ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಪಂಜಾಬ್ vs ರಾಜಸ್ಥಾನ್: ಪಂದ್ಯ ಗೆದ್ದರೂ 12 ಲಕ್ಷ ದಂಡ ತೆತ್ತ ಸಂಜು ಸ್ಯಾಮ್ಸನ್

IPL 2021: Sanju Samson fined Rs 12 lakh for slow bowling rate against Punjab Kings

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 32ನೇ ಪಂದ್ಯ ಸೆಪ್ಟೆಂಬರ್ 21ರ ಮಂಗಳವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ರೋಚಕ ಅಂತ್ಯವನ್ನು ಕಂಡಿತು.

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮೊದಲು ಬೌಲಿಂಗ್ ಮಾಡುವ ಆಯ್ಕೆಯನ್ನು ಮಾಡಿಕೊಂಡರು. ಇನ್ನು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಪರ ತಂಡದ ಆರಂಭಿಕ ಆಟಗಾರರಾದ ಎವಿನ್ ಲೆವಿಸ್ ಮತ್ತು ಯಶಸ್ವಿ ಜೈಸ್ವಾಲ್ ಪವರ್‌ಪ್ಲೇನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ರಾಜಸ್ಥಾನ್ ರಾಯಲ್ಸ್ ಪರ ಎವಿನ್ ಲೆವಿಸ್ 36, ಯಶಸ್ವಿ ಜೈಸ್ವಾಲ್ 49, ಲಿಯಾಮ್ ಲಿವಿಂಗ್‌ಸ್ಟನ್ 25 ಮತ್ತು ಮಹಿಪಾಲ್ ಲೊಮ್ರಾರ್ 43 (17 ಎಸೆತಗಳಲ್ಲಿ) ರನ್ ಬಾರಿಸಿದ ಕಾರಣ ತಂಡವು 20 ಓವರ್‌ಗಳಲ್ಲಿ 185 ರನ್‌ಗಳಿಗೆ ಆಲ್ ಔಟ್ ಆಯಿತು. ಇನ್ನು ರಾಜಸ್ಥಾನ್ ರಾಯಲ್ಸ್ ನೀಡಿದ 186 ರನ್‌ಗಳ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಆರಂಭಿಕ ಆಟಗಾರರಾದ ಕೆ ಎಲ್ ರಾಹುಲ್ (49) ಮತ್ತು ಮಯಾಂಕ್ ಅಗರ್ವಾಲ್ (67) ಅತ್ಯದ್ಭುತ ಓಪನಿಂಗ್ ಮಾಡಿದರು. ಹೀಗೆ ಉತ್ತಮ ಆರಂಭ ಪಡೆದುಕೊಂಡ ಪಂಜಾಬ್ ಕಿಂಗ್ಸ್ ಇನ್ನೂ ಒಂದೆರಡು ಓವರ್‌ಗಳು ಬಾಕಿ ಇರುವಾಗಲೇ ಜಯಭೇರಿ ಬಾರಿಸಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಕೊನೆಯ ಹಂತದಲ್ಲಿ ಎಡವಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿತು. ಈ ಮೂಲಕ ರಾಜಸ್ಥಾನ್ ರಾಯಲ್ಸ್ 2 ರನ್‌ಗಳ ರೋಚಕ ಜಯವನ್ನು ಸಾಧಿಸಿತು.

ಹೀಗೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಕೊನೆಯ ಹಂತದಲ್ಲಿ ಮುಸ್ತಫಿಜರ್ ರಹಮಾನ್ ಮತ್ತು ಕಾರ್ತಿಕ್ ತ್ಯಾಗಿ ನೀಡಿದ ಅತ್ಯದ್ಭುತ ಪ್ರದರ್ಶನದಿಂದ ಪಂಜಾಬ್ ಕಿಂಗ್ಸ್ ವಿರುದ್ಧ 2 ರನ್‌ಗಳ ರೋಚಕ ಗೆಲುವನ್ನು ಸಾಧಿಸಿತು. ಹೀಗೆ ಟೂರ್ನಿಯಲ್ಲಿ ತನ್ನ ನಾಲ್ಕನೇ ಜಯವನ್ನು ಸಾಧಿಸಿದ ರಾಜಸ್ಥಾನ್ ರಾಯಲ್ಸ್ 8 ಅಂಕಗಳನ್ನು ಮುಟ್ಟುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ. ರಾಜಸ್ಥಾನ್ ವಿರುದ್ಧದ ಈ ಪಂದ್ಯವನ್ನು ಪಂಜಾಬ್ ಕಿಂಗ್ಸ್ ತಂಡ ಸುಲಭವಾಗಿ ಜಯಿಸಲಿದೆ ಎಂದೇ ಎಲ್ಲರೂ ಭಾವಿಸಿದ್ದರು ಆದರೆ ಅಂತಿಮ ಕ್ಷಣದಲ್ಲಿ ರಾಜಸ್ಥಾನ್ ರಾಯಲ್ಸ್ ರೋಚಕ ಗೆಲುವನ್ನು ಸಾಧಿಸಿದೆ. ಹೀಗಿದ್ದರೂ ರಾಜಸ್ತಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ 12 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದೆ.

ಈ ಬಾರಿಯ ಐಪಿಎಲ್‌ ಟೂರ್ನಿಯ ಮಧ್ಯದಲ್ಲೇ ಕೊಹ್ಲಿ ಕೈಬಿಟ್ಟು ಹೊಸ ನಾಯಕನನ್ನು ಆರಿಸಲಿದೆ ಆರ್‌ಸಿಬಿ!?ಈ ಬಾರಿಯ ಐಪಿಎಲ್‌ ಟೂರ್ನಿಯ ಮಧ್ಯದಲ್ಲೇ ಕೊಹ್ಲಿ ಕೈಬಿಟ್ಟು ಹೊಸ ನಾಯಕನನ್ನು ಆರಿಸಲಿದೆ ಆರ್‌ಸಿಬಿ!?

ಹೌದು ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಜಯವನ್ನು ಸಾಧಿಸಿದ ಖುಷಿಯಲ್ಲಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸಾಮ್ಸನ್ ಅವರಿಗೆ ನಿಧಾನಗತಿಯ ಬೌಲಿಂಗ್ ಮಾಡಿಸಿದ ಕಾರಣ 12 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಯ ಪ್ರಕಾರ ತಂಡವೊಂದು ನಿಧಾನಗತಿಯ ಬೌಲಿಂಗ್ ಪ್ರದರ್ಶನವನ್ನು ನೀಡಿದರೆ ಆ ತಂಡದ ನಾಯಕನಿಗೆ 12 ಲಕ್ಷ ದಂಡ ವಿಧಿಸಬೇಕಾಗುತ್ತದೆ. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಬೌಲರ್‌ಗಳು ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ ಈ ರೀತಿ 12 ಲಕ್ಷ ದಂಡವನ್ನು ವಿಧಿಸಲಾಗಿದೆ.

Story first published: Wednesday, September 22, 2021, 14:33 [IST]
Other articles published on Sep 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X