For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಡೆಲ್ಲಿ ಕ್ಯಾಪಿಟಲ್ಸ್‌ನ ಶಿಖರ್ ಧವನ್ ವಿಶೇಷ ದಾಖಲೆ

IPL 2021: Shikhar Dhawan creates record for scoring 400+ runs in an IPL innings

ದುಬೈ: ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಅನುಭವಿ ಬ್ಯಾಟ್ಸ್‌ಮನ್ ಶಿಖರ್ ಧವನ್ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌)ನಲ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಐಪಿಎಲ್‌ ಸೀಸನ್ ಒಂದರಲ್ಲಿ ಅತೀ ಹೆಚ್ಚು ಬಾರಿ 400+ ರನ್ ಬಾರಿಸಿದ ದಾಖಲೆಗಾಗಿ ಧವನ್ ಗಮನ ಸೆಳೆದಿದ್ದಾರೆ.

ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಬುಧವಾರ (ಸೆಪ್ಟೆಂಬರ್ 22) ನಡೆದ ಐಪಿಎಲ್ 33ನೇ ಪಂದ್ಯದಲ್ಲಿ ಸನ್ ರೈಸರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ವೇಳೆ ಡೆಲ್ಲಿ ಬ್ಯಾಟ್ಸ್‌ಮನ್‌ ಶಿಖರ್ ಧವನ್ 37 ಎಸೆತಗಳಲ್ಲಿ 42 ರನ್ ಬಾರಿಸಿದ್ದರು. ಈ ರನ್ ಮೂಲಕ ಸೀಸನ್‌ನಲ್ಲಿ 400+ ರನ್ ಗಳಿಸಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಸೀಸನ್‌ ಒಂದರಲ್ಲಿ ಅತೀ ಹೆಚ್ಚು ಸಾರಿ 400+ ರನ್ ಬಾರಿಸಿದ ದಾಖಲೆ ಪಟ್ಟಿಯಲ್ಲಿ ಧವನ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. 8 ಸೀಸನ್‌ಗಳಲ್ಲಿ ಧವನ್ 400+ ರನ್ ಗಳಿಸಿದ್ದಾರೆ. ಈ ದಾಖಲೆ ಪಟ್ಟಿಯಲ್ಲಿ ಬ್ಯಾಟ್ಸ್‌ಮನ್‌ ಸುರೇಶ್ ರೈನಾ 9 ಬಾರಿ 400+ ರನ್ ಬಾರಿಸಿ ಮೊದಲ ಸ್ಥಾನದಲ್ಲಿದ್ದಾರೆ.

ಐಪಿಎಲ್ ಸೀಸನ್‌ನಲ್ಲಿ ಹೆಚ್ಚು ಬಾರಿ 400+ ರನ್ ಬಾರಿಸಿದವರಲ್ಲಿ ತೃತೀಯ ಸ್ಥಾನದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಡೇವಿಡ್ ವಾರ್ನರ್ ಇದ್ದಾರೆ. ಮೂವರೂ 7 ಬಾರಿ ಈ ಸಾಧನೆ ಮಾಡಿದ್ದಾರೆ. ಅಂದ್ಹಾಗೆ, ಬುಧವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಹೈದರಾಬಾದ್ 134 ರನ್ ಗಳಿಸಿತ್ತು. ಡೆಲ್ಲಿ 139 ರನ್ ಬಾರಿಸಿ 8 ವಿಕೆಟ್ ಗೆಲುವನ್ನಾಚರಿಸಿತು.

Story first published: Thursday, September 23, 2021, 9:50 [IST]
Other articles published on Sep 23, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+