ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಯುಎಇನಲ್ಲಿ ಸತತ 4ನೇ ಐಪಿಎಲ್ ಅರ್ಧ ಶತಕ ದಾಖಲಿಸಿದ ಋತುರಾಜ್

IPL 2021: Ruturaj Gaikwad is the 1st player hit 50s in 4 consecutive innings on UAE

ಚೆನ್ನೈ ಸೂಪರ್ ಕಿಂಗ್ಸ್ ಯುವ ಆರಂಭಿಕ ಆಟಗಾರ ಮುಂಬೈ ಇಂಡಿಯನ್ಸ್ ವಿರುದ್ಧಧ ಪಂದ್ಯದಲ್ಲಿ ಅಮೋಘ ಆಟವನ್ನು ಪ್ರದರ್ಶಿಸಿದ್ದಾರೆ. ನಿರ್ಣಾಯಕ ಸಮಯದಲ್ಲಿ ಅಮೋಘ ಪ್ರದರ್ಶನ ನೀಡಿದ ಋತುರಾಜ್ ಗಾಯಕ್ವಾಡ್ ತಂಡ ಸವಾಲಿನ ಮೊತ್ತ ಪೇರಿಸುವಲ್ಲಿ ನಿರ್ಣಾಯಕ ಪಾತ್ರವಹಿಸಿದರು. ಈ ಮೂಲಕ ಯುಎಇನಲ್ಲಿ ನಡೆದ ಐಪಿಎಲ್‌ನಲ್ಲಿ ಸತತ ನಾಲ್ಕನೇ ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಒಂದೆಡೆ ಆರಂಭದಿಂದಲೇ ಸತತವಾಗಿ ವಿಕೆಟ್ ಕಳೆದುಕೊಳ್ಳಲು ಆರಂಭಿಸಿತ್ತು. 24 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಕನಿಷ್ಠ ಮೊತ್ತಕ್ಕೆ ಕುಸಿಯುವ ಭೀತಿಯನ್ನು ಎದುರಿಸಿತ್ತು. ಆದರೆ ಮತ್ತೊಂದು ತುದಿಯಲ್ಲಿ ನಿಂದ ಋತುರಾಜ್ ಗಾಯಕ್ವಾಡ್ ತಮ್ಮ ಅದ್ಭುತ ಆಟವನ್ನು ಮುಂದುವರಿಸಿದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಸವಾಲಿನ ಮೊತ್ತವನ್ನು ದಾಖಲಿಸಲು ಕಾರಣರಾದರು.

ಐಪಿಎಲ್ ದ್ವಿತೀಯ ಹಂತ ಎಸ್‌ಆರ್‌ಎಚ್‌ಗೆ ನಿರ್ಣಾಯಕವಾಗಲಿದೆ: ಲಕ್ಷ್ಮಣ್ಐಪಿಎಲ್ ದ್ವಿತೀಯ ಹಂತ ಎಸ್‌ಆರ್‌ಎಚ್‌ಗೆ ನಿರ್ಣಾಯಕವಾಗಲಿದೆ: ಲಕ್ಷ್ಮಣ್

ವಿಕೆಟ್ ಕಳೆದುಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಆರಂಭದಿಂದ ಎಚ್ಚರಿಕೆಯ ಆಟವನ್ನು ಆಡುತ್ತಾ ಸಾಗಿದ ಋತಿರಾಜ್ ಬಳಿಕ ರನ್‌ವೇಗವನ್ನು ಹೆಚ್ಚಿಸಿದರು. ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಹಾಗೂ ಡ್ವೇಯ್ನ್ ಬ್ರಾವೋ ಕೂಡ ಬ್ಯಾಟಿಂಗ್‌ನಲ್ಲಿ ಉತ್ತಮ ಕೊಡುಗೆ ನೀಡಿದರು. ಹೀಗಾಗಿ ಸಣ್ಣ ಮೊತ್ತಕ್ಕೆ ಕುಸಿಯುವ ಭೀತಿಯಿಂದ ಚೆನ್ನೈ ಪಾರಾಯಿತು.

