ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ ರದ್ದು ಭೀತಿ; ಚೆನ್ನೈ ಆಟಗಾರರನ್ನು ಮುದುಕರಿಗೆ ಹೋಲಿಸಿದ ವಿರೇಂದ್ರ ಸೆಹ್ವಾಗ್!

IPL 2021: Second leg of the tournament should not be cancelled says Virender Sehwag

ಅತಿ ದೊಡ್ಡ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಎಂದೇ ಖ್ಯಾತಿಯನ್ನು ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ ಹದಿನಾಲ್ಕನೇ ಆವೃತ್ತಿಯು ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದಲ್ಲಿ ಆರಂಭವಾಗಿತ್ತು. ಕೊರೊನಾ ಹಾವಳಿಯಿಂದ ಬೇಸತ್ತಿದ್ದ ಜನರಿಗೆ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾದದ್ದು ದೊಡ್ಡ ಮಟ್ಟದ ಸಂತಸವನ್ನು ತಂದಿತ್ತು, ಆದರೆ ಈ ಸಂತಸ ಹೆಚ್ಚು ದಿನಗಳ ಕಾಲ ಉಳಿಯಲಿಲ್ಲ. ಹೌದು, ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಏಪ್ರಿಲ್ ತಿಂಗಳಲ್ಲಿ ಆರಂಭವಾಗಿತ್ತು, ಆ ಸಮಯಕ್ಕೆ ಭಾರತ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಹೀಗೆ ದೇಶದಾದ್ಯಂತ ಹಬ್ಬುತ್ತಿದ್ದ ಕೊರೊನಾ ವೈರಸ್ ಐಪಿಎಲ್ ಬಯೋ ಬಬಲ್ಸ್ ಒಳಗಡೆ ಕೂಡ ಪ್ರವೇಶವನ್ನು ಮಾಡಿಬಿಟ್ಟಿತ್ತು.

ತಂಡದಲ್ಲಿ ಬೇರೆ ಒಳ್ಳೊಳ್ಳೆ ಆಟಗಾರರಿದ್ದಾರೆ; ಕೊಹ್ಲಿ ನಾಯಕತ್ವ ತ್ಯಜಿಸುತ್ತಿರುವುದರ ಬಗ್ಗೆ ಸುದೀಪ್ ಮಾತುತಂಡದಲ್ಲಿ ಬೇರೆ ಒಳ್ಳೊಳ್ಳೆ ಆಟಗಾರರಿದ್ದಾರೆ; ಕೊಹ್ಲಿ ನಾಯಕತ್ವ ತ್ಯಜಿಸುತ್ತಿರುವುದರ ಬಗ್ಗೆ ಸುದೀಪ್ ಮಾತು

ಭಾರತ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 29 ಪಂದ್ಯಗಳು ಮುಗಿದ ನಂತರ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಎಷ್ಟೇ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ಬಯೋ ಬಬಲ್ ನಿರ್ಮಿಸಿದ್ದರೂ ಕೂಡ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತುಕೊಂಡ ಬಿಸಿಸಿಐ ತಕ್ಷಣವೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು.

'ದಾಖಲೆ ಮಾಡಿಬಿಟ್ರೆ ಆಗಲ್ಲ, ಪಂದ್ಯದ ದಿನ ಚೆನ್ನಾಗಿ ಆಡಬೇಕು'; ದಾಖಲೆ ಎನ್ನುವವರಿಗೆ ಕುಟುಕಿದ ರೋಹಿತ್'ದಾಖಲೆ ಮಾಡಿಬಿಟ್ರೆ ಆಗಲ್ಲ, ಪಂದ್ಯದ ದಿನ ಚೆನ್ನಾಗಿ ಆಡಬೇಕು'; ದಾಖಲೆ ಎನ್ನುವವರಿಗೆ ಕುಟುಕಿದ ರೋಹಿತ್

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಈ ಬಾರಿಯ ಐಪಿಎಲ್ ಟೂರ್ನಿಯನ್ನು ಸದ್ಯ ಯುಎಇಗೆ ಸ್ಥಳಾಂತರಿಸಲಾಗಿದ್ದು, ಸೆಪ್ಟೆಂಬರ್ 19ರ ಭಾನುವಾರದಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮುಂದುವಯುತ್ತಿದೆ. ಇನ್ನು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸಂಪೂರ್ಣವಾಗಿ ಯುಎಇ ನೆಲದಲ್ಲಿಯೇ ಯಾವುದೇ ಕೊರೋನಾ ವೈರಸ್ ಸೋಂಕಿನ ಪ್ರಕರಣವಿಲ್ಲದೇ ಯಶಸ್ವಿಯಾಗಿ ನಡೆದ ಕಾರಣ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕೂಡ ಅದೇ ರೀತಿ ಸುರಕ್ಷಿತಯಿಂದ ನಡೆಯಲಿದೆ ಎಂದೇ ಭಾವಿಸಲಾಗಿತ್ತು. ಆದರೆ ಸೆಪ್ಟೆಂಬರ್ 22ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯಕ್ಕೂ ಮುನ್ನ ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ಟಿ ನಟರಾಜನ್ ಮತ್ತು ಇನ್ನಿತರ ಆಟಗಾರರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡು ಮತ್ತೆ ಐಪಿಎಲ್ ಟೂರ್ನಿ ರದ್ದಾಗುವ ಭೀತಿಯುಂಟಾಗಿತ್ತು.

