IPL 2021 2ನೇ ಹಂತ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು: ಸೆಪ್ಟೆಂಬರ್ 19ರಿಂದ ಮತ್ತೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹಬ್ಬ ಆರಂಭವಾಗಲಿದೆ. ಭಾರತದಲ್ಲಿ ಕಳೆದ ಏಪ್ರಿಲ್ 9ಕ್ಕೆ ಆರಂಭಗೊಂಡಿದ್ದ 2021ರ ಐಪಿಎಲ್ ಆವೃತ್ತಿ ಮೇ ತಿಂಗಳಲ್ಲಿ ಅರ್ಧಕ್ಕೆ ನಿಲ್ಲಿಸಲ್ಪಟ್ಟಿತ್ತು. ಕೋವಿಡ್-19 ಕಾರಣದಿಂದಾಗಿ ಅರ್ಧಕ್ಕೆ ನಿಲ್ಲಿಸಲ್ಪಟ್ಟಿದ್ದ ಐಪಿಎಲ್ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಮತ್ತೆ ಶುರುವಾಗಲಿದೆ. ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರ ವರೆಗೆ ಐಪಿಎಲ್ ದ್ವಿತೀಯ ಹಂತದ ಸ್ಪರ್ಧೆಗಳು ನಡೆಯಲಿವೆ.
ಐಪಿಎಲ್ ಆರಂಭಿಕ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಐಪಿಎಲ್ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿತ್ತು. 7 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 2ರಲ್ಲಿ ಸೋತು -0.171 ರೇಟಿಂಗ್ ಪಾಯಿಂಟ್ಸ್ ಕಲೆ ಹಾಕಿತ್ತು. ಐಪಿಎಲ್ ದ್ವಿತೀಯ ಹಂತದಲ್ಲಿ ಆರ್‌ಸಿಬಿ ಸಂಪೂರ್ಣ ವೇಳಾಪಟ್ಟಿ ಕೆಳಗಿದೆ.

ಆರಂಭಿಕ ಪಂದ್ಯದಲ್ಲಿ ಆರ್‌ಸಿಬಿಗೆ ಕೆಕೆಆರ್ ಎದುರಾಳಿ
ಈ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಒಂದು ಬಾರಿಯೂ ಕಪ್ ಗೆಲ್ಲದ ತಂಡವೆಂಬ ಹಣೆಪಟ್ಟಿಯನ್ನು ಬಿಚ್ಚಿ ಕೆಳಗಿಡಲು ಆರ್‌ಸಿಬಿಗೆ ಒಳ್ಳೆಯ ಅವಕಾಶವಿದೆ. ಆದರೆ ಇನ್ನುಳಿದ ಪಂದ್ಯಗಳಲ್ಲಿ ಆರ್‌ಸಿಬಿ ಉತ್ತಮ ಪ್ರದರ್ಶನ ನೀಡಬೇಕಷ್ಟೆ. ಈ ಬಾರಿ ಆರ್‌ಸಿಬಿ ತಂಡಕ್ಕೆ ಹೊಸ ಬಲಿಷ್ಠ ಆಟಗಾರರು ಸೇರ್ಪಡೆಯಾಗಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರೆ ತಂಡ ಅಂಕಪಟ್ಟಿಯಲ್ಲಿ ಮೇಲೇರುವ ನಿರೀಕ್ಷೆಯಿದೆ. 2016, 2011, 2009ರಲ್ಲಿ ರನ್ನರ್ಸ್ ಪ್ರಶಸ್ತಿ ಗೆದ್ದಿದ್ದ ಆರ್‌ಸಿಬಿ ಒಮ್ಮೆಯೂ ಟ್ರೋಫಿ ಜಯಿಸಿಲ್ಲ. ಐಪಿಎಲ್ ದ್ವಿತೀಯ ಹಂತದಲ್ಲಿ ಸೆಪ್ಟೆಂಬರ್ 20ರಂದು ಆರ್‌ಸಿಬಿ ಮೊದಲ ಪಂದ್ಯವನ್ನಾಡಲಿದೆ. ಆರಂಭಿಕ ಪಂದ್ಯವಾಗಿ ಆರ್‌ಸಿಬಿ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ಸವಾಲು ಸ್ವೀಕರಿಸಲಿದೆ. 7.30 pmಗೆ ಈ ಪಂದ್ಯ ನಡೆಯಲಿದೆ.