ನನ್ನ ಬೌಲಿಂಗ್ ತಂತ್ರಗಾರಿಯಲ್ಲಿ ಬದಲಾವಣೆ ಮಾಡಿಕೊಂಡಿದ್ದೇನೆ: ಉನಾದ್ಕತ್ನನ್ನ ಬೌಲಿಂಗ್ ತಂತ್ರಗಾರಿಯಲ್ಲಿ ಬದಲಾವಣೆ ಮಾಡಿಕೊಂಡಿದ್ದೇನೆ: ಉನಾದ್ಕತ್

ಐದನೇ ವಿಕೆಟ್‌ಗೆ ರವೀಂದ್ರ ಜಜೇಜಾ ಹಾಗೂ ಋತುರಾಜ್ ಗಾಯಕ್ವಾಡ್ ಮಹತ್ವದ ಜೊತೆಯಾಟವನ್ನು ನೀಡಿದರು. ಎಚ್ಚರಿಕೆಯ ಹಾಗೂ ಸಮಯೋಚಿತ ಆಟ ಪ್ರದರ್ಶಿಸಿದರ ಈ ಜೋಡಿ 81 ರನ್‌ಗಳ ಭರ್ಜರಿ ಜೊತೆಯಾಟವನ್ನು ನೀಡಿತ್ತು. ಇದು ಚೆನ್ನೈ ಪಾಲಿಗೆ ಮಹತ್ವದ್ದಾಗಿತ್ತು. ಈ ಸಂದರ್ಭದಲ್ಲಿ 33 ಎಸೆತಗಳನ್ನು ಎದುರಿಸಿದ ರವೀಂದ್ರ ಜಡೇಜಾ 26 ರನ್‌ಗಳ ಅಮೂಲ್ಯ ಕೊಡುಗೆ ನೀಡಿದರು. ಬಳಿಕ ಬಂದ ಡ್ವೇಯ್ನ್ ಬ್ರಾವೋ ಕೇವಲ 8 ಎಸೆತಗಳನ್ನು ಎದುರಿಸಿ 23 ರನ್‌ಗಳನ್ನು ಬಾರಿಸುವ ಮೂಲಕ ಅಂತಿಮ ಘಟ್ಟದಲ್ಲಿ ರನ್‌ ವೇಗವನ್ನು ಹೆಚ್ಚಿಸಿದರು.

ಭರ್ಜರಿ ಸಿಕ್ಸರ್‌ಗಳ ಮೂಲಕ ಎಚ್ಚರಿಕೆ ಕೊಟ್ಟ ಎಂಎಸ್ ಧೋನಿ: ವಿಡಿಯೋಭರ್ಜರಿ ಸಿಕ್ಸರ್‌ಗಳ ಮೂಲಕ ಎಚ್ಚರಿಕೆ ಕೊಟ್ಟ ಎಂಎಸ್ ಧೋನಿ: ವಿಡಿಯೋ

ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 6 ನವಿಕೆಟ್ ಕಳೆದುಕೊಂಡು 156 ರನ್‌ಗಳಿಸಿದರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಬೋಲ್ಟ್, ಮಿಲ್ನೆ ಹಾಗೂ ಬೂಮ್ರಾ ತಲಾ 2 ವಿಕೆಟ್ ಕಿತ್ತಿದ್ದಾರೆ.

ಪ್ರಧಾನಿ ಮಾತಿಗೂ ಬೆಲೆ ಕೊಡದ ನ್ಯೂಜಿಲೆಂಡ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಇನ್ಜಮಾಮ್ ಆಗ್ರಹಪ್ರಧಾನಿ ಮಾತಿಗೂ ಬೆಲೆ ಕೊಡದ ನ್ಯೂಜಿಲೆಂಡ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಇನ್ಜಮಾಮ್ ಆಗ್ರಹ

ಮುಂಬೈ ಇಂಡಿಯನ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಅನ್ಮೋಲ್ಪ್ರೀತ್ ಸಿಂಗ್, ಕೀರನ್ ಪೊಲಾರ್ಡ್ (ನಾಯಕ), ಸೌರಭ್ ತಿವಾರಿ, ಕೃನಾಲ್ ಪಾಂಡ್ಯ, ಆಡಮ್ ಮಿಲ್ನೆ, ರಾಹುಲ್ ಚಹರ್, ಜಸ್ಪ್ರೀತ್ ಬೂಮ್ರಾ, ಟ್ರೆಂಟ್ ಬೋಲ್ಟ್

ವಿರಾಟ್ ನಂತರ ಈ ಮೂವರಲ್ಲಿ ಯಾರಾಗ್ತಾರೆ RCB ನಾಯಕ? | Oneindia kannada

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಫಾಫ್ ಡು ಪ್ಲೆಸಿಸ್, ಋತುರಾಜ್ ಗಾಯಕ್ವಾಡ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಟಿ ರಾಯುಡು, ಎಂಎಸ್ ಧೋನಿ (ವಿಕೆಟ್ ಕೀಪರ್ ಮತ್ತು ನಾಯಕ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹೇಜಲ್‌ವುಡ್

Story first published: Sunday, September 19, 2021, 22:29 [IST]
Other articles published on Sep 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X