ಈ ಕುರಿತಾಗಿ ಇದೀಗ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು ಈ ಕೆಳಕಂಡಂತೆ ಮಾತನಾಡಿದ್ದಾರೆ.

ಟೂರ್ನಿ ಯಾವುದೇ ಕಾರಣಕ್ಕೂ ರದ್ದಾಗದಿರಲಿ ಎಂದ ಸೆಹ್ವಾಗ್

ಟೂರ್ನಿ ಯಾವುದೇ ಕಾರಣಕ್ಕೂ ರದ್ದಾಗದಿರಲಿ ಎಂದ ಸೆಹ್ವಾಗ್

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯಕ್ಕೂ ಮುನ್ನ ವಿವಿಧ ಆಟಗಾರರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂಬ ಸುದ್ದಿಯನ್ನು ಕೇಳಿ ಆತಂಕಕ್ಕೊಳಗಾಗಿದ್ದೆ, ಯಾವುದೇ ಕಾರಣಕ್ಕೂ ಈ ಬಾರಿಯ ಐಪಿಎಲ್ ಟೂರ್ನಿ ಮತ್ತೆ ಸ್ಥಗಿತಗೊಳ್ಳಬಾರದು ಎಂದು ವಿರೇಂದ್ರ ಸೆಹ್ವಾಗ್ ಹೇಳಿಕೆ ನೀಡಿದ್ದಾರೆ.

ಹೀಗೆ ಪದೇ ಪದೇ ಟೂರ್ನಿ ಮುಂದೂಡಲ್ಪಟ್ಟರೆ ಚೆನ್ನೈ ಆಟಗಾರರು ಮುದುಕರಾಗಿರುತ್ತಾರೆ ಎಂದ ಸೆಹ್ವಾಗ್

ಹೀಗೆ ಪದೇ ಪದೇ ಟೂರ್ನಿ ಮುಂದೂಡಲ್ಪಟ್ಟರೆ ಚೆನ್ನೈ ಆಟಗಾರರು ಮುದುಕರಾಗಿರುತ್ತಾರೆ ಎಂದ ಸೆಹ್ವಾಗ್

ಈಗಾಗಲೇ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಒಮ್ಮೆ ಮುಂದೂಡಲ್ಪಟ್ಟಿದೆ, ಈಗ ಯುಎಇಯಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿಯೂ ಕೂಡ ಕೊರೋನಾ ಸೋಂಕಿನ ಸುದ್ದಿಗಳು ಹರಿದಾಡುತ್ತಿವೆ. ಈ ಕುರಿತಾಗಿ ಪ್ರತಿಕ್ರಿಯಿಸಿರುವ ವಿರೇಂದ್ರ ಸೆಹ್ವಾಗ್ ಈ ಬಾರಿಯೂ ಐಪಿಎಲ್ ಟೂರ್ನಿಯನ್ನು ಮುಂದೂಡಿದರೆ ಹಾಗೂ ಪ್ರತಿ ಸಲ ಈ ರೀತಿಯ ಕೊರೊನಾ ಸೋಂಕಿನ ಪ್ರಕರಣಗಳು ಬಂದಾಗಲೆಲ್ಲ ಇದೇ ರೀತಿ ಈ ಬಾರಿಯ ಟೂರ್ನಿಯನ್ನು ಮುಂದೂಡುತ್ತಾ ಹೋದರೆ ಮುಂದೊಂದು ದಿನ ಈ ಬಾರಿಯ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯ ನಡೆಯುವ ಸಮಯಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರೆಲ್ಲಾ ಮುದುಕರಾಗಿರುತ್ತಾರೆ ಹಾಗೂ ಅವರು ವಿಮಾನ ಪ್ರಯಾಣ ಮಾಡುವಾಗ ಕಡಿಮೆ ಮೊತ್ತದ ಟಿಕೆಟ್ ಖರೀದಿಸಿ ಪ್ರಯಾಣಿಸಬಹುದು ಎಂದು ಹಾಸ್ಯಾಸ್ಪದವಾಗಿ ವಿರೇಂದ್ರ ಸೆಹ್ವಾಗ್ ಹೇಳಿದ್ದಾರೆ.

Rishab Pant ಅವರನ್ನು Sehwagಗೆ ಹೋಲಿಸಿದವರು ಯಾರು | Oneindia Kannada
ಕಪ್ ಗೆಲ್ಲಬಹುದಾದ 2 ತಂಡಗಳನ್ನು ಹೆಸರಿಸಿದ ಸೆಹ್ವಾಗ್

ಕಪ್ ಗೆಲ್ಲಬಹುದಾದ 2 ತಂಡಗಳನ್ನು ಹೆಸರಿಸಿದ ಸೆಹ್ವಾಗ್

ಇನ್ನು ಈ ಹಿಂದೆ ಮಾತನಾಡಿದ್ದ ವಿರೇಂದ್ರ ಸೆಹ್ವಾಗ್ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಅಥವಾ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ವಿಜೇತ ತಂಡವಾಗಿ ಹೊರ ಹೊಮ್ಮಲಿದ್ದು ಟ್ರೋಫಿಯನ್ನು ಗೆಲ್ಲಬಹುದಾದ ತಂಡಗಳಾಗಿವೆ ಎಂದು ಭವಿಷ್ಯ ನುಡಿದಿದ್ದರು.

Story first published: Thursday, September 23, 2021, 18:01 [IST]
Other articles published on Sep 23, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X