ಐಪಿಎಲ್ 2021: ವಿರಾಟ್ ಕೊಹ್ಲಿ ದಾಖಲೆ ಮುರಿದ ಶಿಖರ್ ಧವನ್

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 11ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ನಡೆದಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಶಿಖರ್ ಧವನ್ ನೂತನ ದಾಖಲೆಯನ್ನು ನಿರ್ಮಿಸಿದ್ದಾರೆ. ಹೌದು ಶಿಖರ್ ಧವನ್ ಈ ಹಿಂದೆ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟುವ ಮೂಲಕ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 196 ರನ್‌ಗಳ ಗುರಿಯನ್ನು ನೀಡಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಬಂದ ಪೃಥ್ವಿ ಶಾ ಮತ್ತು ಶಿಖರ್ ಧವನ್ ಉತ್ತಮ ಆರಂಭವನ್ನು ನೀಡಿದರು. ಧವನ್ 49 ಎಸೆತಗಳಿಗೆ 92 ರನ್ ಗಳಿಸಿ ಮಿಂಚಿದರು. ಈ ಮೂಲಕ ಧವನ್ 45ನೇ ಬಾರಿ 50ಕ್ಕಿಂತ ಹೆಚ್ಚು ರನ್ ಗಳಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದರು.
ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ 50+ ರನ್ ಬಾರಿಸಿರುವ ಭಾರತದ ಆಟಗಾರ ಎಂಬ ಕೀರ್ತಿಗೆ ಶಿಖರ್ ಧವನ್ ಪಾತ್ರರಾಗಿದ್ದಾರೆ. ಶಿಖರ್ ಧವನ್ ಹೊರತುಪಡಿಸಿ ವಿರಾಟ್ ಕೊಹ್ಲಿ 44, ಸುರೇಶ್ ರೈನಾ 40 ಮತ್ತು ರೋಹಿತ್ ಶರ್ಮಾ 40 ಬಾರಿ 50ಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications