒಟ್ಟು 57 ಎಸೆತಗಳನ್ನು ಎದುರಿಸಿದ ಸಂಜು ಭರ್ಜರಿ 82 ರನ್ ಸಿಡಿಸಿದ್ದಾರೆ. ಇದರಲ್ಲಿ ಏಳು ಬೌಂಡರಿ ಹಾಗೂ 3 ಸಿಕ್ಸರ್ ಸೇರಿತ್ತು. 143.86ರ ಸ್ಟ್ರೈಕ್‌ರೇಟ್‌ನಲ್ಲಿ ಸಂಜು ಬ್ಯಾಟ್ ಬೀಸಿದ್ದಾರೆ.

ಉಳಿದಂತೆ 36 ರನ್‌ಗಳನ್ನು ಗಳಿದರೆ ಲಾಮ್ರರ್ 29 ರನ್ ಗಳಿಸಿದರು. ಉಳಿದ ಯಾವ ಬ್ಯಾಟ್ಸ್‌ಮನ್ ಕೀಡ ಮಿಂಚುವಲ್ಲಿ ವಿಫಲವಾಗಿದ್ದಾರೆ. ಅಂತಿಮವಾಗಿ ಐದು ವಿಕೆಟ್ ಕಳೆದುಕೊಂಡು ಸಂಜು ಸ್ಯಾಮ್ಸನ್ ಪಡೆ 164 ರನ್‌ಗಳಿಸಿದೆ. ಇನ್ನು ಹೈದರಾಬಾದ್ ಪರವಾಗಿ ಸಿದ್ಧಾರ್ಥ್ ಕೌಲ್ 2 ವಿಕೆಟ್ ಕಬಳಿಸಿದರೆ ಸಂದೀಪ್ ಶರ್ಮಾ, ಭುವನೇಶ್ವರ್ ಕುಮಾರ್ ಹಾಗೂ ರಶೀದ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡಿದ್ದಾರೆ.

ಇನ್ನು ಈ ಗುರಿಯನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಐಪಿಎಲ್‌ನಲ್ಲಿ ಚೊಚ್ಚಲ ಪಂದ್ಯವನ್ನಾಡಿದ ಜೇಸನ್ ರಾಯ್ ಅವರಿಂದ ಅದ್ಭುತ ಪ್ರದರ್ಶನ ಬಂದಿತ್ತು. ಜೇಸನ್ ರಾಯ್ ಈ ಪಂದ್ಯದಲ್ಲಿ 42 ಎಸೆತಗಳನ್ನು ಎದುರಿಸಿ 60 ರನ್ ಬಾರಿಸಿದ್ದಾರೆ. ನಂತರ ನಾಯಕ ಕೇನ್ ವಿಲಿಯಮ್ಸನ್ ಕೂಡ ಅರ್ಧ ಶತಕವನ್ನು ದಾಖಲಿಸಿ ತಂಡಕ್ಕೆ ಜಯವನ್ನು ತಂದಿತ್ತರು.

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ:

ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮಹಿಪಾಲ್ ಲೊಮರ್, ರಾಹುಲ್ ತೆವಾಟಿಯಾ, ರಿಯಾನ್ ಪರಾಗ್, ಕ್ರಿಸ್ ಮೋರಿಸ್, ಚೇತನ್ ಸಕಾರಿಯಾ, ಜಯದೇವ್ ಉನಾದ್ಕಟ್, ಮುಸ್ತಫಿಜುರ್ ರೆಹಮಾನ್
ಬೆಂಚ್: ಕಾರ್ತಿಕ್ ತ್ಯಾಗಿ, ಮನನ್ ವೊಹ್ರಾ, ಶ್ರೇಯಸ್ ಗೋಪಾಲ್, ಗ್ಲೆನ್ ಫಿಲಿಪ್ಸ್, ಕೆಸಿ ಕರಿಯಪ್ಪ, ಶಿವಂ ದುಬೆ, ಓಶಾನೆ ಥಾಮಸ್, ಮಯಾಂಕ್ ಮಾರ್ಕಂಡೆ, ಅನುಜ್ ರಾವತ್, ಜೆರಾಲ್ಡ್ ಕೋಟ್ಜಿ, ಕುಲ್ದಿಪ್ ಯಾದವ್, ಆಕಾಶ್ ಸಿಂಗ್, ತಬ್ರೇಜ್ ಶಮ್ಸಿ, ಡೇವಿಡ್ ಮಿಲ್ಲರ್

ಈ ಕೆಲಸ ಮಾಡಿದ್ರೆ ಧೋನಿ ಕಳಪೆ ಫಾರ್ಮ್‌ನಿಂದ ಹೊರಬಂದು ಹೆಚ್ಚು ರನ್ ಗಳಿಸಬಹುದು: ಗಂಭೀರ್ಈ ಕೆಲಸ ಮಾಡಿದ್ರೆ ಧೋನಿ ಕಳಪೆ ಫಾರ್ಮ್‌ನಿಂದ ಹೊರಬಂದು ಹೆಚ್ಚು ರನ್ ಗಳಿಸಬಹುದು: ಗಂಭೀರ್

David Warner ಪರಿಸ್ಥಿತಿ ನೋಡಿ ನೊಂದ ಅಭಿಮಾನಿಗಳು | Oneindia Kannada

ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ:
ಜೇಸನ್ ರಾಯ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ, ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ದಾರ್ಥ್ ಕೌಲ್, ಸಂದೀಪ್ ಶರ್ಮಾ
ಬೆಂಚ್: ಡೇವಿಡ್ ವಾರ್ನರ್, ಕೇದಾರ್ ಜಾಧವ್, ಖಲೀಲ್ ಅಹ್ಮದ್, ಶಹಬಾಜ್ ನದೀಮ್, ಶ್ರೀವಾತ್ ಗೋಸ್ವಾಮಿ, ಮುಜೀಬ್ ಉರ್ ರಹಮಾನ್, ಮೊಹಮ್ಮದ್ ನಬಿ, ವಿರಾಟ್ ಸಿಂಗ್, ತುಳಸಿ ತಂಪಿ, ಜಗದೀಶ ಸುಚಿತ್, ಉಮ್ರಾನ್ ಮಲಿಕ್, ಮನೀಶ್ ಪಾಂಡೆ

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 22 - October 28 2021, 07:30 PM
ಆಸ್ಟ್ರೇಲಿಯಾ
ಶ್ರೀಲಂಕಾ
Predict Now

For Quick Alerts
ALLOW NOTIFICATIONS
For Daily Alerts
Story first published: Monday, September 27, 2021, 23:27 [IST]
Other articles published on Sep 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X