ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ದುಬೈ ತಲುಪಿದ ಚೆನ್ನೈ ಸೂಪರ್ ಕಿಂಗ್ಸ್‌ನ ಸ್ಯಾಮ್ ಕರನ್

IPL 2021: Sam Curran has reached UAE and joined CSK

ಕೊರೊನಾ ವೈರಸ್ ಕಾರಣದಿಂದಾಗಿ ಅರ್ಧಕ್ಕೆ ಮೊಟಕುಗೊಂಡಿದ್ದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಮುಂದುವರಿಯಲಿದೆ. ಹೌದು, ಇದೇ ವರ್ಷದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕೊರೋನಾವೈರಸ್ ಕಾರಣದಿಂದ ಮಧ್ಯದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಹೌದು, 29 ಲೀಗ್ ಪಂದ್ಯಗಳು ಮುಗಿಯುವವರೆಗೂ ಯಾವುದೇ ಆತಂಕವಿಲ್ಲದೆ ನಡೆದ ಪ್ರಸ್ತುತ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಂತರದ ದಿನಗಳಲ್ಲಿ ವಿವಿಧ ತಂಡಗಳ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.

ಹೀಗೆ ಮಧ್ಯಂತರದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಯುಎಇಯಲ್ಲಿ ನಡೆಸಲು ಬಿಸಿಸಿಐ ನಿರ್ಧಾರವನ್ನು ಮಾಡಿತ್ತು. ಬಿಸಿಸಿಐ ನಿರ್ಧರಿಸಿದಂತೆಯೇ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಬಾಕಿ ಉಳಿದಿರುವ 31 ಪಂದ್ಯಗಳು ಇದೇ ಸೆಪ್ಟೆಂಬರ್ 19ರಿಂದ ಮುಂದುವರೆಯಲಿವೆ. ಹೀಗೆ ಯುಎಇಯಲ್ಲಿ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಲು ವಿವಿಧ ತಂಡಗಳ ಬಹುತೇಕ ಎಲ್ಲಾ ಆಟಗಾರರು ಯುಎಇ ತಲುಪಿದ್ದು ಕಠಿಣ ಅಭ್ಯಾಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಈ ಬಾರಿ ಎಲ್ಲಾ ತಂಡಗಳಿಗಿಂತ ಮೊದಲು ಯುಎಇ ಪ್ರಯಾಣವನ್ನು ಕೈಗೊಂಡು ಅಭ್ಯಾಸವನ್ನು ಆರಂಭಿಸಿದ ತಂಡ ಎಂದರೆ ಅದು ಚೆನ್ನೈ ಸೂಪರ್ ಕಿಂಗ್ಸ್. ಹೌದು ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು ಎಲ್ಲಾ ತಂಡಗಳ ಆಟಗಾರರಿಗಿಂತ ಮೊದಲು ಯುಎಇ ತಲುಪಿ ಅಭ್ಯಾಸಗಳನ್ನು ಆರಂಭಿಸಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ಕೆಲ ಅಭ್ಯಾಸ ಪಂದ್ಯಗಳಲ್ಲಿಯೂ ಸಹ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು ತಮ್ಮನ್ನು ತಾವು ತೊಡಗಿಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಇನ್ನು ಇಂಗ್ಲೆಂಡ್ ತಂಡದ ಪರ ಕ್ರಿಕೆಟ್ ಆಡುವಲ್ಲಿ ನಿರತರಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಆಟಗಾರ ಸ್ಯಾಮ್ ಕರನ್ ಇಂದು ( ಸೆಪ್ಟೆಂಬರ್ 15 ) ಯುಎಇ ತಲುಪಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಸ್ಯಾಮ್ ಕರನ್ ಯುಎಇ ತಲುಪಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೇರಿಕೊಂಡಿರುವ ವಿಷಯವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಫೋಟೋವನ್ನು ಅಪ್ಲೋಡ್ ಮಾಡುವ ಮೂಲಕ ತಿಳಿಸಿದೆ.

ಅಂಕಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಥಾನ

ಕಳೆದ ಆವೃತ್ತಿಯಲ್ಲಿ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಒಳ್ಳೆಯ ಆರಂಭವನ್ನು ಪಡೆದುಕೊಂಡಿದೆ. ಈ ಬಾರಿಯ ಐಪಿಎಲ್ ಟೂರ್ನಿಯ ಪ್ರಥಮಾರ್ಧದಲ್ಲಿ 7 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ಪಂದ್ಯಗಳಲ್ಲಿ ಜಯಗಳಿಸಿ 2 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಉತ್ತಮ ಸ್ಥಾನದಲ್ಲಿದೆ.

ಚೆನ್ನೈ ತಂಡದ ಮೊದಲ ಪಂದ್ಯ ಯಾವಾಗ?

ಮರಳಿ ಫಾರ್ಮ್ ಗೆ ಬಂದ ಕ್ಯಾಪ್ಟನ್ | Oneindia Kannada

ಭಾರತದಲ್ಲಿ ಆರಂಭವಾಗಿ ಅರ್ಧದಲ್ಲಿಯೇ ಸ್ಥಗಿತಗೊಂಡಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇದೇ ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಆರಂಭವಾಗುತ್ತಿದ್ದು ಮೊದಲನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ. ಹೌದು, ಸೆಪ್ಟೆಂಬರ್ 19ರ ಭಾನುವಾರದಂದು ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡದ ಜೊತೆ ಸೆಣಸಾಟವನ್ನು ನಡೆಸಲಿದೆ.

Story first published: Wednesday, September 15, 2021, 15:56 [IST]
Other articles published on Sep 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X