Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಸಂಗಕ್ಕರ ಮಾರ್ಗದರ್ಶನದಲ್ಲಿ ರಾಜಸ್ಥಾನ ಮುನ್ನಡೆಸಲು ಉತ್ಸುಕನಾಗಿದ್ದೇನೆ: ಸಂಜು ಸ್ಯಾಮ್ಸನ್

IPL 2021: Sanju Samson excited to have Kumar Sangakkara as Director of cricket

ರಾಜಸ್ಥಾನ್ ರಾಯಲ್ಸ್ ಈ ಬಾರಿ ಸಂಜು ಸ್ಯಾಮ್ಸನ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ. ಹೀಗಾಗಿ ತಂಡವನ್ನು ಮುನ್ನಡೆಸಲು ಸಂಜು ಸ್ಯಾಮ್ಸನ್ ಕಾತುರರಾಗಿದ್ದಾರೆ. ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಸಂಜು ಸ್ಯಾಮ್ಸನ್ ನಾಯಕತ್ವದ ಜವಾಬ್ಧಾರಿಯನ್ನು ಹೊತ್ತಿದ್ದು ಈ ಸಂದರ್ಭದಲ್ಲಿ ದಿಗ್ಗಜ ಕ್ರಿಕೆಟಿಗ ಮಾಜಿ ಶ್ರೀಲಂಕಾದ ಆಟಗಾರ ಕುಮಾರ್ ಸಂಗಕ್ಕರ ಅವರೊಂದಿಗೆ ಕರ್ತವ್ಯ ನಿರ್ವಹಿಸುವ ಅವಕಾಶ ಪಡೆದುಕೊಂಡಿದ್ದಾರೆ.

ಈ ಬಾರಿಯ ಐಪಿಎಲ್‌ನಲ್ಲಿ ಶ್ರೀಲಂಕಾ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕರ ರಾಜಸ್ಥಾನ್ ರಾಯಲ್ಸ್ ತಂಡದ ಕ್ರಿಕೆಟ್‌ನ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡದ ಪ್ರತಿಯೊಂದು ವಿಭಾಗದ ಮೇಲ್ವಿಚಾರಣೆಯನ್ನು ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಜು ಸ್ಯಾಮ್ಸನ್ ಪ್ರತಿಕ್ರಿಯೆ ನೀಡಿದ್ದಾರೆ.

"ಸಂಗಕ್ಕರ ಅವರು ನಮ್ಮೊಂದಿಗೆ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ತಿಳಿದ ತಕ್ಷಣವೇ ನಾನು ಉತ್ಸುಕಬಾಗಿದ್ದೇನೆ. ನಾವು ಮುಂದಿನ ಆವೃತ್ತಿಗೆ ಹಾಗೂ ಮುಂದಿನ ಕೆಲ ವರ್ಷಗಳ ಕಾಲ ಸಂಗಕ್ಕರ ಅವರೊಂದಿಗೆ ಸಾಗಲಿದ್ದೇವೆ ಎಂಬುದಕ್ಕೆ ನಾನು ಸಾಕಷ್ಟು ಸಂತಸಗೊಂಡಿದ್ದೇನೆ" ಎಂದು ಸಂಜು ಸ್ಯಾಮ್ಸನ್ ಹೇಳಿಕೆ ನೀಡಿದ್ದಾರೆ.

"ಅವರನ್ನು ನಾವು ತಂಡದಲ್ಲಿ ಹೊಂದಲು ಗೌರವವಾಗುತ್ತದೆ. ಅದರಲ್ಲೂ ನಾನು ನಾಯಕನಾಗಿ ಅವರು ಮಾರ್ಗದರ್ಶಕರಾಗಿರಿಲಿದ್ದಾರೆ. ಈ ಸಂಬಂಧ ವಿಶೇಷವಾಗಿ ಇರಲಿದೆ. ಅವರನ್ನು ಭೆಟಿಯಾಗಲು ಹಾಗೂ ಅವರಿಂದ ಸಾಕಷ್ಟು ವಿಚಾರಗಳನ್ನು ಕಲಿಯಲು ನಾನು ಎದುರು ನೋಡುತ್ತಿದ್ದೇನೆ" ಎಂದಿದ್ದಾರೆ ರಾಜಸ್ಥಾನ್ ರಾಯಲ್ಸ್ ತಂಡದ ನೂತನ ನಾಯಕ.

ಐಪಿಎಲ್ 14ನೇ ಆವೃತ್ತಿಗೆ ಮುನ್ನ ನಡೆದ ಹರಾಜು ಪ್ರಕ್ರಿಯೆಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಕಳೆದ ಆವೃತ್ತಿಯ ನಾಯಕ ಸ್ಟೀವ್ ಸ್ಮಿತ್ ಅವರನ್ನು ಹರಾಜುಗೆ ಬಿಡುಗಡೆಗೊಳುಸಿತ್ತು. ಹೀಗಾಗಿ ಸ್ಮಿತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ. ಈ ಆವೃತ್ತಿಗೆ ಸಂಜು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

Story first published: Tuesday, March 30, 2021, 11:57 [IST]
Other articles published on Mar 30, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+