27 ದಿನಗಳವರೆಗೆ ದ್ವಿತೀಯ ಹಂತದ ಐಪಿಎಲ್ ಟೂರ್ನಿ
ಐಪಿಎಲ್ ಆರಂಭಿಕ ಹಂತದಲ್ಲಿ ಭಾರತದಲ್ಲಿ ಒಟ್ಟು 29 ಪಂದ್ಯಗಳು ನಡೆದಿದ್ದವು. ಇನ್ನು 31 ಪಂದ್ಯಗಳು ಯುಎಇಯಲ್ಲಿ ನಡೆಯಲಿದೆ. ಐಪಿಎಲ್ ಫ್ರಾಂಚೈಸಿಗಳಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದರಿಂದ ಅನಿವಾರ್ಯವಾಗಿ ಟೂರ್ನಿ ಅರ್ಧಕ್ಕೆ ನಿಲ್ಲಿಸಲ್ಪಟ್ಟು ಮುಂದೂಡಲಾಗಿತ್ತು. ನಡೆಯಲಿರುವ 31 ಪಂದ್ಯಗಳಲ್ಲಿ 13 ಪಂದ್ಯಗಳು ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಪಂದ್ಯಗಳು ಇದೇ ಸ್ಟೇಡಿಯಂನಲ್ಲಿ ನಡೆಯಲಿವೆ. ಶಾರ್ಜಾ ಸ್ಟೇಡಿಯಂನಲ್ಲಿ 10 ಪಂದ್ಯಗಳು ನಡೆಯಲಿವೆ. ಇದರಲ್ಲಿ ದ್ವಿತೀಯ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯ ಸೇರಿದೆ. ಐಪಿಎಲ್ ದ್ವಿತೀಯ ಹಂತದ ಐಪಿಎಲ್ ಪಂದ್ಯಗಳ ವೇಳೆ ಒಟ್ಟು 7 ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ. ಸುಮಾರು 27 ದಿನಗಳ ಕಾಲ ದ್ವಿತೀಯ ಹಂತದ ಐಪಿಎಲ್ ನಡೆಯಲಿದೆ. ಅಂದ್ಹಾಗೆ ಐಪಿಎಲ್ ದ್ವಿತೀಯ ಹಂತದ ಉದ್ಘಾಟನಾ ಪಂದ್ಯದಲ್ಲಿ ಅಂದರೆ ಸೆಪ್ಟೆಂಬರ್ 19ಕ್ಕೆ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2021 ವೇಳಾಪಟ್ಟಿ
* ಸೆಪ್ಟೆಂಬರ್ 20: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತಾ ನೈಟ್ ರೈಡರ್ಸ್, ರಾತ್ರಿ 7.30
* ಸೆಪ್ಟೆಂಬರ್ 24: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್, ರಾತ್ರಿ 7.30
* ಸೆಪ್ಟೆಂಬರ್ 26: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್, ರಾತ್ರಿ 7.30 ಕ್ಕೆ
* ಸೆಪ್ಟೆಂಬರ್ 29: ರಾಜಸ್ಥಾನ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸಂಜೆ 7.30 ಕ್ಕೆ
* ಅಕ್ಟೋಬರ್ 3: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್, ಮಧ್ಯಾಹ್ನ 3.30 ಕ್ಕೆ
* ಅಕ್ಟೋಬರ್ 6: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್, ಸಂಜೆ 7.30 ಕ್ಕೆ
* ಅಕ್ಟೋಬರ್ 8: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್, ಸಂಜೆ 7.30 ಕ್ಕೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications